ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ 'ಕೈ' ಕೊಡಲಿರುವ 6 ಶಾಸಕರು ಯಾರು?

|
Google Oneindia Kannada News

Recommended Video

ಕಾಂಗ್ರೆಸ್‌ 'ಕೈ' ಕೊಡಲಿರುವ 6 ಶಾಸಕರು ಯಾರು? | Oneindia Kannada

ಬೆಂಗಳೂರು, ಜನವರಿ 15 : ಕರ್ನಾಟಕ ಸರ್ಕಾರ ಬಹುಮತ ಕಳೆದುಕೊಳ್ಳಲಿದೆಯೇ? ಎಂಬುದು ಸದ್ಯದ ಪ್ರಶ್ನೆ. ಈಗಾಗಲೇ ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯುವುದಾಗಿ ಮುಂಬೈನಲ್ಲಿ ಘೋಷಣೆ ಮಾಡಿದ್ದಾರೆ.

ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಬೆಂಬಲ ವಾಪಸ್ ಪಡೆಯುವಂತೆ ಮಾಡುವ ಮೂಲಕ ಬಿಜೆಪಿ ಪ್ರಾಥಮಿಕ ಯಶಸ್ಸು ಕಂಡಿದೆ. ಕಾಂಗ್ರೆಸ್‌ನ 6 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬುದು ಸದ್ಯದ ಸುದ್ದಿ.

ಬೆಂಬಲ ವಾಪಸ್ ಪಡೆದ ಇಬ್ಬರು ಶಾಸಕರು ಹೇಳಿದ್ದೇನು?ಬೆಂಬಲ ವಾಪಸ್ ಪಡೆದ ಇಬ್ಬರು ಶಾಸಕರು ಹೇಳಿದ್ದೇನು?

ಆಪರೇಷನ್ ಕಮಲದ 2ನೇ ಹಂತವಾಗಿ ಕಾಂಗ್ರೆಸ್‌ನ ಆರು ಶಾಸಕರು ರಾಜೀನಾಮೆ ನೀಡಲಿದ್ದಾರೆ. ಬುಧವಾರ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ, ರಾಜೀನಾಮೆ ನೀಡಿ, ಬಿಜೆಪಿ ಬೆಂಬಲಿಸುತ್ತೇವೆ ಎಂದು ಘೋಷಣೆ ಮಾಡುವ ನಿರೀಕ್ಷೆ ಇದೆ.

ಬ್ರೇಕಿಂಗ್ ನ್ಯೂಸ್ : ಇಬ್ಬರು ಶಾಸಕರಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ಬ್ರೇಕಿಂಗ್ ನ್ಯೂಸ್ : ಇಬ್ಬರು ಶಾಸಕರಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್

ಬೆಂಗಳೂರಿನಲ್ಲಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ. ಕಾಂಗ್ರೆಸ್ ಅತೃಪ್ತ ಶಾಸಕರ ನಾಯಕತ್ವವನ್ನು ರಮೇಶ್ ಜಾರಕೊಹೊಳಿ ಅವರು ವಹಿಸಿಕೊಂಡಿರುವ ಸಾಧ್ಯತೆ ಇದೆ....

ಆಪರೇಷನ್ ಕಮಲ : ಕರ್ನಾಟಕ ವಿಧಾನಸಭೆ ಬಲಾಬಲದ ಲೆಕ್ಕಾಚಾರಆಪರೇಷನ್ ಕಮಲ : ಕರ್ನಾಟಕ ವಿಧಾನಸಭೆ ಬಲಾಬಲದ ಲೆಕ್ಕಾಚಾರ

ಶಾಸಕರ ಪಟ್ಟಿ

ಶಾಸಕರ ಪಟ್ಟಿ

* ರಮೇಶ್ ಜಾರಕಿಹೊಳಿ -ಗೋಕಾಕ್
* ನಾಗೇಂದ್ರ - ಬಳ್ಳಾರಿ ಗ್ರಾಮಾಂತರ
* ಉಮೇಶ್ ಜಾಧವ್ - ಚಿಂಚೋಳಿ
* ಮಹೇಶ್ ಕುಮಟಳ್ಳಿ - ಅಥಣಿ
* ಭೀಮಾ ನಾಯ್ಕ್ - ಹಗರಿಬೊಮ್ಮನಳ್ಳಿ
* ಜೆ.ಎನ್.ಗಣೇಶ್ - ಕಂಪ್ಲಿ

ರೆಸಾರ್ಟ್‌ ರಾಜಕೀಯ

ರೆಸಾರ್ಟ್‌ ರಾಜಕೀಯ

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗುವ ಸಾಧ್ಯತೆ ಇದೆ. ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್‌ ಶಾಸಕರನ್ನು ರೆಸಾರ್ಟ್‌ಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ಬುಧವಾರ ಬೆಳಗ್ಗೆ ಎಲ್ಲಾ ಶಾಸಕರು ಬೆಂಗಳೂರಿಗೆ ಬಂದು, ಬಳಿಕ ರೆಸಾರ್ಟ್‌ ನತ್ತ ಹೋಗಲಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಹೇಳಿಕೆ

ಎಚ್.ಡಿ.ಕುಮಾರಸ್ವಾಮಿ ಹೇಳಿಕೆ

ಕುಮಾರಕೃಪಾ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, 'ನನ್ನ ಸರ್ಕಾರ ಸುಭದ್ರವಾಗಿದೆ. ಕಳೆದ ಮೂರು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡುತ್ತಾ ಎಂಜಾಯ್ ಮಾಡುತ್ತಿದ್ದೇನೆ. ನಾನು ನಿರಾಳವಾಗಿದ್ದು, ಯಾವುದೇ ಒತ್ತಡದಲ್ಲಿಲ್ಲ' ಎಂದು ಹೇಳಿದರು.

ನಾಮಗೇನು ತೊಂದರೆ ಇಲ್ಲ

ನಾಮಗೇನು ತೊಂದರೆ ಇಲ್ಲ

'ಇಬ್ಬರು ಪಕ್ಷೇತರರು ಬಿಜೆಪಿಗೆ ಬೆಂಬಲ ನೀಡುವುದಾದರೆ ನೀಡಲಿ ನಮ್ಮ ಅಭ್ಯಂತರವೇನಿಲ್ಲ. ಇದರಿಂದಾಗಿ ನಮಗೇನು ತೊಂದರೆ ಇಲ್ಲ. ಬಿಜೆಪಿಗೆ ಅಧಿಕಾರದ ಆಸೆ. ಆಮಿಷವೊಡ್ಡಿ ಸರ್ಕಾರವನ್ನು ಪತನಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ' ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.

ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ

ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕೂತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
Two Independent MLAs H.Nagesh Mulbagal and R.Shankar Ranebennur withdraw their support for Karnataka government. 6 Congress MLA's may quit party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X