• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕನ್ನಡ ರಾಜ್ಯೋತ್ಸವ, ಸಿಎಂ ಭಾಷಣದ ಮುಖ್ಯಾಂಶಗಳು

|

ಬೆಂಗಳೂರು, ನ.1 : ಮಕ್ಕಳ ಸುರಕ್ಷತೆಗೆ ಆದ್ಯತೆ, ಆಡಳಿತದಲ್ಲಿ ಕನ್ನಡ ಕಡ್ಡಾಯ ಅನುಷ್ಠಾನ, ಪ್ರತ್ಯೇಕ ರಾಜ್ಯದ ಬೇಡಿಕೆಗೆ ಮನ್ನಣೆಯಿಲ್ಲ, ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ನೀಡಲು ಸರ್ಕಾರ ಬದ್ಧ ಮುಂತಾದವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನ್ನಡ ರಾಜ್ಯೋತ್ಸವ ಭಾಷಣದ ಮುಖ್ಯಾಂಶಗಳು.

ಶನಿವಾರ 59ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ಮೇಳದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ಉದ್ದೇಶಿಸಿ ಮಾತನಾಡಿದರು. [ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ]

ಮಕ್ಕಳು ದೇವರ ಸಮಾನ. ಇತ್ತೀಚೆಗೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು ಪ್ರಾಣಿಗಳಿಗಿಂತಲೂ ಕಡೆ. ಎರಡು ಕಾಲಿನ ಮೃಗಗಳಂತೆ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ನೀಡಬೇಕೆಂದು ತಜ್ಞರ, ಸಾಹಿತಿಗಳ ಒತ್ತಾಯವಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಜಾರಿ ಮಾಡಿದೆ. ಆದರೆ, ಸುಪ್ರೀಂಕೋರ್ಟ್‍ನಲ್ಲಿ ಈ ಆದೇಶಕ್ಕೆ ಮನ್ನಣೆ ದೊರಕಿಲ್ಲ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ದೊರೆಯುವಂತೆ ಮಾಡಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲು ಒತ್ತಾಯಿಸಿದ್ದೇನೆ ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿಗಳ ಭಾಷಣದ ಮುಖ್ಯಾಂಶಗಳು

* ಮಕ್ಕಳ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಪೋಷಕರು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗುವುದು ಬೇಡ. ಮುಂದಿನ ಬೇಸಿಗೆ ರಜೆ ಕಳೆದ ನಂತರ ಮಕ್ಕಳ ಸುರಕ್ಷತೆಗಾಗಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸದ ಖಾಸಗಿ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು.

* ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ತುರ್ತು ವಿಲೇವಾರಿ ನ್ಯಾಯಾಲಯ ಸ್ಥಾಪಿಸಲಾಗುವುದು. ಅಗತ್ಯವಿದ್ದರೆ ಇನ್ನಷ್ಟು ಕಠಿಣ ಕಾನೂನು ರಚಿಸಲು ಕ್ರಮ ಕೈಗೊಳ್ಳಲಾಗುತ್ತದೆ.

* ನಾಡು ಕಟ್ಟುವ ಭವಿಷ್ಯದ ಪ್ರಜೆಗಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಮಕ್ಕಳು ದೇವರ ಸಮಾನ. ಇತ್ತೀಚೆಗೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು ಪ್ರಾಣಿಗಳಿಗಿಂತಲೂ ಕಡೆ.

* ಶಾಲೆ, ಕಾಲೇಜು ಸುತ್ತ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗುತ್ತದೆ. ಸಮಾಜದಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಾರ್ತಾ ಇಲಾಖೆ ಸಹಯೋಗದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಲೈಂಗಿಕ ದೌರ್ಜನ್ಯದಂತೆ ಘಟನೆಗಳು ಮರುಕಳಿಸದಂತೆ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದೇವೆ.

* ಅಖಂಡ ಕರ್ನಾಟಕ ಏಕೀಕರಣಕ್ಕಾಗಿ ಹಲವಾರು ಗಣ್ಯರು ಹೋರಾಟ ಮಾಡಿದ್ದು, ಪ್ರತ್ಯೇಕ ರಾಜ್ಯ ರಚನೆ ವಿಚಾರ ಅಪ್ರಸ್ತುತ ಹಾಗೂ ಖಂಡನೀಯ. ರಾಜ್ಯದ ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸಂವಿಧಾನದ 371ನೇ (ಜೆ) ತಿದ್ದುಪಡಿ ಅನ್ವಯ ನೀಡಿರುವ ವಿಶೇಷ ಸ್ಥಾನಮಾನದಡಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

* ಪ್ರತಿಪಕ್ಷಗಳು ರಾಜ್ಯದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿವೆ. ಹಿಂದೆ ಅಧಿಕಾರ ನಡೆಸಿದಾಗ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡದ ಪ್ರತಿಪಕ್ಷ ಈಗ ಅಧಿಕಾರ ಕಳೆದುಕೊಂಡ ಬಳಿಕ ಅಭಿವೃದ್ಧಿಯ ಜಪ ಮಾಡುತ್ತಿದೆ ಎಂದು ಸಿಎಂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

* ಕೇಂದ್ರ ಸರ್ಕಾರದ ದೇವನಾಗರಿ, ರೋಮನ್ ಲಿಪಿ, ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲಿ ಉಚ್ಚಾರಣೆಯಾಗುವಂತೆ 12 ನಗರಗಳ ಹೆಸರುಗಳನ್ನು ಬದಲಾವಣೆ ಮಾಡಲು ಒಪ್ಪಿಗೆ ಸೂಚಿಸಿತ್ತು. ಅದರಂತೆ ಬದಲಾವಣೆ ಮಾಡಲಾಗಿದೆ.

* ಕರ್ನಾಟಕ ರಾಜ್ಯ ವಿಭಜನೆಯ ಯಾವುದೇ ಪ್ರಯತ್ನಗಳಿಗೆ ರಾಜ್ಯ ಸರ್ಕಾರ ಕಿಮ್ಮತ್ತು ನೀಡುವುದಿಲ್ಲ. ರಾಜ್ಯದ ಅಂದಿನ ಏಕೀಕರಣ ಉದ್ದೇಶಕ್ಕೆ ಕುತ್ತು ಬಾರದಂತೆ ಕಾಪಾಡಲು ಸರ್ಕಾರವು ಸದಾ ಬದ್ಧ. ರಾಜ್ಯವನ್ನು ಒಡೆಯುವ ಹಲವು ಪ್ರಯತ್ನಗಳು ನಡೆಯುತ್ತಿದೆ. ಆದರೆ, ಅತಂಹ ಪ್ರಯತ್ನಗಳಿಗೆ ಯಾವುದೇ ಅವಕಾಶ ನೀಡುವುದಿಲ್ಲ.

* ಅನ್ಯ ಭಾಷಾ ಕಲಿಕೆಗೆ ಸರ್ಕಾರದ ಯಾವುದೇ ವಿರೋಧವಿಲ್ಲ. ಆದರೆ, ಕನ್ನಡವು ನಮ್ಮ ಪರಿಸರದ ಸಹಜ ಭಾಷೆಯಾದ್ದರಿಂದ ಅದನ್ನು ಶಿಕ್ಷಣಕ್ಕೆ ಮಾಧ್ಯಮನ್ನಾಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಎಲ್ಲ ರಾಜ್ಯಗಳೊಂದಿಗೆ ಚರ್ಚಿಸಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Chief Minister Siddaramaiah addressed state in the celebration of 59 Kannada Rajyotsava at Kanteerava Stadium Bangalore, speech highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more