DK Shivakumar: "ಡಿಸಿಎಂ ಡಿ.ಕೆ ಶಿವಕುಮಾರ್ ಪರವಾಗಿ 55 ಜನ ಕಾಂಗ್ರೆಸ್ ಶಾಸಕರು" ರಹಸ್ಯ ಬಿಚ್ಚಿಟ್ಟ ಪ್ರಭಾವಿ ಶಾಸಕ
DK Shivakumar: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ, ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಬಗ್ಗೆ ಕಳೆದ ಎರಡೂವರೆ ವರ್ಷದಿಂದಲೂ ಚರ್ಚೆ ಆಗುತ್ತಿದೆ. ಇದೀಗ ಸಂಕ್ರಾಂತಿಯಲ್ಲ, ವಿಧಾನಸಭೆ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಪ್ರಮುಖ ಶಾಸಕರೊಬ್ಬರು ಹೇಳಿದ್ದಾರೆ.
ಹೌದು ಕಾಂಗ್ರೆಸ್ನಲ್ಲಿ ಔತಣಕೂಟ ರಾಜಕೀಯ ನಡೆಯುತ್ತಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಡಿ.ಕೆ ಶಿವಕುಮಾರ್ ಅವರು ಶೀಘ್ರ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರ ಆಪ್ತ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಹೇಳಿದ್ದಾರೆ. ಈಚೆಗೆ ಮುಖ್ಯಮಂತ್ರಿ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಆಡಳಿತ ನಡೆಸಲಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಹೆಚ್ಚಾಗಿದೆ.

ಇದೀಗ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿದ್ದೇನಲ್ಲವೇ ಅದೇ ರೀತಿ ಡಿ.ಕೆ .ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದೆ ಅವರೂ ಸಹ ಮುಖ್ಯಮಂತ್ರಿ ಆಗಲಿದ್ದಾರೆ ಎಂದಿದ್ದಾರೆ. ಗುರುವಾರ ನಾವು 55 ಜನ ಶಾಸಕರು ಊಟಕ್ಕೆ ಸೇರಿದ್ದೆವು. ಎಲ್ಲರೂ ಸೇರಿ ಊಟ ಮಾಡಿದ್ವಿ ಅಷ್ಟೇ. ನಮಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇದೆ. ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಕಷ್ಟಕ್ಕೆ ಫಲ ಸಿಗಲಿದೆ!
ಇನ್ನು ಮುಂದುವರಿದು ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶ್ರಮ ಪಟ್ಟಿದ್ದಾರೆ. ಡಿ.ಕೆ .ಶಿವಕುಮಾರ್ ಅವರ ಕಷ್ಟಪಟ್ಟಿರುವುದಕ್ಕೆ ಫಲ ಸಿಗಲಿದೆ. ಅಧಿವೇಶನ ಮುಕ್ತಾಯವಾದ ನಂತರ ಆದಷ್ಟು ಬೇಗ ಆ ಫಲ ಸಿಗಲಿದೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಂಬರ್ ಮುಖ್ಯ ಅಲ್ಲ, ಆದರೆ ಹೈಕಮಾಂಡ್ನ ನಿರ್ದೇಶನ ಮುಖ್ಯವಾಗುತ್ತದೆ. ಹೈಕಮಾಂಡ್ ಎಲ್ಲದಕ್ಕೂ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೈಕಮಾಂಡ್ ಹೇಳಿದರೆ ಯಾರು ಯಾಕೆ ಕೇಳಲ್ಲ ಎಂದು ಪ್ರಶ್ನೆ ಮಾಡಿರುವ ಅವರು, ಸಂಖ್ಯಾಬಲ ಮುಖ್ಯ ಅಲ್ಲ ಎಂದೂ ಹೇಳಿದ್ದಾರೆ.
ರಾಜಕೀಯ ಚರ್ಚೆ ಆಗಿಲ್ಲ
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ 50 ರಿಂದ 60 ಜನ ಶಾಸಕರು ಸೇರಿದ್ದೆವು ಡಿ.ಕೆ.ಶಿವಕುಮಾರ್ ಕರೆದರೆ ಎಲ್ಲಾ 224 ಜನ ಶಾಸಕರೂ ಔತಣಕೂಟಕ್ಕೆ ಬರುತ್ತಾರೆ. ಕಾಂಗ್ರೆಸ್, ಜೆಡಿಎಸ್ ಅಥವಾ ಬಿಜೆಪಿ ಎಂದಲ್ಲ. ವಿಶ್ವಾಸ ಮತ್ತು ಪ್ರೀತಿ ಒಂದು ಬಾಂಧವ್ಯ ಎಂದು ಅವರು ಹೇಳಿದ್ದಾರೆ. ಆದರೆ ನೆನ್ನೆ ನಡೆದ ಔತಣ ಕೂಟದಲ್ಲಿ ರಾಜಕೀಯ ವಿಚಾರ ಚರ್ಚೆ ಆಗಿಲ್ಲ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications