ಚುನಾವಣೆ ಕಣಕ್ಕಿಳಿದಿದ್ದಾರೆ 559 ಅಭ್ಯರ್ಥಿಗಳು

ಬೆಂಗಳೂರು, ಮಾ.27 : ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯ ಬುಧವಾರಕ್ಕೆ ಅಂತ್ಯಗೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜ್ಯದಲ್ಲಿ 559 ಮಂದಿ ಅಭ್ಯರ್ಥಿಗಳು 845 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮಾರ್ಚ್ 29 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ, ನಾಮಪತ್ರ ಸಲ್ಲಿಸಲು ಕೊನೆಯದಿನಾದ ಬುಧವಾರ 225 ಅಭ್ಯರ್ಥಿಗಳು 380 ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಿದರು. ಗುರುವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾರ್ಚ್ 29ರ ಶನಿವಾರ ನಾಮಪತ್ರ ವಾಪಸ್‌ ಪಡೆಯಲು ಅಂತಿಮ ದಿನವಾಗಿದೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯ ವಿವರಗಳು [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಬಹುದು

ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಬಹುದು

ಮಾ.26ರ ಕೊನೆಯ ದಿನ 225 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದಾಗಿ ಅಂತಿಮವಾಗಿ ಎಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆಂದು ಖಚಿತವಾಗಿಲ್ಲ. ಅಂತಿಮ ಮಾಹಿತಿ ಬಂದ ಬಳಿಕ ಈ ಸಂಖ್ಯೆಯಲ್ಲಿ ಹೆಚ್ಚಳವಾಗಬಹುದು ಎಂದು ಅನಿಲ್ ಕುಮಾರ್ ಝಾ ಹೇಳಿದ್ದಾರೆ.

ಘಟಾನುಘಟಿಗಳಿಂದ ನಾಮಪತ್ರ

ಘಟಾನುಘಟಿಗಳಿಂದ ನಾಮಪತ್ರ

ಬುಧವಾರ ಚಿಕ್ಕಬಳ್ಳಾಪುರದಿಂದ ಎಚ್‌.ಡಿ. ಕುಮಾರಸ್ವಾಮಿ, ಬಳ್ಳಾರಿಯಿಂದ ಬಿ. ಶ್ರೀರಾಮುಲು ಬಳ್ಳಾರಿಯಿಂದ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡದಿಂದ ಕಾಂಗ್ರೆಸ್‌ ಅಭ್ಯರ್ಥಿ ಜನಾರ್ದನ ಪೂಜಾರಿ, ಮಂಡ್ಯದಲ್ಲಿ ರಮ್ಯಾ, ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಶಾಂತ್‌ ದೇಶಪಾಂಡೆ, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ನಿಂದ ಪ್ರಕಾಶ್‌ ಬಿ. ಹುಕ್ಕೇರಿ ಮುಂತಾದವರು ನಾಮಪತ್ರ ಸಲ್ಲಿಸಿದ ಪ್ರಮುಖರು.

ಒಟ್ಟು ನಾಮಪತ್ರ

ಒಟ್ಟು ನಾಮಪತ್ರ

ಚುನಾವಣೆ ಅಧಿಸೂಚನೆ ಪ್ರಕಟವಾದ ಏಳು ದಿನಗಳಲ್ಲಿ ರಾಜ್ಯದಲ್ಲಿ 559 ಮಂದಿ ಅಭ್ಯರ್ಥಿಗಳು 845 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅಂತಿಮ ದಿನವಾದ ಬುಧವಾರವೇ 225 ಅಭ್ಯರ್ಥಿಗಳು 380 ನಾಮಪತ್ರ ಸಲ್ಲಿಸಿದ್ದಾರೆ.

ಶನಿವಾರ ಹಿಂಪಡೆಯಲು ಕೊನೆಯ ದಿನ

ಶನಿವಾರ ಹಿಂಪಡೆಯಲು ಕೊನೆಯ ದಿನ

ಗುರುವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ಮಾರ್ಚ್ 29ರ ಶನಿವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಂದು ಸಂಜೆ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಕುರಿತು ಅಂತಿಮ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ. ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಮೇ 16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+