ರಾಜ್ಯದಲ್ಲಿ ಇದೀಗ ಶೇ 60% ಕಮಿಷನ್‌ ಹಾವಳಿ, ಏನಿದು ಹೊಸ ಆರೋಪ ?

ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್‌ ಭಾರೀ ಸದ್ದು ಮಾಡಿತ್ತು. ಆದರೆ, ಇದೀಗ ಕಮಿಷನ್‌ ಪ್ರಮಾಣ ಭಾರೀ ಹೆಚ್ಚಳವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹೌದು ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ 40 ಪರ್ಸೆಂಟ್ ಕಮಿಷ್ ತೆಗೆದುಕೊಳ್ಳುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಅಲ್ಲದೇ ಇದೇ ವಿಚಾರವನ್ನು ಇಟ್ಟುಕೊಂಡೇ ಕಾಂಗ್ರೆಸ್‌ ರಾಜ್ಯದಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಹಾಗೂ ಜಾಹೀರಾತುಗಳನ್ನು ನೀಡಿತ್ತು. ಪೇ ಸಿಎಂ ಹಾಗೂ 40% ಕಮಿಷನ್‌ ಹೇಳಿಕೆ ಹಾಗೂ ಜಾಹೀರಾತುಗಳು ದೇಶದಾದ್ಯಂತ ಸುದ್ದಿಯಾಗಿತ್ತು. ಆದರೆ, ಇದೀಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿದ್ದು, ಇದೀಗ ಕಾಂಗ್ರೆಸ್‌ ಪಕ್ಷವೇ 60% ಕಮಿಷ್‌ ತಗೆದುಕೊಳ್ಳತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಕರ್ನಾಟಕದಲ್ಲಿ ಕಮಿಷನ್‌ ವಿಚಾರ ಕಳೆದ 10 ವರ್ಷಗಳಿಂದಲೂ ಸುದ್ದಿ ಮಾಡುತ್ತಲ್ಲೇ ಇದೆ. ಕರ್ನಾಟಕದಲ್ಲಿ ಮೊದಲು ಕಾಂಗ್ರೆಸ್‌ ಅಧಿಕಾರದಲ್ಲಿ ಇತ್ತು. ಈ ಅವಧಿಯಲ್ಲಿ ರಾಜ್ಯಕ್ಕೆ ಭೇಟಿ ನೀಡಿ ಚುನಾವಣೆ ಪ್ರಚಾರ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 10% ಸರ್ಕಾರ ಇದೆ ಎಂದಿದ್ದರು. ಇದಾದ ಮೇಲೆ 2023ನೇ ಸಾಲಿನಲ್ಲಿ ಕಮಿಷನ್‌ ಆರೋಪ ಮಾಡುವುದು ಕಾಂಗ್ರೆಸ್‌ ಸರತಿಯಾಗಿತ್ತು. ಇದೀಗ ಮತ್ತೆ ಕಾಂಗ್ರೆಸ್‌ನಿಂದಲೇ ಕಮಿಷನ್‌ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ಆರೋಪಿಸಿದ್ದಾರೆ.

60 Commission in the state now what is the new allegation

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 40% ಸರ್ಕಾರ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಇದೀಗ ಶೇ 60% ಲಂಚ ಹೊಡೆದು ರಾಜ್ಯವನ್ನೇ ಲೂಟಿ ಮಾಡುತ್ತಿದೆ ಎಂದು ಆರ್.‌ ಅಶೋಕ್‌ ಆರೋಪಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಖಾಸಗಿ ಕಂಪನಿಯೊಂದು ಪತ್ರ ಬರೆದಿದೆ. ಅಲ್ಲದೇ ಏಪ್ರಿಲ್ 22ರಂದು ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರದ 60% ಲಂಚಾವತಾರದ ಮುಖವಾಡ ಈ ವಿಷಯವನ್ನು ಬಯಲು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರ ಸಂಘ ಬರೆದಿರುವ ಪತ್ರದಲ್ಲಿ 700 ಕೋಟಿ ರೂಪಾಯಿ ಲಂಚದ ಬಗ್ಗೆ ಆರೋಪ ಮಾಡಿದ್ದಾರೆ. ಈಗ ಖಾಸಗಿ ಕಂಪನಿಯೊಂದು 60% ಕಮಿಷನ್ ಆರೋಪ ಮಾಡುತ್ತಿದೆ ಎಂದು ದೂರಿದ್ದಾರೆ.

ದಿನ ಬೆಳಗಾದರೆ ಕರ್ನಾಟಕದಲ್ಲಿ ಒಂದು ಹೊಸ ಹಗರಣದ ಕಥೆ ಕೇಳಿ.. ಕೇಳಿ.. ಕನ್ನಡಿಗರು ರೋಸಿ ಹೋಗಿದ್ದಾರೆ. ಕನ್ನಡಿಗರ ತಾಳ್ಮೆಯನ್ನು ಪರೀಕ್ಷೆ ಮಾಡಬೇಡಿ. ರಾಜೀನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನದರೂ ಉಳಿಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಗಿಯದ ಕಮಿಷನ್‌ ಆರೋಪ: ರಾಜ್ಯದಲ್ಲಿ ಕಳೆದ 10ರಿಂದ 15 ವರ್ಷಗಳಿಂದ ಕಮಿಷನ್‌ ವಿಚಾರ ನಿಲ್ಲುತ್ತಲ್ಲೇ ಇಲ್ಲ. ಈ ಹಿಂದೆ ಬಿಜೆಪಿಯ ವಿರುದ್ಧ ಕಾಂಗ್ರೆಸ್‌ ಆರೋಪ ಮಾಡಿತ್ತು. ಇದೀಗ ಕಾಂಗ್ರೆಸ್‌ ವಿರುದ್ಧವೇ ಬಿಜೆಪಿ ಮತ್ತೆ ಆರೋಪ ಮಾಡುತ್ತಿದೆ. ಹೀಗಾಗಿ, ರಾಜ್ಯದಲ್ಲಿ ಇದು ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+