Cauvery River: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲು: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Cauvery River: ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾಗಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾಗಿದ್ದಾರೆ. ಈ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

Cauvery River

ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ ಏನು

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ 6 ಜನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕು ಅರ್ಕೇಶ್ವರ ದೇಗುಲದ ಸಮೀಪದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಯಾಸಿನ್ (23), ಫಾತಿಮ್ (30), ಹುಮಾಯೂನ್ (7), ನೇಹಾನ್(19) ಹಾಗೂ ಅಲೀಂ(13) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಮತ್ತೊಬ್ಬರು ಸಹ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಅವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಾಗಿದೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಭಾನುವಾರ ಉರೂಸ್ ಹಿನ್ನೆಲೆ ದರ್ಗಾಕ್ಕೆ ಬೆಂಗಳೂರು ಮತ್ತು ಊಟಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಜನ ಬಂದಿದ್ದರು. ಭಾನುವಾರ 8 ಜನರಿದ್ದ ತಂಡವೊಂದು ಅರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಗೆ ಈಜಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ನದಿಯಲ್ಲಿ ಮುಳುಗಿದ್ದಾರೆ. ಕೂಡಲೇ ಸ್ಥಳೀಯರು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಉಳಿದ ಆರು ಜನರು ನೀರುಪಾಲಾಗಿದ್ದು, ಮೃತಪಟ್ಟಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+