ಕರ್ನಾಟಕ; ಮೂರು ವರ್ಷದಲ್ಲಿ 571 ಬಾಲ್ಯ ವಿವಾಹ
ಬೆಂಗಳೂರು, ಮಾರ್ಚ್ 24; ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ ಎಂದು ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ. ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ.
ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜ್ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಉತ್ತರ ನೀಡಿದ್ದಾರೆ.
2018-19 ರಿಂದ 2020-21ರ ತನಕ ರಾಜ್ಯದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ. 417 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ ಯಾವುದೇ ಬಾಲ್ಯ ವಿವಾಹ ಪ್ರಕರಣ ದಾಖಲಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.

ರಾಷ್ಟ್ರೀಯ ಅಪರಾಧ ಪ್ರಕರಣಗಳ ಬ್ಯರೊ (ಎನ್‌ಸಿಆರ್‌ಬಿ) ವರದಿಯ ಪ್ರಕಾರ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.
ರಾಜ್ಯದಲ್ಲಿ 2108-19ರಲ್ಲಿ 119, 2019-20ರಲ್ಲಿ 156 ಮತ್ತು 2020-21ರಲ್ಲಿ 296 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಹಾಲಪ್ಪ ಆಚಾರ್ ವಿಧಾನ ಪರಿಷತ್‌ನಲ್ಲಿ ಉತ್ತರ ಕೊಟ್ಟರು.
ಯಾವ ಜಿಲ್ಲೆಯಲ್ಲಿ ಎಷ್ಟು?; ಮೂರು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ 59 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ರಾಮನಗರದಲ್ಲಿ 51, ಹಾಸನದಲ್ಲಿ 42, ಮೈಸೂರು 38, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 37 ಬಾಲ್ಯ ವಿವಾಹಗಳು ನಡೆದಿವೆ.
ಬಾಲ್ಯ ವಿವಾಹವನ್ನು ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಶಿಶು ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಹಾಗೂ ಹೋಬಳಿ ಮಟ್ಟದಲ್ಲಿನ ಬಾಲ್ಯ ವಿವಾಹ ತಡೆಗಟ್ಟುವ ಸಮಿತಿಯನ್ನು ರಚನೆ ಮಾಡಲಾಗಿದೆ.
ಬಾಲ್ಯ ವಿವಾಹ ತಡೆಯಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ನಿಯಮಗಳನ್ನು ಉಲ್ಲಂಘಿಸಿ ಬಾಲ್ಯ ವಿವಾಹಕ್ಕೆ ಪ್ರೆರೇಪಣೆ ನೀಡುವವರನ್ನು ಕಾನೂನಿನ ಕಠಿಣ ಕ್ರಮಕ್ಕೆ ಒಳಪಡಿಸಲು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬಾಲ್ಯ ವಿವಾಹ ಮಾಡುವುದರಿಂದ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡುವ ಪರಿಸ್ಥಿತಿಯನ್ನು ಹೋಗಲಾಡಿಸಲು ಅರಿವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಬಾಲ್ಯ ವಿವಾಹ ಪದ್ದತಿಯು ಜಾರಿಯಲ್ಲಿದೆ. ತಂದೆ-ತಾಯಿಗಳು ಹೆಣ್ಣು ಮಕ್ಕಳು ಹೊರೆ ಎಂದು ಬಾವಿಸಿ ಅವರಿಗೆ 14 ರಿಂದ 15 ವರ್ಷ ತುಂಬಿದ ತಕ್ಷಣ ಮದುವೆ ಮಾಡುತ್ತಿದ್ದರು ಆದರೆ ಕಾಲ ಈಗ ಬದಲಾಗಿದ್ದು ಅನೇಕ ಯೋಜನೆಗಳನ್ನು ಹೆಣ್ಣು ಮಕ್ಕಳ ಭವಿಷ್ಯಕಾಗಿಯೇ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದಾಗಿ ಬಾಲ್ಯ ವಿವಾಹದ ವಿರುದ್ಧ ಜಾಗೃತಿಯೂ ಹೆಚ್ಚತ್ತಿದೆ.
ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಕುಂಠಿತಗೊಳ್ಳುತ್ತದೆ. ಇಂತಹ ಅನಿಷ್ಟ ಪದ್ಧತಿ ಸಮಾಜದಲ್ಲಿ ಹೆಮ್ಮರವಾಗಿ ಬೆಳೆಯದಂತೆ ಎಲ್ಲರೂ ಸೇರಿ ತಡೆಯಬೇಕು. ಹೆಣ್ಣು ಮಕ್ಕಳ ಕನಸನ್ನು ನನಸಾಗಿಸಲು ಹಾಗೂ ಸದೃಢ ಸಮಾಜವನ್ನು ನಿರ್ಮಾಣ ಮಾಡಲು ಪ್ರತಿಯೊಬ್ಬರು ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಬೇಕಿದೆ.
ಕೋವಿಡ್ ಸಂದರ್ಭದಲ್ಲಿ ಹೆಚ್ಚಳ; ಕೋವಿಡ್ ಪರಿಸ್ಥಿತಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಕೋವಿಡ್ ಕಾರಣದಿಂದಾಗಿ ಮನೆಗಳಲ್ಲೇ ಮದುವೆಗಳನ್ನು ಮಾಡಲು ಆರಂಭಿಸಿದ ಮೇಲೆ ಬಾಲ್ಯ ವಿವಾಹಗಳು ಹೆಚ್ಚಿವೆ. ಆರ್ಥಿಕ ಸಂಕಷ್ಟ, ಶಾಲೆಗಳಿಗೆ ರಜೆ ಇದ್ದ ಕಾರಣ ಬಾಲ್ಯ ವಿವಾಹಗಳಿಗೆ ಪೋಷಕರು ಮುಂದಾಗುತ್ತಿದ್ದಾರೆ.
Recommended Video
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications