ಹಾವೇರಿ: 9 ರ ಬಾಲೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 60ರ ವೃದ್ಧ
ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ 9 ವರ್ಷದ ಬಾಲಕಿಯ ಮೇಲೆ 60 ವರ್ಷ ವಯಸ್ಸಿನ ವೃದ್ಧನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಮಾಬುಸಾಬ್ ನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸಿದ್ದಾರೆ. ಚಾಕಲೇಟ್ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ಪಾಲಕರು ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಶಾಂತಿ ಸಭೆ: ಈ ಮಧ್ಯೆ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಯತ್ನ ಖಂಡಿಸಿ ಗ್ರಾಮದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದರು.
ನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಅಂಗಡಿ ಮುಂಗಟ್ಟುಗಳನ್ನು ತೆರೆಯಿಸಿದರು. ನಂತರ ಎರಡು ಗುಂಪುಗಳ ಮಧ್ಯೆ ಸಂಧಾನ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಶಾಂತಿ ಸಭೆ ನಡೆಸಿ ಗ್ರಾಮದಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವುದಾಗಿ ಗ್ರಾಮಸ್ಥರು ತಿಳಿಸಿದರು.












Click it and Unblock the Notifications