• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಹಳಷ್ಟು ಅರಣ್ಯ ಸಚಿವರು ಬಂದು ಹೋಗಿದ್ದರು, ಯಾರೂ ಧೈರ್ಯ ಮಾಡಿರಲಿಲ್ಲ!

|
Google Oneindia Kannada News

ಬೆಂಗಳೂರು, ಸೆ. 26: ಕೊರೊನಾ ವೈರಸ್ ಸಂಕಷ್ಟದ ಲಾಕ್‌ಡೌನ್ ಸಮಯದಲ್ಲಿ ಬರಿ ಜನವಿರೋಧಿ ಕಾನೂನುಗಳನ್ನು ರಾಜ್ಯ ಸರ್ಕಾರ ಜಾರಿಗೆ ಮಾಡಿದೆ ಎಂಬ ವಿರೋಧ ಪಕ್ಷಗಳ ಆರೋಪದ ಮಧ್ಯೆ, ಬಡವರಿಗೆ ಸಹಾಯವಾಗುವಂತಹ ಕಾನೂನು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಿರುವುದಕ್ಕೆ ವಿರೋಧ ಪಕ್ಷಗಳು ಸದನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ಸದನದ ಹೊರಗೆ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಬೆಂಬಲ ಕೊಟ್ಟಿವೆ. ಜೊತೆಗೆ ಕಾರ್ಮಿಕರ ಹಿತ ಬಲಿಕೊಡುವ ಕಾನೂನನ್ನು ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಹೀಗಾಗಿಯೇ ಸದನದಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯವನ್ನು ಮಂಡಿಸಿದೆ.

ಈ ಎಲ್ಲದರ ಮಧ್ಯೆ ರಾಜ್ಯ ಬಿಜೆಪಿ ಸರ್ಕಾರ ಬಡವರಿಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ. ಕಾನೂನು ತಿದ್ದುಪಡಿ ಮಾಡುವ ಮೂಲಕ ನಾಡಿನ ಜನರಿಗೆ ಕೊನೆಗೂ ಸಿಹಿ ಸುದ್ದಿ ಕೊಟ್ಟಿದೆ.

ಮನೆ ಕಟ್ಟಿಕೊಂಡವರಿಗೆ ಸಿಹಿ ಸುದ್ದಿ!

ಮನೆ ಕಟ್ಟಿಕೊಂಡವರಿಗೆ ಸಿಹಿ ಸುದ್ದಿ!

ಅರಣ್ಯ ಭೂಮಿಯಲ್ಲಿ ಕೃಷಿ ಹಾಗೂ ಮನೆ ಕಟ್ಟಿಕೊಂಡು ಜೀವನ ನಡೆಸುತ್ತಿರುವ ರಾಜ್ಯದ ಜನರಿಗೆ ಅನುಕೂಲವಾಗುವಂತೆ ರಾಜ್ಯದ 6.64 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯವನ್ನು ಕಂದಾಯ ಇಲಾಖೆಗೆ ವರ್ಗಾಯಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಭೂ ಕಂದಾಯ ತಿದ್ದುಪಡಿ ವಿಧೇಯಕ ಮಂಡಿಸಿ ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಸಲ್ಲಿಸಲು ಎರಡು ವರ್ಷ ಅವಧಿ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಡೀಮ್ಡ್ ಅರಣ್ಯ ಪ್ರದೇಶ ಕಂದಾಯ ಇಲಾಖೆಗೆ

ಡೀಮ್ಡ್ ಅರಣ್ಯ ಪ್ರದೇಶ ಕಂದಾಯ ಇಲಾಖೆಗೆ

ಈ ಸಂದರ್ಭದಲ್ಲಿ ಮಾತನಾಡಿದ ಅರಣ್ಯ ಸಚಿವ ಆನಂದ್ ಸಿಂಗ್ ಅವರು, ರಾಜ್ಯದಲ್ಲಿ ಅರಣ್ಯ ಭೂಮಿ ಮತ್ತು ರೈತರ ಸಮಸ್ಯೆಯನ್ನು ಅರಿತು ರಾಜ್ಯದ 9.94 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶದಲ್ಲಿ 6.64 ಲಕ್ಷ ಡೀಮ್ಡ್ ಅರಣ್ಯ ಪ್ರದೇಶವನ್ನು ಕಂದಾಯ ಇಲಾಖೆಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಉಳಿದ 3.30 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶದಲ್ಲಿಯೂ ಯಾರಾದರು ಮನೆ ಕಟ್ಟಿಕೊಂಡು ಕೃಷಿ ನಡೆಸುತ್ತಿದ್ದರೆ ಅವರಿಗೂ ಅವಕಾಶ ಕಲ್ಪಿಸಲಾಗುವುದು. ಇದರಿಂದ ಅರಣ್ಯ ಇಲಾಖೆ ಜೊತೆಗಿನ ಸಾಮಾನ್ಯ ಜನರ ಗೊಂದಲ ನಿವಾರಣೆಯಾಗಲಿದೆ ಎಂದು ಹೇಳಿದರು.

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಕಂದಾಯ ಸಚಿವ ಅಶೋಕ್ ಶಾಸಕರ ಮನವಿ ಮೇರೆಗೆ ಬಗರ್ ಹುಕುಂ ಸಾಗುವಳಿದಾರರಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲು ತಿದ್ದುಪಡಿ ಮಾಡಲಾಗಿದ್ದು ಇದರಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.

  China - Pakistan ಒಟ್ಟಿಗೆ ಬಂದ್ರು ನಾವ್ Ready to Fight | Oneindia Kannada
  ರಮೇಶ್ ಕುಮಾರ್ ಅಭಿನಂದನೆ

  ರಮೇಶ್ ಕುಮಾರ್ ಅಭಿನಂದನೆ

  ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಮನೆ ಕಟ್ಟಿಕೊಂಡ ಲಕ್ಷಾಂತರ ರೈತರಿಗೆ ಅನುಕೂಲವಾಗುವ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಅವರಿಗೆ ಕಾಂಗ್ರೆಸ್ ಸದಸ್ಯ, ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಅಭಿನಂದನೆ ಸಲ್ಲಿಸಿದರು.

  ಎಷ್ಟೋ ಜನ ಅರಣ್ಯ ಸಚಿವರು ಬಂದು ಹೋಗಿದ್ದರು. ಯಾರೂ ಇಷ್ಟೊಂದು ಧೈರ್ಯ ಮಾಡಿರಲಿಲ್ಲ. ಆನಂದ್ ಸಿಂಗ್ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದಿಲ್ಲ. ಆದರೂ ಇಂತಹ ಮಹತ್ವದ ನಿರ್ಧಾರ ತೆಗೆದುಕೊಂಡು ದಶಕಗಳಿಂದ ಸಂಕಷ್ಟ ಅನುಭವಿಸುತ್ತಿದ್ದ ಲಕ್ಷಾಂತರ ಜನರ ಬಾಳಿಗೆ ಬೆಳಕಾಗುವಂತಹ ನಿರ್ಧಾರ ತೆಗೆದುಕೊಂಡಿದ್ದಾರೆ. ಒಳ್ಳೆಯ ಕೆಲಸ ಮಾಡಿದಾಗ ಅವರಿಗೆ ಅಭಿನಂದಿಸದಿದ್ದರೆ ನಾವು ನೀಚ ವರ್ಗಕ್ಕೆ ಸೇರುತ್ತೇವೆ. ಸಚಿವರ ಕಾರ್ಯ ಶ್ಲಾಘನೀಯವಾದದ್ದು ಎಂದು ಹೇಳಿದರು. ಎಲ್ಲ ಸದಸ್ಯರು ಮೇಜು ಕುಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

  English summary
  A decision has been taken to transfer 6.64 lakh hectares of deemed forest to the Department of Revenue to benefit the people of the state who are cultivating and living on forest land, Revenue Minister R Ashok said in the assembly.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X