ಕರ್ನಾಟಕ ಚುನಾವಣೆಗೆ 5500 ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ನಿಯೋಜನೆ: ಪ್ರಯಾಣಿಕರಿಗೆ ತೊಂದರೆ ಸಾಧ್ಯತೆ
ಬೆಂಗಳೂರು, ಮೇ. 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಚುನಾವಣಾ ಕರ್ತವ್ಯಕ್ಕಾಗಿ ಸಾವಿರಾರು ಬಸ್‌ಗಳನ್ನು ಮೀಸಲಿಟ್ಟಿದೆ. ಇದೇ ಕಾರಣಕ್ಕೆ ಮೇ 9 ಮತ್ತು 10 ರಂದು ಕರ್ನಾಟಕದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಸಮಸ್ಯೆಗಳು ಉಂಟಾಗಲಿವೆ.
ಎರಡು ನಿಗಮಗಳು ನೀಡಿರುವ ಪ್ರತ್ಯೇಕ ಹೇಳಿಕೆಗಳ ಪ್ರಕಾರ, ಚುನಾವಣಾ ಕರ್ತವ್ಯಕ್ಕಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಾಕಷ್ಟು ಸಂಖ್ಯೆಯ ಬಸ್‌ಗಳನ್ನು ಒದಗಿಸಲಾಗುವುದು. ಇದರಿಂದಾಗಿ ಆ ಎರಡು ದಿನಗಳಲ್ಲಿ ಬಸ್‌ಗಳ ಕೊರತೆ ಉಂಟಾಗುತ್ತದೆ. ಕಾರ್ಯಾಚರಣೆಯಲ್ಲಿನ ಅಡಚಣೆಯ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಕೆಎಸ್‌ಆರ್‌ಟಿಸಿ, ಜನರು ತಮ್ಮ ಪ್ರಯಾಣವನ್ನು ಮಾರ್ಗಸೂಚಿಗೆ ಅನುಗುಣವಾಗಿ ಯೋಜಿಸುವಂತೆ ಕೇಳಿಕೊಂಡಿದ್ದಾರೆ.

ಮೇ 6 ರ ಹೊತ್ತಿಗೆ, ಕೆಎಸ್‌ಆರ್‌ಟಿಸಿ 3,700 ಬಸ್‌ಗಳನ್ನು (ಸುಮಾರು 46%) ನಿಯೋಜಿಸಲು ವಾಗ್ದಾನ ನೀಡಿದ್ದರೆ, ಬಿಎಂಟಿಸಿ 1,868 ಬಸ್‌ಗಳನ್ನು (ಸುಮಾರು 28%) ಚುನಾವಣಾ ಕರ್ತವ್ಯಗಳಿಗೆ ನೀಡಲು ಬದ್ಧವಾಗಿದೆ. ಈ ಕ್ರಮವು ಮೇ 10 ರಂದು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಭಾಗವಾಗಿದೆ. ಚುನಾವಣಾ ಪ್ರಕ್ರಿಯೆಗೆ ಸುಗಮ ಸಾರಿಗೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಎರಡು ವಿಭಾಗಗಳು ಹೊಂದಿದೆ.
ನಿಯೋಜಿತ ಬಸ್ಸುಗಳನ್ನು ಪೊಲೀಸ್ ಅಧಿಕಾರಿಗಳು, ಚುನಾವಣಾ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿ ಮತ್ತು ಚುನಾವಣೆಗೆ ಬೇಕಾದ ಸಾಮಗ್ರಿಗಳನ್ನು ಸಾಗಿಸಲು ಬಳಸಲಾಗುತ್ತದೆ.
''ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಚುನಾವಣಾ ಕರ್ತವ್ಯಕ್ಕೆ ಕೆಎಸ್‌ಆರ್‌ಟಿಸಿ ಸಾಕಷ್ಟು ಸಂಖ್ಯೆಯ ಬಸ್‌ಗಳನ್ನು ನಿಯೋಜಿಸಿದೆ. ಹೀಗಾಗಿ 2023ರ ಮೇ 9 ಮತ್ತು 10ರಂದು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಸುವ ಸಾರ್ವಜನಿಕರು ಸಹಕರಿಸಲು ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ವಿನಂತಿಸಲಾಗಿದೆ "ಎಂದು ಕೆಎಸ್‌ಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರ ಪತ್ರಿಕಾ ಟಿಪ್ಪಣಿ ತಿಳಿಸಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯುವ ಗುರಿ ಹೊಂದಿರುವ ಬಿಜೆಪಿ ಕರ್ನಾಟಕ ವಿಧಾನಸಭೆಯ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಕಾಂಗ್ರೆಸ್ 223 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.












Click it and Unblock the Notifications