1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ ನಿಯಮ ಸಡಿಲಿಕೆ, ಶಾಲೆಗಳಿಗೆ ಸೂಚನೆಗಳು

ಬೆಂಗಳೂರು, ಏಪ್ರಿಲ್ 30: ಕರ್ನಾಟಕ ಸರ್ಕಾರ ಮಕ್ಕಳನ್ನು ಪ್ರಾಥಮಿಕ ಶಾಲೆಯ 1ನೇ ತರಗತಿಗೆ ದಾಖಲಾತಿ ಮಾಡಲು 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಕೆ ಮಾಡಿದೆ. ಪೋಷಕರ ಒತ್ತಾಯದ ಅನ್ವಯ ಈ ಶೈಕ್ಷಣಿಕ ವರ್ಷಕ್ಕೆ ಮಾತ್ರ ವಯೋಮಿತಿಯನ್ನು ಪರಿಷ್ಕರಣೆ ಮಾಡಲಾಗಿದೆ. ಈಗ ಈ ಕುರಿತು ಶಾಲೆಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ ಸುತ್ತೋಲೆಯನ್ನು ಹೊರಡಿಸಿದೆ.

ಈ ವಿಷಯಾನಯವಾಗಿ ರಾಜ್ಯ ನೀತಿ ಆಯೋಗದ ಶಿಫಾರಸ್ಸು/ ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶ ದಿನಾಂಕ 26/07/2022ರಲ್ಲಿ ಶೈಕ್ಷಣಿಕ ವರ್ಷದ ಜೂನ್ 1ನೇ ತಾರೀಖಿಗೆ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದಕ್ಕೆ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಲಾಗಿದೆ.

6 Year Must For Enrol To Class 1st Rule Relaxation Details

ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 1ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಲಾಗಿದೆ. 2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ 1ನೇ ತಾರೀಖಿಗೆ 6 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು.

ಸರ್ಕಾರದ ಆದೇಶ ದಿನಾಂಕ 26/06/2024ರಲ್ಲಿ ಈಗಾಗಲೇ ಎಲ್.ಕೆ.ಜಿ ಪ್ರವೇಶಾತಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಟ ವಯೋಮಿತಿ ನಿಗದಿಪಡಿಸಲಾಗಿರುತ್ತದೆ. ಅದರಂತೆ 2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳತಕ್ಕದ್ದು. ಈ ಕುರಿತ ನಿಯಮವನ್ನು ಎಲ್ಲಾ ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ಸುತ್ತೋಲೆ ಹೇಳಿದೆ.

ವಯೋಮಿತಿ ಒಂದು ಬಾರಿಗೆ ಸಡಿಲಿಕೆ: ಕರ್ನಾಟಕ ಸರ್ಕಾರ ಈಗಾಗಲೇ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಲು ನಿಗದಿಪಡಿಸಿರುವ ವಯೋಮಿತಿಯನ್ನು 2025-26ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಒಂದು ಬಾರಿಗೆ ಮಾತ್ರ ಸಡಿಲಿಸುವ ಬಗ್ಗೆ. ಮಾತ್ರ ಆದೇಶವನ್ನು ಹೊರಡಿಸಿದೆ.

ಶಿಕ್ಷಣ ಹಕ್ಕು ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ. ತಿದ್ದುಪಡಿ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದನ್ನು 2025-2026ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಲಾಗಿರುತ್ತದೆ.

ಒಂದನೇ ತರಗತಿ ಪ್ರವೇಶಾತಿಗೆ ಪ್ರಸ್ತುತ ನಿಗದಿಪಡಿಸಿರುವ ಕನಿಷ್ಠ 6 ವರ್ಷಗಳ ವಯೋಮಿತಿಯನ್ನು ಸಡಿಲಿಸಲು ರಾಜ್ಯಾದ್ಯಂತ ಪೋಷಕರಿಂದ ಹಲವಾರು ಮನವಿಗಳು ಸ್ವೀಕೃತವಾಗುತ್ತಿದ್ದು, ಒಂದನೇ ತರಗತಿಗೆ 5 ವರ್ಷ 5 ತಿಂಗಳು ವಯೋಮಿತಿಯನ್ನು ಮರುನಿಗದಿಗೊಳಿಸಲು ಸರ್ಕಾರದ ಹಂತದಲ್ಲಿ ಸೂಕ್ತ ಆದೇಶ ಹೊರಡಿಸುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ. 1ನೇ ತರಗತಿಯ ಪ್ರವೇಶಾತಿಗೆ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸುವುದು ರಾಜ್ಯ ಶಿಕ್ಷಣ ನೀತಿಯ ಚೌಕಟ್ಟಿಗೆ ಒಳಪಟ್ಟಿರುವುದರಿಂದ ಈ ಕುರಿತು ಕೂಲಂಕಷವಾಗಿ ಪರಿಶೀಲಿಸಿ ಸಲಹೆ ನೀಡುವಂತೆ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ಕೋರಲಾಗಿತ್ತು.

ರಾಜ್ಯ ಶಿಕ್ಷಣ ನೀತಿ ಆಯೋಗವು ಈ ವಿಷಯದಲ್ಲಿ ಅನುಸರಿಸಲಾಗುತ್ತಿರುವ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪದ್ಧತಿಗಳು ಮಗುವಿನ ಮಾನಸಿಕ ಬೆಳವಣಿಗೆ ಮತ್ತು ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಒಂದನೇ ತರಗತಿಯ ದಾಖಲಾತಿಗೆ 6 ವರ್ಷಗಳ ಕನಿಷ್ಠ ವಯೋಮಿತಿ ನಿಗದಿಪಡಿಸಿರುವುದು ಹಾಗೂ ಮಗುವಿನ ಒತ್ತಡರಹಿತ ಕಲಿಕೆಗೆ ಪೂರಕವಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿರುವ 6 ವರ್ಷಗಳ ಕನಿಷ್ಠ ವಯೋಮಿತಿ ಸಮರ್ಪಕವಾಗಿರುತ್ತದೆ ಎಂದು ಅಭಿಪ್ರಾಯಿಸಿರುತ್ತದೆ. ವೈಯಕ್ತಿಕ ತೊಡಕಗಳನ್ನು ಪರಿಗಣಿಸಿ ಶಿಕ್ಷಣ ನೀತಿಯಲ್ಲಿ ಬದಲಾವಣೆ ಮಾಡಲಾಗದು ಎಂದು ಮತ್ತು ವಿವಿಧ ನ್ಯಾಯಾಲಯಗಳು ಈ ಅಂಶವನ್ನು ಎತ್ತಿ ಹಿಡಿದಿರುವುದಾಗಿ ವರದಿಯಲ್ಲಿ ತಿಳಿಸಿರುತ್ತಾರೆ.

ಆದಾಗ್ಯೂ, 2025-2026ರ ಶೈಕ್ಷಣಿಕ ವರ್ಷಕ್ಕಿಂತ ಪೂರ್ವದಲ್ಲಿ ಪೂರ್ವ ಪ್ರಾಥಮಿಕ ತರಗತಿ ಪೂರ್ಣಗೊಳಿಸಿರುವ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ನಿಗದಿಪಡಿಸಿರುವ 6 ವರ್ಷಗಳ ಕನಿಷ್ಠ ವಯೋಮಿತಿಗೆ 2025-2026ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತಗೊಳಿಸಿ ವಿನಾಯಿತಿ ನೀಡಬಹುದೆಂದು ಅಭಿಪ್ರಾಯ ನೀಡಿರುತ್ತದೆ ಎಂದು ಸುತ್ತೋಲೆ ಹೇಳಿದೆ.

ಆಯುಕ್ತರಿಂದ ಸ್ವೀಕೃತವಾಗಿರುವ ಕಡತದಲ್ಲಿನ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ ಶಿಫಾರಸ್ಸುಗಳನ್ನು ಪರಿಗಣಿಸಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ 1ನೇ ತರಗತಿಗೆ ದಾಖಲು ಮಾಡಲು ನಿಗದಿಪಡಿಸಿರುವ 6 ವರ್ಷಗಳ ವಯೋಮಿತಿಗೆ ಸಡಿಲಿಕೆಯನ್ನು ನೀಡಲು, ಅಂದರೆ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 1ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ.

ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸ್ಸು/ ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶ ದಿನಾಂಕ 26.07.2022ರಲ್ಲಿ ಶೈಕ್ಷಣಿಕ ವರ್ಷದ ಜೂನ್ 1ನೇ ತಾರೀಖಿಗೆ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದಕ್ಕೆ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಲಾಗಿದೆ.

2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ 1ನೇ ತಾರೀಖಿಗೆ 6 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು ಮತ್ತು ಸರ್ಕಾರದ ಆದೇಶ ದಿನಾಂಕ 26/06/2024ರಲ್ಲಿ ಈಗಾಗಲೇ ಎಲ್.ಕೆ.ಜಿ ಪ್ರವೇಶಾತಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗದಿಪಡಿಸಲಾಗಿರುತ್ತದೆ. ಅದರಂತೆ 2025-2026ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+