ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಜನೀಶ್ ಗೋಯಲ್ ದಂಪತಿ ಸೇರಿ 6 ಐಎಎಸ್ ಅಧಿಕಾರಿಗಳ ವರ್ಗಾವಣೆ

By Sachhidananda Acharya
|
Google Oneindia Kannada News

ಬೆಂಗಳೂರು, ಅಕ್ಟೋಬರ್ 10: ಡಾ. ಶಾಲಿನಿ ರಜನೀಶ್ ಹಾಗೂ ಡಾ. ರಜನೀಶ್ ಗೋಯಲ್ ಸೇರಿ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

ಇಂಧನ ಇಲಾಖೆ ಹಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ. ರಜನೀಶ್ ಗೋಯಲ್ ರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜತೆಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಹೊಣೆಗಾರಿಕೆಯನ್ನೂ ಅವರಿಗೆ ವಹಿಸಲಾಗಿದೆ.

6 IAS officers including Dr. Shalini Rajneesh and Dr. Rajneesh Goel transferred

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ. ಶಾಲಿನಿ ರಜನೀಶ್ ರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸರಕಾರ ವರ್ಗ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಜಯ್ ಸೇಥ್ ರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.

ಕಬ್ಬು ಅಭಿವೃದ್ದಿ ಆಯುಕ್ತ ಮತ್ತು ಸಕ್ಕರೆ ಮಂಡಳಿ ನಿರ್ದೇಶಕರಾಗಿದ್ದ ಡಾ ಪ್ರಕಾಶ್ ಜಿಸಿ ಯವರನ್ನು ಎಂಎಸ್ಐಎಲ್ ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಕರೆತರಲಾಗಿದೆ. ಇನ್ನು ಅವರನ್ನು ವರ್ಗಾವಣೆ ಮಾಡಲಾಗಿದ್ದರೂ ಹಳೆ ಹುದ್ದೆಯನ್ನೂ ಅವರಿಗೇ ಹೆಚ್ಚುವರಿಯಾಗಿ ನೀಡಲಾಗಿದೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಪಿ ರವಿಕುಮಾರ್ ರನ್ನು ಇಂಧನ ಇಲಾಖೆಯ ಹೆಚ್ವುವರಿ ಪ್ರಧಾನ ನಿರ್ದೇಶಕರ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಇನ್ನು ವರ್ಗವಣೆಯಾಗಿ ಯಾವುದೇ ಹುದ್ದೆಗೆ ನೇಮಕವಾಗದೇ ಇದ್ದ ಮಂಜುನಾಥ್ ಕೆಎಸ್ ಅವರನ್ನು ಕೈಮಗ್ಗ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

English summary
6 IAS officers including Dr. Shalini Rajneesh and Dr. Rajneesh Goel has been transferred. The order issued by the state government on Tuesday October 25.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X