ಬಿಜೆಪಿ 18 ಶಾಸಕರು ಈ ಕೆಲಸ ಮಾಡಿದರೆ 6 ತಿಂಗಳ ಅಮಾನತು ರದ್ದು: ಯು.ಟಿ ಖಾದರ್!
ಕರ್ನಾಟಕದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ವಿಚಾರವಾಗಿ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರು ಮಾತನಾಡಿದ್ದಾರೆ. ವಿಧಾನಸಭೆಯಲ್ಲಿ ಸಭಾಪತಿ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಜನ ಶಾಸಕರನ್ನು 6 ತಿಂಗಳ ಅವಧಿಗೆ ಅಮಾನತು ಮಾಡಿ ಆದೇಶ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಈ ವಿಚಾರವಾಗಿ ಯು.ಟಿ ಖಾದರ್ ಅವರು ಅಮಾನತು ಹಿಂಪಡೆಯುವ ಬಗ್ಗೆ ಸುಳಿವು ನೀಡಿದ್ದಾರೆ.
ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ರೀತಿ ಇರುವಾಗಲೇ ಅವರ ತಪ್ಪನ್ನು ತಿಳಿದುಕೊಂಡು ಮನವಿ ಮಾಡಲಿ. ಆಗ ಬಿಜೆಪಿಯ 18 ಜನ ಶಾಸಕರ ಆರು ತಿಂಗಳ ಅಮಾನತು ಅವಧಿಯನ್ನು ಕಡಿಮೆ ಮಾಡುತ್ತೇನೆ ಎಂದು ಖಾದರ್ ಅವರು ಹೇಳಿದ್ದಾರೆ. ಬಿಜೆಪಿಯ ಶಾಸಕರು ಕಾಗದಗಳನ್ನು ಹರಿದು ನನ್ನ ಮೇಲೆ ಎಸೆಯುವ ಮೂಲಕ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ್ದಾರೆ. ನನ್ನ ಕರ್ತವ್ಯ ನಿರ್ವಹಿಸುವುದಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಖಾದರ್ ಅವರು ಹೇಳಿದ್ದಾರೆ.

ಮುಂದೆ ಯಾರೂ ವಿಧಾನಸಭೆಯಲ್ಲಿ ಈ ರೀತಿ ಮಾಡಬಾರದು ಎನ್ನುವ ಎಚ್ಚರಿಕೆಯ ಸಂದೇಶವನ್ನು ಕೊಡಲು ಈ ಕ್ರಮ ಸರಿ ಇದೆ ಎಂದು ಯುಟಿ ಖಾದರ್ ಅವರು ಬಿಜೆಪಿ ನಾಯಕರ ಅಮಾನತು ಆದೇಶವನ್ನು ಸಮರ್ಥಿಸಿಕೊಂಡಿದ್ದಾರೆ. ಯಾವುದೇ ಸದಸ್ಯರು ಮುಂದೆ ಈ ರೀತಿಯ ವರ್ತಿಸಬಾರದು ಎನ್ನುವುದಕ್ಕೆ ಇದೊಂದು ಎಚ್ಚರಿಕೆ ಗಂಟೆ ಎಂದಿದ್ದಾರೆ.
ಜನಪ್ರತಿನಿಧಿಗಳು ಜನರಿಂದ ಆಯ್ಕೆ ಆಗಿರುತ್ತಾರೆ ಎನ್ನುವುದು ಗೊತ್ತಿದೆ. ಅದಕ್ಕೆ ಗೌರವ ನೀಡಿ ಶಾಸಕರು ನಡೆದುಕೊಳ್ಳಬೇಕಲ್ಲವೇ ಎಂದು ಯು.ಟಿ ಖಾದರ್ ಅವರು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರು ಈ ರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಈ ರೀತಿ ಮಾಡಿದ್ದರು. ಸಚಿವರ ಹನಿಟ್ರ್ಯಾಪ್ ವಿಷಯವಾಗಿ ಸದನದಲ್ಲಿ ಸೃಷ್ಟಿಯಾಗಿದ್ದ ಗದ್ದಲದ ವಾತಾವರಣದಲ್ಲಿ ಸ್ಪೀಕರ್ ಆದೇಶವನ್ನು ಸಹ ಗಣನೆಗೆ ತೆಗೆದುಕೊಳ್ಳದೆ. ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಅಶಿಸ್ತು ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ ಈ ರೀತಿ ಆರು ತಿಂಗಳ ಅವಧಿಗೆ ಅಮಾನತು ಮಾಡಿರುವುದಾಗಿ ಅವರು ಹೇಳಿದ್ದಾರೆ.
ಬಿಜೆಪಿಯ ಶಾಸಕರು ಕುರ್ಚಿಯ ಮೇಲೆ ಹತ್ತಿ ನಿಂತುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಅಶಿಸ್ತಿನ ವರ್ತನೆ ಹಾಗೂ ಸ್ಪೀಕರ್ ಕುರ್ಚಿಗೆ ಅಗೌರವವಾಗಿ ನಡೆದುಕೊಂಡಿದ್ದರಿಂದ ಶಾಸಕರನ್ನು ಸದನದಿಂದ ಅಮಾನತು ಮಾಡಲಾಗಿದೆ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆ ನಿಯಮಗಳ ಅನುಸಾರ ನಿಯಮ 348ರ ಅನ್ವಯ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಯಾವ ಒತ್ತಡದ ಪ್ರಶ್ನೆಯೂ ಇಲ್ಲ: ಈ ವಿಚಾರದಲ್ಲಿ ಯಾವ ಒತ್ತಡದ ಪ್ರಶ್ನೆಯೂ ಇಲ್ಲ ಎಂದು ಅವರು ಹೇಳಿದ್ದಾರೆ. ಯು.ಟಿ ಖಾದರ್ ಅವರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಇದೀಗ ಈ ವಿಚಾರವಾಗಿ ಮಾತನಾಡಿರುವ ಖಾದರ್ ಅವರು, ಶಾಸಕರ ಮೇಲಿನ ಕೋಪವಾಗಲಿ ಇಲ್ಲವೇ ದ್ವೇಷದ ಕಾರಣಕ್ಕೆ ಅವರನ್ನು ಅಮಾನತು ಮಾಡಿಲ್ಲ. ಬಿಜೆಪಿಯ 18 ಶಾಸಕರು ಮನವಿ ಮಾಡಿದರೆ ಮುಂದಿನ ನಿರ್ಧಾರ ತೆಗೆದುಕೊಳ್ಳುಬಹುದು ಎಂದಿದ್ದಾರೆ. ಈ ಮೂಲಕ 18 ಜನ ಬಿಜೆಪಿ ಶಾಸಕರ ಅಮಾತನು ಆದೇಶವನ್ನು ಹಿಂಪಡೆಯುವ ಬಗ್ಗೆ ಸುಳಿವು ನೀಡಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications