Breaking; ಕರ್ನಾಟಕ ಸರ್ಕಾರದಿಂದ 6 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಡಿಸೆಂಬರ್ 07; ಕರ್ನಾಟಕ ಸರ್ಕಾರ ಬುಧವಾರ ಆಡಳಿತ ಯಂತ್ರದಲ್ಲಿ ಕೆಲವು ಬದಲಾವಣೆ ಮಾಡಿದೆ. ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಈ ವರ್ಗಾವಣೆಯಾಗಿದೆ.

ಭಾರತ ಚುನಾವಣಾ ಆಯೋಗ ಕರ್ನಾಟಕದಲ್ಲಿ ಮತದಾರರ ಪಟ್ಟಿಯ ನೋಂದಣಿ, ಪರಿಷ್ಕರಣಾ ಕಾರ್ಯ/ ಪ್ರಕ್ರಿಯೆಯನ್ನು ನಡೆಸುತ್ತಿದೆ. ಆದ್ದರಿಂದ ಚುನಾವಣಾ ಆಯೋಗ ಈ ಪ್ರಕ್ರಿಯೆಯು ಮುಕ್ತಾಯಗೊಳ್ಳುವವರೆಗೂ ಅಧಿಕಾರಿ/ ಸಿಬ್ಬಂದಿಗಳ ವರ್ಗಾವಣೆ ಮಾಡದಂತೆ ನಿರ್ದೇಶನ ನೀಡಿದೆ.

ಆದ್ದರಿಂದ ಕಂದಾಯ ಇಲಾಖೆ ಬುಧವಾರ ತಹಶೀಲ್ದಾರ್, ಉಪ ತಹಶೀಲ್ದಾರ್, ಶಿರಸ್ತೇದಾರ್, ಕಂದಾಯ ನಿರೀಕ್ಷಕರು/ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರುಗಳ ಯಾವುದೇ ವರ್ಗಾವಣೆ ಮತ್ತು ನಿಯೋಜನೆ/ ಓಓಡಿ ಪ್ರಸ್ತಾವನೆಗಳನ್ನು ಕಡತದಲ್ಲಿ ಜನವರಿ-2023ರ ಎರಡನೇ ವಾರದವರೆಗೆ ವಿಲೇ ಮಾಡಬಾರದು ಎಂದು ಸೂಚನೆ ನೀಡಿದೆ.

ಕರ್ನಾಟಕ ಸರ್ಕಾರ ಸಹ ಹಲವು ಇಲಾಖೆಗಳ ವರ್ಗಾವಣೆಗೆ ತಡೆ ನೀಡಿದೆ. ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಚೇರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಆರೋಗ್ಯ ಇಲಾಖೆಯ ವರ್ಗಾವಣೆಗಳಿಗೆ ತಡೆ ನೀಡಿ ಟಿಪ್ಪಣಿ ಹೊರಡಿಸಿತ್ತು.

ರಾಜ್ಯದಲ್ಲಿ ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ಸರ್ಕಾರ ಆಯಕಟ್ಟಿನ ಜಾಗಗಳಿಗೆ ವರ್ಗಾವಣೆ ಪೂರ್ಣಗೊಳಿಸಲಿದೆ.

6 IAS Officers Transferred By Karnataka Government

ವರ್ಗಾವಣೆಗೊಂಡ ಅಧಿಕಾರಿಗಳು

1 ಸುಷ್ಮಾ ಗೋಡಬೋಲೆ- ಸಿಇಒ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ

2 ಮಂಜುನಾಥ್ ಜೆ. - ಆಯುಕ್ತ, ಆಯುಷ್ ಇಲಾಖೆ

3 ಡಾ. ಅರುಂಧತಿ ಚಂದ್ರಶೇಖರ್ - ಖಜಾನೆ ಆಯುಕ್ತರು

4 ಡಾ. ನಂದಿನಿ ದೇವಿ ಕೆ.- ಕಾರ್ಯದರ್ಶಿ, ಮಾಹಿತಿ ಆಯೋಗ

5 ಡಾ. ನವೀನ್ ಭಟ್ ವೈ. - ಯೋಜನಾ ನಿರ್ದೇಶಕ, ರಾಷ್ಟ್ರೀಯ ಆರೋಗ್ಯ ಮಿಷನ್

6 ರಾಜೇಂದ್ರ ಚೋಳನ್ - ಡಿಪಿಎಆರ್ ಎಸಿಒಇ ಆಗಿ ವರ್ಗಾವಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+