ಕರ್ನಾಟಕದಲ್ಲಿ ಅಪಾಯಕಾರಿಯಾದ ಕೊರೊನಾವೈರಸ್: ಒಂದೇ ದಿನ ಸತ್ತವರೆಷ್ಟು?

ಬೆಂಗಳೂರು, ಮೇ 18: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಪ್ರತಿನಿತ್ಯ ಮಹಾಮಾರಿಗೆ ಬಲಿ ಆಗುತ್ತಿರುವ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಶೇಕಡಾವಾರು ಪ್ರಮಾಣ 2.9ರಷ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 168 ಮಂದಿ ಕೊವಿಡ್-19 ಸೋಂಕಿನಿಂದಲೇ ಉಸಿರು ಚೆಲ್ಲಿದ್ದು, ಈವರೆಗೂ 33602 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ದಿನ 5783 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 14,785 ಸೋಂಕಿತರು ಗುಣಮುಖರಾಗಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 27,96,121ಕ್ಕೆ ಏರಿಕೆಯಾಗಿದೆ. ಈವರೆಗೂ 26,25,447 ಸೋಂಕಿತರು ಗುಣಮುಖರಾಗಿದ್ದು. 1,37,050 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 1,000 ಗಡಿ ದಾಟಿದೆ. ಕಳೆದ ಒಂದು ದಿನದಲ್ಲಿ 1100 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,03,063ಕ್ಕೆ ಏರಿಕೆಯಾಗಿದೆ. 39 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,410ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 42,925 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 99,573 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,42,498 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 57,59,414 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,66,33,839 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,23,93,253 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 5783 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 7, ಬಳ್ಳಾರಿ 155, ಬೆಳಗಾವಿ 139, ಬೆಂಗಳೂರು ಗ್ರಾಮಾಂತರ 207, ಬೆಂಗಳೂರು 1100, ಬೀದರ್ 11, ಚಾಮರಾಜನಗರ 83, ಚಿಕ್ಕಬಳ್ಳಾಪುರ 104, ಚಿಕ್ಕಮಗಳೂರು 278, ಚಿತ್ರದುರ್ಗ 114, ದಕ್ಷಿಣ ಕನ್ನಡ 1006, ದಾವಣಗೆರೆ 174, ಧಾರವಾಡ 65, ಗದಗ 23, ಹಾಸನ 390, ಹಾವೇರಿ 28, ಕಲಬುರಗಿ 18, ಕೊಡಗು 147, ಕೋಲಾರ 89, ಕೊಪ್ಪಳ 60, ಮಂಡ್ಯ 249, ಮೈಸೂರು 551, ರಾಯಚೂರು 15, ರಾಮನಗರ 41, ಶಿವಮೊಗ್ಗ 199, ತುಮಕೂರು 153, ಉಡುಪಿ 188, ಉತ್ತರ ಕನ್ನಡ 132, ವಿಜಯಪುರ 44, ಯಾದಗಿರಿ 13 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಮೇ 1ರಿಂದ ಈವರೆಗೂ 34,79,899 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ಮೊದಲ ಡೋಸ್ ನೀಡಲಾಗಿದ್ದು, 20,265 ಜನರಿಗೆ 2ನೇ ಡೋಸ್ ಲಸಿಕೆ ವಿತರಿಸಲಾಗಿದೆ. ರಾಜ್ಯದಲ್ಲಿ ಈವರೆಗೂ 7,41,330 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,86,417 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 7,22,371 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,31,703 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 98,75,165 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 24,02,966 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+