ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; ಮೂರು ವರ್ಷದಲ್ಲಿ 571 ಬಾಲ್ಯ ವಿವಾಹ

|
Google Oneindia Kannada News

ಬೆಂಗಳೂರು, ಮಾರ್ಚ್ 24; ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ ಎಂದು ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ. ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ.

ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜ್ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಉತ್ತರ ನೀಡಿದ್ದಾರೆ.

 2020ರಲ್ಲಿ ಕರ್ನಾಟಕದಲ್ಲಿ ನಡೆದಿದೆ ಅತಿ ಹೆಚ್ಚು ಬಾಲ್ಯ ವಿವಾಹ 2020ರಲ್ಲಿ ಕರ್ನಾಟಕದಲ್ಲಿ ನಡೆದಿದೆ ಅತಿ ಹೆಚ್ಚು ಬಾಲ್ಯ ವಿವಾಹ

2018-19 ರಿಂದ 2020-21ರ ತನಕ ರಾಜ್ಯದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ. 417 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ ಯಾವುದೇ ಬಾಲ್ಯ ವಿವಾಹ ಪ್ರಕರಣ ದಾಖಲಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.

ವಿಡಿಯೋ; ವಿವಾಹ ವಯಸ್ಸು 21ಕ್ಕೆ ಏರಿಕೆ, ಸ್ವರ್ಣವಲ್ಲಿ ಶ್ರೀ ವಿರೋಧ ವಿಡಿಯೋ; ವಿವಾಹ ವಯಸ್ಸು 21ಕ್ಕೆ ಏರಿಕೆ, ಸ್ವರ್ಣವಲ್ಲಿ ಶ್ರೀ ವಿರೋಧ

570 Child Marriage In State In Three Years

ರಾಷ್ಟ್ರೀಯ ಅಪರಾಧ ಪ್ರಕರಣಗಳ ಬ್ಯರೊ (ಎನ್‌ಸಿಆರ್‌ಬಿ) ವರದಿಯ ಪ್ರಕಾರ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

ಗ್ರಾಮ ಲೆಕ್ಕಿಗನ ಜೊತೆ ಎನ್. ಆರ್. ಪುರ ತಹಶೀಲ್ದಾರ್ ವಿವಾಹ; ಏನಿದು ವಿವಾದ? ಗ್ರಾಮ ಲೆಕ್ಕಿಗನ ಜೊತೆ ಎನ್. ಆರ್. ಪುರ ತಹಶೀಲ್ದಾರ್ ವಿವಾಹ; ಏನಿದು ವಿವಾದ?

ರಾಜ್ಯದಲ್ಲಿ 2108-19ರಲ್ಲಿ 119, 2019-20ರಲ್ಲಿ 156 ಮತ್ತು 2020-21ರಲ್ಲಿ 296 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಹಾಲಪ್ಪ ಆಚಾರ್ ವಿಧಾನ ಪರಿಷತ್‌ನಲ್ಲಿ ಉತ್ತರ ಕೊಟ್ಟರು.

ಯಾವ ಜಿಲ್ಲೆಯಲ್ಲಿ ಎಷ್ಟು?; ಮೂರು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ 59 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ರಾಮನಗರದಲ್ಲಿ 51, ಹಾಸನದಲ್ಲಿ 42, ಮೈಸೂರು 38, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 37 ಬಾಲ್ಯ ವಿವಾಹಗಳು ನಡೆದಿವೆ.

ಬಾಲ್ಯ ವಿವಾಹವನ್ನು ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಶಿಶು ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಹಾಗೂ ಹೋಬಳಿ ಮಟ್ಟದಲ್ಲಿನ ಬಾಲ್ಯ ವಿವಾಹ ತಡೆಗಟ್ಟುವ ಸಮಿತಿಯನ್ನು ರಚನೆ ಮಾಡಲಾಗಿದೆ.

ಬಾಲ್ಯ ವಿವಾಹ ತಡೆಯಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ನಿಯಮಗಳನ್ನು ಉಲ್ಲಂಘಿಸಿ ಬಾಲ್ಯ ವಿವಾಹಕ್ಕೆ ಪ್ರೆರೇಪಣೆ ನೀಡುವವರನ್ನು ಕಾನೂನಿನ ಕಠಿಣ ಕ್ರಮಕ್ಕೆ ಒಳಪಡಿಸಲು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬಾಲ್ಯ ವಿವಾಹ ಮಾಡುವುದರಿಂದ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡುವ ಪರಿಸ್ಥಿತಿಯನ್ನು ಹೋಗಲಾಡಿಸಲು ಅರಿವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಬಾಲ್ಯ ವಿವಾಹ ಪದ್ದತಿಯು ಜಾರಿಯಲ್ಲಿದೆ. ತಂದೆ-ತಾಯಿಗಳು ಹೆಣ್ಣು ಮಕ್ಕಳು ಹೊರೆ ಎಂದು ಬಾವಿಸಿ ಅವರಿಗೆ 14 ರಿಂದ 15 ವರ್ಷ ತುಂಬಿದ ತಕ್ಷಣ ಮದುವೆ ಮಾಡುತ್ತಿದ್ದರು ಆದರೆ ಕಾಲ ಈಗ ಬದಲಾಗಿದ್ದು ಅನೇಕ ಯೋಜನೆಗಳನ್ನು ಹೆಣ್ಣು ಮಕ್ಕಳ ಭವಿಷ್ಯಕಾಗಿಯೇ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದಾಗಿ ಬಾಲ್ಯ ವಿವಾಹದ ವಿರುದ್ಧ ಜಾಗೃತಿಯೂ ಹೆಚ್ಚತ್ತಿದೆ.

ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಕುಂಠಿತಗೊಳ್ಳುತ್ತದೆ. ಇಂತಹ ಅನಿಷ್ಟ ಪದ್ಧತಿ ಸಮಾಜದಲ್ಲಿ ಹೆಮ್ಮರವಾಗಿ ಬೆಳೆಯದಂತೆ ಎಲ್ಲರೂ ಸೇರಿ ತಡೆಯಬೇಕು. ಹೆಣ್ಣು ಮಕ್ಕಳ ಕನಸನ್ನು ನನಸಾಗಿಸಲು ಹಾಗೂ ಸದೃಢ ಸಮಾಜವನ್ನು ನಿರ್ಮಾಣ ಮಾಡಲು ಪ್ರತಿಯೊಬ್ಬರು ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಬೇಕಿದೆ.

Recommended Video

Siddaramaiah ನವರು ಸಿದ್ದರಾಮೇಶ್ವರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದರು | Oneindia Kannada

ಕೋವಿಡ್ ಸಂದರ್ಭದಲ್ಲಿ ಹೆಚ್ಚಳ; ಕೋವಿಡ್ ಪರಿಸ್ಥಿತಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಕೋವಿಡ್ ಕಾರಣದಿಂದಾಗಿ ಮನೆಗಳಲ್ಲೇ ಮದುವೆಗಳನ್ನು ಮಾಡಲು ಆರಂಭಿಸಿದ ಮೇಲೆ ಬಾಲ್ಯ ವಿವಾಹಗಳು ಹೆಚ್ಚಿವೆ. ಆರ್ಥಿಕ ಸಂಕಷ್ಟ, ಶಾಲೆಗಳಿಗೆ ರಜೆ ಇದ್ದ ಕಾರಣ ಬಾಲ್ಯ ವಿವಾಹಗಳಿಗೆ ಪೋಷಕರು ಮುಂದಾಗುತ್ತಿದ್ದಾರೆ.

English summary
Karnataka women and child development minister Halappa Achar said that state reported 571 child marriage in three years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X