ಕರ್ನಾಟಕದಲ್ಲಿ ಒಂದೇ ದಿನ 590 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಮಾರ್ಚ್.09: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಕಡಿಮೆ ಆಗುತ್ತಲೇ ಇಲ್ಲ. ಬೆಂಗಳೂರಿನಲ್ಲಿ ಒಂದೇ ದಿನ 363 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಂದೇ ದಿನ 590 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 956041ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಈವರೆಗೂ 12373 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ.
ಕರ್ನಾಟಕದಲ್ಲಿ ಒಂದು ದಿನದಲ್ಲಿ 366 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 936616 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 7033 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಜಿಲ್ಲಾವಾರು ಕೊರೊನಾವೈರಸ್:
ರಾಜ್ಯದಲ್ಲಿ ಒಟ್ಟು 590 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 26, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು 363, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 2, ಚಿತ್ರದುರ್ಗ 5, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 7, ಗದಗ 4, ಹಾಸನ 8, ಹಾವೇರಿ 0, ಕಲಬುರಗಿ 25, ಕೊಡಗು 1, ಕೋಲಾರ 1, ಕೊಪ್ಪಳ 0, ಮಂಡ್ಯ 3, ಮೈಸೂರು 56, ರಾಯಚೂರು 1, ರಾಮನಗರ 1, ಶಿವಮೊಗ್ಗ 7, ತುಮಕೂರು 14, ಉಡುಪಿ 12, ಉತ್ತರ ಕನ್ನಡ 3, ವಿಜಯಪುರ 2, ಯಾದಗಿರಿ 2 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications