ಬೆಂಗಳೂರಲ್ಲಿ ಪಾಸಿಟಿವಿಟಿ ದರ; ಕೊರೊನಾ ವೈರಸ್ ಅಂಕಿ-ಸಂಖ್ಯೆ

ಬೆಂಗಳೂರು, ಜೂನ್ 14: ಕರ್ನಾಟಕದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕಡಿಮೆಯಾಗಿಲ್ಲ ಎನ್ನುವುದು ಅಂಕಿ-ಅಂಶಗಳಿಂದ ಸ್ಪಷ್ಟವಾಗುತ್ತಿದೆ. ಕೊವಿಡ್-19 ಪರೀಕ್ಷೆ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಪಾಸಿಟಿವಿಟಿ ದರವೂ ಏರಿಕೆಯಾಗಿದೆ.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪಾಸಿಟಿವಿಟಿ ದರವು ಶೇ.3.14ರಷ್ಟು ಹೆಚ್ಚಳವಾಗಿದೆ. ಅದೇ ರೀತಿ ಒಂದು ವಾರದಲ್ಲಿ ಕೊರೊನಾ ವೈರಸ್ ಪಾಸಿಟಿವಿಟಿ ದರದಲ್ಲಿ ಶೇ.2.28ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಸ್ಪಷ್ಟವಾಗಿದೆ.

ಕರ್ನಾಟಕದ ಮಟ್ಟಿಗೆ ಕೋವಿಡ್-19 ಸೋಂಕಿತ ಪ್ರಕರಣಗಳು ಏರಿಕೆ ಕಂಡಿದ್ದರೂ, ಬೆಂಗಳೂರು ಹೆಚ್ಚು ಅಪಾಯಕಾರಿ ಎನ್ನುವುದು ಗೊತ್ತಾಗುತ್ತಿದೆ. ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಬಹುತೇಕ ಸೋಂಕಿತ ಪ್ರಕರಣಗಳು ಸಿಲಿಕಾನ್ ಸಿಟಿಯಲ್ಲೇ ವರದಿಯಾಗುತ್ತಿವೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಏರಿಳಿತದ ಕುರಿತು ಸಂಪೂರ್ಣ ಮಾಹಿತಿಯನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ರಾಜ್ಯದಲ್ಲಿ ಕೋವಿಡ್19 ಸೋಂಕಿತ ಪ್ರಕರಣಗಳು

ರಾಜ್ಯದಲ್ಲಿ ಕೋವಿಡ್19 ಸೋಂಕಿತ ಪ್ರಕರಣಗಳು

ಕಳೆದ 24 ಗಂಟೆಗಳಲ್ಲೇ 594 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 400 ಸೋಂಕಿತರು ಗುಣಮುಖರಾಗಿದ್ದು, ಆದರೆ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಮಂಗಳವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3957343 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3913353 ಸೋಂಕಿತರು ಗುಣಮುಖರಾಗಿದ್ದು, 40,066 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 3882 ಸಕ್ರಿಯ ಪ್ರಕರಣಗಳಿವೆ.

594ರಲ್ಲಿ ಬೆಂಗಳೂರಿನಲ್ಲೇ 582 ಪ್ರಕರಣಗಳು ವರದಿ

594ರಲ್ಲಿ ಬೆಂಗಳೂರಿನಲ್ಲೇ 582 ಪ್ರಕರಣಗಳು ವರದಿ

ಕರ್ನಾಟಕದ ಇಡೀ ರಾಜ್ಯದಲ್ಲಿ 594 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪಕ್ಕಾ ಆಗಿದ್ದರೆ, ಅದರಲ್ಲಿ 582 ಮಂದಿ ಸೋಂಕಿತರು ಬೆಂಗಳೂರಿನವರೇ ಆಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 582 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1792722ಕ್ಕೆ ಏರಿಕೆಯಾಗಿದೆ. ಇದುವರೆಗೂ 1772019 ಸೋಂಕಿತರು ಗುಣಮುಖರಾಗಿದ್ದರೆ, 16,964 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್-19 ಅಪಾಯ ಇನ್ನೂ ಕಡಿಮೆಯಾಗಿಲ್ಲ ಎನ್ನುವ ಸಂದೇಶ ರವಾನೆಯಾಗಿದೆ.

ಬೆಂಗಳೂರು ಹೊರತಾಗಿ ಇತರೆ ಎಲ್ಲಾ ಜಿಲ್ಲೆ ಸೇರಿ 10 ಪ್ರಕರಣ

ಬೆಂಗಳೂರು ಹೊರತಾಗಿ ಇತರೆ ಎಲ್ಲಾ ಜಿಲ್ಲೆ ಸೇರಿ 10 ಪ್ರಕರಣ

ಕರ್ನಾಟಕದಲ್ಲಿ ವರದಿ ಆಗಿರುವ ಒಟ್ಟು 594 ಕೊರೊನಾ ವೈರಸ್ ಪ್ರಕರಣಗಳಲ್ಲಿ 582 ಪ್ರಕರಣಗಳು ಬೆಂಗಳೂರು ನಗರ ಜಲ್ಲೆಗೆ ಸೇರಿವೆ. ಉಳಿದ 12 ಸೋಂಕಿತ ಪ್ರಕರಣಗಳ ಪೈಕಿ ಬಳ್ಳಾರಿ 2, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ದಕ್ಷಿಣ ಕನ್ನಡ 4, ಕೊಪ್ಪಳ 1, ಶಿವಮೊಗ್ಗ 1, ಉಡುಪಿ 1 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 1 ಕೋವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಅಂಕಿ-ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್-19 ತಪಾಸಣೆ ಮತ್ತು ಲಸಿಕೆ ವಿತರಣೆ

ರಾಜ್ಯದಲ್ಲಿ ಕೋವಿಡ್-19 ತಪಾಸಣೆ ಮತ್ತು ಲಸಿಕೆ ವಿತರಣೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7133 ಜನರಿಗೆ ರಾಪಿಡ್ ಆಂಟಿಜೆನಿಕ್ ಪರೀಕ್ಷೆ ನಡೆಸಲಾಗಿದೆ. 11750 ಜನರಿಗೆ RT-PCR ತಪಾಸಣೆ ನಡೆಸಲಾಗಿದ್ದು, ಒಂದು ದಿನದಲ್ಲಿ ಒಟ್ಟು 18883 ಮಂದಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ.

ಕರ್ನಾಟಕದಲ್ಲಿ ಈವರೆಗೂ 5,46,12,882 ಜನರಿಗೆ ಮೊದಲ ಡೋಸ್, 5,29,36,772 ಜನರಿಗೆ ಎರಡನೇ ಡೋಸ್ ಮತ್ತು 29,42,320 ಮಂದಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 11,02,60,976 ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

Recommended Video

      South Africa ವಿರುದ್ಧ ಗೆದ್ಮೇಲೆ Rishab Pant ಹೊಗಳಿಕೆ‌ ಸಿಕ್ಕಿದ್ದು ಯಾರಿಗೆ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+