ಚನ್ನಪಟ್ಟಣ ನಗರಸಭೆ 6 ಬಿಜೆಪಿ ಸದಸ್ಯರು ಡಿ ಕೆ ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಚನ್ನಪಟ್ಟಣ, ಅಕ್ಟೋಬರ್‌ 29: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ತಮ್ಮ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಮಾಸ್ಟರ್‌ ಪ್ಲಾನ್‌ ನಡೆಸಿದ್ದು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ದಿನಗಣನೆ ನಡೆದಿರುವಾಗ ಬಿಜೆಪಿ ಮತ್ತು ಜೆಡಿಎಸ್‌ ಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ.

ಚನ್ನಪಟ್ಟಣ ನಗರಸಭೆಗೆ ಬಿಜೆಪಿಯಿಂದ ಗೆದ್ದಿದ್ದ 7 ಸದಸ್ಯರ ಪೈಕಿ 6 ಮಂದಿ ಮಾಜಿ ಸಂಸದ ಡಿ.ಕೆ. ಸುರೇಶ್ ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ. ಈ ಸಂದರ್ಭದಲ್ಲಿ ಬಿಎಂಐಸಿಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ಉಪಸ್ಥಿತರಿದ್ದರು.

6 BJP members of Channapatna Municipal Council join Congress

ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 6 ಮಂದಿ ನಗರಸಭೆ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಚನ್ನಪಟ್ಟಣ ನಗರಸಭಾ ಸದಸ್ಯರಾದ ಚಂದ್ರು, ಮಂಗಳಮ್ಮ, ಮನೋಹರ್, ಕಮಲ,‌ ಜಯಮಾಲ, ಕಸ್ತೂರಿ ಕಾಂಗ್ರೆಸ್ ಸೇರಿದವರು.

2021-22 ರಲ್ಲಿ ಇವರು ನಗರಸಭೆಗೆ ಬಿಜೆಪಿಯಿಂದ ಆಯ್ಕೆ ಆಗಿದ್ದರು. ಒಟ್ಟು 31 ಸದಸ್ಯರ ಪೈಕಿ 07 ಮಂದಿ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್ ನಿಂದ ಗೆದ್ದಿದ್ದರು. ಎರಡು ತಿಂಗಳ ಹಿಂದೆ 13 ಮಂದಿ ಜೆಡಿಎಸ್ ಸದಸ್ಯರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+