ರಾಜ್ಯದಲ್ಲಿ ಒಂದೇ ದಿನ 5985 ಮಂದಿಗೆ ಕೊರೊನಾವೈರಸ್ ಸೋಂಕು

ಬೆಂಗಳೂರು, ಆಗಸ್ಟ್.09: ರಾಜ್ಯದಲ್ಲಿ ಒಂದೇ ದಿನ 5985 ಮಂದಿಗೆ ಕೊವಿಡ್-19 ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲೇ 1948 ಮಂದಿಗೆ ಕೊರೊನಾವೈರಸ್ ಪಾಸಿಟಿವ್ ಬಂದಿದೆ. ಕರ್ನಾಟಕದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 178087ಕ್ಕೆ ಏರಿಕೆಯಾಗಿದೆ.

Recommended Video

      ಪ್ರಪಂಚಕ್ಕೆ ಸಿಹಿಸುದ್ದಿ ಕೊಟ್ಟ ರಷ್ಯಾ | Oneindia Kannada

      ಕಳೆದ 24 ಗಂಟೆಗಳಲ್ಲಿ 4670 ಕೊರೊನಾವೈರಸ್ ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ ರಾಜ್ಯದಲ್ಲಿ 93908 ಮಂದಿ ಗುಣಮುಖರಾಗಿದ್ದಾರೆ. ಮಹಾಮಾರಿಗೆ ರಾಜ್ಯದಲ್ಲಿ ಒಂದೇ ದಿನ 107 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3198ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಒಟ್ಟು 80973 ಸಕ್ರಿಯ ಪ್ರಕರಣಗಳಿರುವುದು ವರದಿಯಾಗಿದೆ.

      ರಾಜ್ಯದಲ್ಲಿ ಒಂದೇ ದಿನ 17113 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 20823 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 37936 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 1706447 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

      5985 New Coronavirus Cases Reported in Karnataka Today, State Tally Rise to 178087

      ಸಿಲಿಕಾನ್ ಸಿಟಿಯಲ್ಲೇ 1948 ಜನರಿಗೆ ಕೊವಿಡ್-19 ಸೋಂಕು:

      ಬೆಂಗಳೂರಿನಲ್ಲಿ ಒಂದೇ ದಿನ 1948 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 74185ಕ್ಕೆ ಏರಿಕೆಯಾಗಿದೆ. ಒಂದೇ ದಿನ 22 ಜನರು ಕೊವಿಡ್-19ಗೆ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

      ರಾಜ್ಯದಲ್ಲಿ ಒಟ್ಟು 5985 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, 30 ಜಿಲ್ಲೆಗಳಲ್ಲೂ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು 1948, ಮೈಸೂರು 455, ಬಳ್ಳಾರಿ 380, ಉಡುಪಿ 282, ಬೆಳಗಾವಿ 235, ರಾಯಚೂರು 202, ಧಾರವಾಡ 196, ಕಲಬುರಗಿ 194, ಹಾಸನ 168, ದಾವಣಗೆರೆ 158, ಬಾಗಲಕೋಟೆ 149, ಶಿವಮೊಗ್ಗ 149, ದಕ್ಷಿಣ ಕನ್ನಡ 132, ವಿಜಯಪುರ 129, ಗದಗ 114, ಚಿಕ್ಕಮಗಳೂರು - 113, ಕೊಪ್ಪಳ 106, ಚಿತ್ರದುರ್ಗ 98, ಬೆಂಗಳೂರು ಗ್ರಾಮಾಂತರ 95, ಯಾದಗಿರಿ 91, ಕೋಲಾರ 87, ಹಾವೇರಿ 80, ತುಮಕೂರು 78, ಬೀದರ್ 70, ಮಂಡ್ಯ 63, ಉತ್ತರ ಕನ್ನಡ 59, ಚಿಕ್ಕಬಳ್ಳಾಪುರ 47, ಚಾಮರಾಜನಗರ 47, ರಾಮನಗರ 38, ಕೊಡಗು 22 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+