ಕರ್ನಾಟಕದ 18 ಜಿಲ್ಲೆಗಳಲ್ಲಿ ಒಂದಂಕಿ ಕೊರೊನಾವೈರಸ್ ಪ್ರಕರಣ

ಬೆಂಗಳೂರು, ಜನವರಿ.28: ಕರ್ನಾಟಕದಲ್ಲಿ ಒಂದು ಕಾಲದಲ್ಲಿ ರೌದ್ರನರ್ತನ ಮಾಡಿದ್ದ ಕೊರೊನಾವೈರಸ್ ಕಾಟ ಕೊಂಚ ಕಡಿಮೆಯಾಗಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಒಂದಂಕಿಯ ಹೊಸ ಪ್ರಕರಣಗಳು ಪತ್ತೆಯಾಗಿರುವುದು ಕೊಂಚ ನೆಮ್ಮದಿ ತಂದಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 550 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 937933ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ನಿಂದ ಇಬ್ಬರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12209ಕ್ಕೆ ಏರಿಕೆ ಆಗಿದೆ.

ಸೂಪರ್ ಸುದ್ದಿ: ಭಾರತದ 146 ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳೇ ಇಲ್ಲ!
ಗುರುವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 937933 ಸೋಂಕಿತ ಪ್ರಕರಣಗಳ ಪೈಕಿ 919503 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲೇ 644 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 6202 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

550 New Coronavirus Cases Reported in Karnataka Today, State Tally Rise to 937933

ರಾಜ್ಯದ 18 ಜಿಲ್ಲೆಗಳಲ್ಲಿ ಒಂದಂಕಿ ಕೊವಿಡ್-19 ಪ್ರಕರಣ:
ರಾಜ್ಯದಲ್ಲಿ ಒಟ್ಟು 550 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಅಷ್ಟಾಗಿಯೂ ರಾಜ್ಯ 18 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗಿಂತ ಹೆಚ್ಚಾಗಿಲ್ಲ. ಈ ಪೈಕಿ ಬಾಗಲಕೋಟೆ 4, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು 311, ಬೀದರ್ 5, ಚಾಮರಾಜನಗರ 5, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 2, ಚಿತ್ರದುರ್ಗ 15, ದಕ್ಷಿಣ ಕನ್ನಡ 34, ದಾವಣಗೆರೆ 3, ಧಾರವಾಡ 5, ಗದಗ 0, ಹಾಸನ 12, ಹಾವೇರಿ 1, ಕಲಬುರಗಿ 16, ಕೊಡಗು 22, ಕೋಲಾರ 9, ಕೊಪ್ಪಳ 0, ಮಂಡ್ಯ 4, ಮೈಸೂರು 19, ರಾಯಚೂರು 0, ರಾಮನಗರ 2, ಶಿವಮೊಗ್ಗ 10, ತುಮಕೂರು 18, ಉಡುಪಿ 13, ಉತ್ತರ ಕನ್ನಡ 9, ವಿಜಯಪುರ 2, ಯಾದಗಿರಿ 2 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+