ಶುಭಸುದ್ದಿ: ಕರ್ನಾಟಕದಲ್ಲಿ ಒಂದೇ ದಿನ 5407 ಸೋಂಕಿತರು ಗುಣಮುಖ

ಬೆಂಗಳೂರು, ಆಗಸ್ಟ್.05: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯ ಜೊತೆ ಜೊತೆಗೆ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 5407 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Recommended Video

      SP Balasubrahmanyam tested positive for coronavirus | Oneindia Kannada

      ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 5619 ಮಂದಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 151449ಕ್ಕೆ ಏರಿಕೆಯಾಗಿದೆ.

      ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದೆ. ರಾಜ್ಯದಲ್ಲಿ ಒಂದೇ ದಿನ ಮಹಾಮಾರಿಗೆ 100 ಮಂದಿ ಪ್ರಾಣ ಬಿಟ್ಟಿದ್ದು, ಕೊವಿಡ್-19ಗೆ ಬಲಿಯಾದವರ ಸಂಖ್ಯೆಯು 2804ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 5407 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 74679 ಮಂದಿ ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ರಾಜ್ಯದಲ್ಲಿ 73958 ಸಕ್ರಿಯ ಪ್ರಕರಣಗಳಿವೆ.

      ಒಂದೇ ದಿನ ರಾಜ್ಯದಲ್ಲಿ ಎಷ್ಟು ಜನರ ತಪಾಸಣೆ?

      ಒಂದೇ ದಿನ ರಾಜ್ಯದಲ್ಲಿ ಎಷ್ಟು ಜನರ ತಪಾಸಣೆ?

      ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 27734 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 15904 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 43638 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 1532654 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

      ಸಿಲಿಕಾನ್ ಸಿಟಿಯಲ್ಲಿ 1848 ಮಂದಿಗೆ ಕೊರೊನಾವೈರಸ್

      ಸಿಲಿಕಾನ್ ಸಿಟಿಯಲ್ಲಿ 1848 ಮಂದಿಗೆ ಕೊರೊನಾವೈರಸ್

      ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲೇ ಸಿಲಿಕಾನ್ ಸಿಟಿಯಲ್ಲಿ 1848 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 64881ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 29 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1163ಕ್ಕೆ ಏರಿಕೆಯಾಗಿದೆ.

      ರಾಜ್ಯದ ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?

      ರಾಜ್ಯದ ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?

      ರಾಜ್ಯದಲ್ಲಿ ಒಟ್ಟು 5619 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, 16 ಜಿಲ್ಲೆಗಳಲ್ಲಿ 100ಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು 1848, ಬಳ್ಳಾರಿ 631, ಬೆಳಗಾವಿ 293, ಮೈಸೂರು 261, ದಾವಣಗೆರೆ 224, ಧಾರವಾಡ 199, ಕಲಬುರಗಿ 197, ಉಡುಪಿ 173, ಕೊಪ್ಪಳ 154, ದಕ್ಷಿಣ ಕನ್ನಡ 149, ಬಾಗಲಕೋಟೆ 149, ಹಾಸನ 137, ಚಿಕ್ಕಬಳ್ಳಾಪುರ 129, ಉತ್ತರ ಕನ್ನಡ 125, ಮಂಡ್ಯ 123, ಬೆಂಗಳೂರು ಗ್ರಾಮಾಂತರ 110, ರಾಯಚೂರು 91, ಗದಗ 78, ಯಾದಗಿರಿ 71, ವಿಜಯಪುರ 66, ಬೀದರ್ 52, ಕೋಲಾರ 49, ಚಿಕ್ಕಮಗಳೂರು 48, ರಾಮನಗರ 45, ಚಾಮರಾಜನಗರ 38, ಶಿವಮೊಗ್ಗ 35, ತುಮಕೂರು 31, ಚಿತ್ರದುರ್ಗ 24, ಕೊಡಗು 13 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.

      ರಾಜ್ಯದಲ್ಲಿ 24 ಗಂಟೆಗಳಲ್ಲಿ 5407 ಸೋಂಕಿತರು ಗುಣಮುಖ

      ರಾಜ್ಯದಲ್ಲಿ 24 ಗಂಟೆಗಳಲ್ಲಿ 5407 ಸೋಂಕಿತರು ಗುಣಮುಖ

      ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ಸೋಂಕಿತರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗುತ್ತಿದೆ. ರಾಜ್ಯದಲ್ಲಿ ಗುಣಮುಖರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 5407 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರ 3083, ಕಲಬುರಗಿ 353, ಧಾರವಾಡ 279, ಬಳ್ಳಾರಿ 152, ಕೋಲಾರ 150, ಮೈಸೂರು 112, ರಾಯಚೂರು 110, ಗದಗ 108, ದಾವಣಗೆರೆ 91, ಮಂಡ್ಯ 90, ಉಡುಪಿ 89, ದಕ್ಷಿಣ ಕನ್ನಡ 82, ಹಾಸನ 82, ಉತ್ತರ ಕನ್ನಡ 78, ವಿಜಯಪುರ 63, ಚಿಕ್ಕಬಳ್ಳಾಪುರ 62, ಬೆಳಗಾವಿ 52, ಬಾಗಲಕೋಟೆ 42, ಚಿತ್ರದುರ್ಗ 42, ಶಿವಮೊಗ್ಗ 41, ಬೆಂಗಳೂರು ಗ್ರಾಮಾಂತರ 40, ಯಾದಗಿರಿ 39, ಚಾಮರಾಜನಗರ 28, ಕೊಪ್ಪಳ 25, ಚಿಕ್ಕಮಗಳೂರು 19, ಕೊಡಗು 19, ಬೀದರ್ 14, ರಾಮನಗರ 14, ತುಮಕೂರು 9 ಮಂದಿ ಗುಣಮುಖರಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+