DK Shivakumar Slams BJP: 5 ಸಾವಿರ ಮಂದಿ ನನ್ನ ಆಸ್ತಿ ದಾಖಲೆಗಳನ್ನು ಡೌನ್‌ಲೋಡ್ ; ಇದು ಬಿಜೆಪಿ ಪಿತೂರಿ: ಡಿ.ಕೆ ಶಿವಕುಮಾರ್
ಬೆಂಗಳೂರು, ಏಪ್ರಿಲ್21: ನನ್ನ ಆಸ್ತಿ ಸಲ್ಲಿಕೆಗಳಯ ದಾಖಲೆಗಳನ್ನು 5 ಸಾವಿರ ಮಂದಿ ಡೌನ್‌ಲೋಡ್ ಮಾಡಿದ್ದಾರೆ, ಇದರ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ಶುಕ್ರವಾರ ಮಾತನಾಡಿದ ಅವರು, ನನ್ನ ವಿರುದ್ದ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ತಿಳಿದು ನಾನು ನನ್ನ ಸಹೋದರ ಡಿ.ಕೆ ಸುರೇಶ್ ಮೂಲಕ ಮತ್ತೊಂದು ನಾಮಪತ್ರ ಸಲ್ಲಿಸಲಾಗಿದೆ. ನಮ್ಮದೇ ಆದ ತಂತ್ರಗಾರಿಕೆ ಇದೆ. ಡಿ.ಕೆ.ಸುರೇಶ್ ಯಾಕೆ ನಾಮಪತ್ರ ಸಲ್ಲಿಸಬಾರದು? ನಮ್ಮ ರಾಜಕೀಯ ಲೆಕ್ಕಾಚಾರಗಳು ನಮಗಿರುತ್ತವೆ, ನಮ್ಮ ಗುಟ್ಟು ಬಿಟ್ಟುಕೊಡುವುದಿಲ್ಲ. ರಾಜಕೀಯ ನಡೆಸುವುದು ನಮಗೂ ಗೊತ್ತು, ನನ್ನ ಆಸ್ತಿ ಸಲ್ಲಿಕೆಗಳನ್ನು 5 ಸಾವಿರ ಮಂದಿ ಡೌನ್‌ಲೋಡ್ ಮಾಡಿದ್ದಾರೆ, ಇದರ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ಆರೋಪಿಸಿದ್ದಾರೆ.

ಈಗಿನ ತಂತ್ರಜ್ಞಾನದಲ್ಲಿ ಯಾರು ಮಾಹಿತಿ ನೋಡುತ್ತಾರೆ, ಡೌನ್ಲೋಡ್ ಮಾಡಿಕೊಳ್ಳುತ್ತಾರೆ ಎಂಬ ಮಾಹಿತಿ ಸಿಗುತ್ತದೆ. ಬಿಜೆಪಿ ಸೆಲ್ ನನ್ನ ದಾಖಲೆ ಪರಿಶೀಲಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಧಿಕಾರಿಗಳ ದುರ್ಬಳಕೆಗೆ ಪ್ರಯತ್ನಿಸಲಾಗುತ್ತಿದೆ. ಹೀಗಾಗಿ ನಾವು ಜಾಗರೂಕವಾಗಿ ಹೆಜ್ಜೆ ಇಟ್ಟಿದ್ದೇವೆ. ನನಗೆ ಅರ್ಜಿ ಹೇಗೆ ತುಂಬಬೇಕು ಗೊತ್ತಿದೆ. ನನ್ನ ದಾಖಲೆಗಳು ಸರಿಯಾಗಿವೆ. ನನ್ನ ಅರ್ಜಿ ಸ್ವೀಕೃತವಾಗಿಗಲಿದೆ ಎಂಬ ನಂಬಿಕೆ ಇದೆ. ಆದರೆ ಬಿಜೆಪಿಯವರ ಷಡ್ಯಂತ್ರ ಏನುಬೇಕಾದರೂ ಆಗಬಹುದು.
ಕಳೆದ ಬಾರಿಯೇ ನನ್ನ ಅರ್ಜಿ ತರಸ್ಕರಿಸಲು ಮುಂದಾಗಿದ್ದರು. ಆದರೆ ನಾನು ಐಟಿ ಅಧಿಕಾರಿಗಳ ಮುಂದೆ ಹೋಗಿ ಎಲ್ಲ ಮಾಹಿತಿ ನೀಡಿದೆ. ಅವರು ನನಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿವೆ. ಕಳೆದ 15 ವರ್ಷಗಳಲ್ಲಿ ನಾನು ಒಂದು ಮನೆ ಬಿಟ್ಟರೆ ಉಳಿದಂತೆ ಯಾವುದೇ ಆಸ್ತಿ ಖರೀದಿ ಮಾಡಿಲ್ಲ.

ನನಗೆ ಬೇಕಾದಷ್ಟು ಅಧಿಕಾರಿಗಳು, ಮಾಧ್ಯಮ ಸ್ನೇಹಿತರು ಇದ್ದು, ನನ್ನ ವಿರುದ್ಧ ಮಾಡುತ್ತಿರುವ ಷಡ್ಯಂತ್ರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ನನ್ನ ಮೇಕೆದಾಟು, ಭಾರತ ಜೋಡೋ ಯಾತ್ರೆ, ಸ್ವಾತಂತ್ರ್ಯ ನಡಿಗೆ ತಡೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಅವರಿಗೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಬಿಜೆಪಿ ಭ್ರಷ್ಟಾಚಾರ, ಕೋವಿಡ್ ಭ್ರಷ್ಟಾಚಾರ ಬಗ್ಗೆ ನನ್ನ ಅವಧಿಯಲ್ಲಿ ದೊಡ್ಡ ಹೋರಾಟ ನಡೆದು ಮಂತ್ರಿ ರಾಜೀನಾಮೆ ನೀಡಬೇಕಾಯಿತು. ಈತನಿಂದ ಈ ಪರಿಸ್ಥಿತಿ ಬಂದಿದೆ ಎಂದು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅವರು ಏನೇ ಕುತಂತ್ರ ಪ್ರಯೋಗ ಮಾಡಿದರೂ ನಾನು ನ್ಯಾಯಾಲಯ ಹಾಗೂ ಜನರ ತೀರ್ಪು ನಂಬಿದ್ದೇನೆ ಎಂದರು.
ಶಿವಕುಮಾರ್ 1,414 ಕೋಟಿ ರೂ.ಗೂ ಹೆಚ್ಚು ಆಸ್ತಿ ಘೋಷಿಸಿದ್ದರು. 108ಕ್ಕೂ ಹೆಚ್ಚು ಪುಟಗಳಲ್ಲಿ ಆಸ್ತಿ ವಿವರಗಳನ್ನು ನೀಡಲಾಗಿದೆ. ಶಿವಕುಮಾರ್ ಬರೋಬ್ಬರಿ 1,214 ಕೋಟಿ ರೂ. ಅಫಿಡವಿಟ್ ಪ್ರಕಾರ ಅವರ ಪತ್ನಿ ಉಷಾ ಶಿವಕುಮಾರ್ 133 ಕೋಟಿ ರೂ ಮತ್ತು ಅವರ ಮಗ ಆಕಾಶ್ 66 ಕೋಟಿ ರೂ ಹೊಂದಿದ್ದಾರೆ.
970 ಕೋಟಿ ಮೌಲ್ಯದ ಸ್ಥಿರಾಸ್ತಿ, 244 ಚರಾಸ್ತಿ ಹೊಂದಿದ್ದಾರೆ ಮತ್ತು 226 ಕೋಟಿ ಸಾಲವನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ನಾಮಪತ್ರಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದರೆ ಅವರ ಉಮೇದುವಾರಿಕೆ ತಿರಸ್ಕಾರಕ್ಕೆ ಕಾರಣವಾಗುತ್ತದೆ. ಹೀಗಾಗಿ ನಿರಾಕರಣೆಯ ಭೀತಿಯಿಂದ ಶಿವಕುಮಾರ್ ತಮ್ಮ ಸಹೋದರ ಡಿ.ಕೆ. ಸುರೇಶ್ ಅವರು ಕನಕಪುರ ಕ್ಷೇತ್ರದಿಂದ ಗುರುವಾರ ನಾಮಪತ್ರ ಸಲ್ಲಿಸಿದರು.
ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ನಾಲ್ಕು ದಿನಗಳ ಹಿಂದೆ ಶಿವಕುಮಾರ್ ಅವರನ್ನು ವಿಚಾರಣೆಗೆ ಕರೆದಿದ್ದರು ಎಂದು ತಿಳಿದು ಬಂದಿದೆ. ಶಿವಕುಮಾರ್ ಅವರು ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಐಟಿ ಅಧಿಕಾರಿಗಳು ವಿವರ ಸಂಗ್ರಹಿಸಿದ್ದರು. ಕನಕಪುರ ಪಟ್ಟಣಕ್ಕೂ ಬಂದು ಶಿವಕುಮಾರ್ ಆಸ್ತಿ ಹಾಗೂ ಇತರೆ ವಿವರ ಸಂಗ್ರಹಿಸಿದ್ದರು ಎನ್ನಲಾಗಿದೆ.












Click it and Unblock the Notifications