ರಾಜ್ಯದಲ್ಲಿ 61 ಹೊಸ ರೈಲು ನಿಲ್ದಾಣಗಳ ಸ್ಥಾಪನೆ: ಎಲ್ಲೆಲ್ಲಿ ಹಾಗೂ ವೆಚ್ಚದ ಮಾಹಿತಿ ತಿಳಿಯಿರಿ
ಸಾರಿಗೆ ವಿಭಾಗಗಳಲ್ಲಿ ಭಾರತೀಯ ರೈಲ್ವೆ ಅತೀ ದೊಡ್ಡ ಸಾರಿಗೆಯಾಗಿದೆ. ಇನ್ನು ವಿ.ಸೋಮಣ್ಣ ಅವರು ರಾಜ್ಯ ರೈಲ್ವೆ ಖಾತೆ ಸಚಿವರಾದಾಗಿನಿಂದಲೂ ರೈಲ್ವೆ ವಿಭಾಗದಲ್ಲಿ ಅಭಿವೃದ್ಧಿ ಕಾರ್ಯಗಳ ಕಡೆಗೆ ಹೆಚ್ಚು ಗಮನಹರಿಸುತ್ತಿದ್ದಾರೆ. ಇದೀಗ ರಾಜ್ಯದಲ್ಲಿ 61 ಹೊಸ ರೈಲು ನಿಲ್ದಾಣಗಳ ಸ್ಥಾಪನೆ ಬಗ್ಗೆ ಬಿಗ್ ಅಪ್ಡೇಟ್ ಮಾಹಿತಿಯೊಂದನ್ನು ನೀಡಿದ್ದಾರೆ.
ಭಾರತೀಯ ರೈಲ್ವೆಯಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆಗಳು ಆಗುತ್ತಲೇ ಇವೆ. ಇದು ಅತ್ಯಂತ ಜನಪ್ರಿಯಲ್ಲಿ ಒಮದಾಗಿದ್ದು, ಪ್ರತಿದಿನ ಇದರಲ್ಲಿಯೇ ಹೆಚ್ಚು ಜನ ಪ್ರಯಾಣ ಮಾಡುತ್ತಾರೆ. ಆದ್ದರಿಂದ ಪ್ರಯಾಣಿಕರ ಬೇಡಿಕೆ ಮೇರೆಗೆ ಹೊಸ ಮಾರ್ಗಗಳಲ್ಲಿ ರೈಲು ಸಂಚಾರ, ಹೆಚ್ಚುವರಿ ರೈಲುಗಳನ್ನು ಬಿಡುವ ಕಾರ್ಯ ಕೂಡ ನಡೆಯುತ್ತಿದೆ.

ಈ ನಡುವೇ ಮುಂಬರುವ 2027ರ ವೇಳೆಗೆ ರಾಜ್ಯದಲ್ಲಿ61 ಹೊಸ ರೈಲು ನಿಲ್ದಾಣಗಳು ಸ್ಥಾಪನೆ ಆಗಲಿವೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.
ತುರುವೇಕೆರೆ ಪಟ್ಟಣದ ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಕೇಂದ್ರ ಸರ್ಕಾರದ ವಿಶೇಷ ಎಐಡಿಪಿ ಯೋಜನೆಯಡಿ ದಿವ್ಯಾಂಗರಿಗೆ ಉಚಿತ ಸಾಧನ ಸಲಕರಣೆ ವಿತರಣೆ ಮತ್ತು ಸಾರ್ವಜನಿಕ ಕುಂದು ಕೊರತೆ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಸುಮಾರು 2,000 ಕೋಟಿ ರೂಪಾಯಿ ವೆಚ್ಚದಲ್ಲಿಈ ಹೊಸ ರೈಲು ನಿಲ್ದಾಣಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಜೊತೆಗೆ ಈ ಅವಧಿಗೆ ಸುಮಾರು 12,೦೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರೈಲ್ವೆ ನಿಲ್ದಾಣಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ತುಮಕೂರು ಲೋಕಸಭಾ ಕ್ಷೇತ್ರ ವೇಗವಾಗಿ ಪ್ರಗತಿಯತ್ತ ಸಾಗುತ್ತಿದೆ. ಕೇಂದ್ರ ಸಚಿವ ಸ್ಥಾನದಲ್ಲಿ ಸೇವೆ ನಿರ್ವಹಿಸಲು ಮುಖ್ಯವಾಗಿ ಆಶೀರ್ವದಿಸಿ ಅವಕಾಶ ಕಲ್ಪಿಸಿಕೊಟ್ಟ ತುರುವೇಕೆರೆ ಜನತೆಗೆ ನನ್ನ ಕೊನೇ ಉಸಿರು ಇರುವವರೆಗೂ ಪಕ್ಷಾತೀತವಾಗಿ ನಿಮ್ಮ ಸೇವೆ ಮಾಡುತ್ತೇನೆ ಎಂದು ವಿ.ಸೋಮಣ್ಣ ಹೇಳಿದರು.
ಶಾಸಕ ಎಂ.ಟಿ. ಕೃಷ್ಣಪ್ಪ ಮತ್ತು ಮಾಜಿ ಶಾಸಕ ಮಸಾಲಾ ಜಯರಾಮ್ ನಾಣ್ಯದ ಎರಡು ಮುಖಗಳಿದ್ದಂತೆ. ನಿರೀಕ್ಷೆ ಇಟ್ಟುಕೊಂಡಿದ್ದಕ್ಕಿಂತ ತಾಲೂಕಿನಲ್ಲಿ ಪಕ್ಷಾತೀತವಾಗಿ ಅತೀ ಹೆಚ್ಚು ಮತ ನೀಡಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಿ. ನರೇಂದ್ರ ಮೋದಿಯವರ ಭವಿಷ್ಯ ಭಾರತದ ದೂರದೃಷ್ಟಿಯ ಚಿಂತಕರ ಜೊತೆಯಲ್ಲಿ ಕೆಲಸ ಮಾಡುವ ಅವಕಾಶ ನಿಮ್ಮಿಂದ ಸಿಕ್ಕಿದೆ ಎಂದರು.
ಅಲ್ಲದೆ, ನೀವು ನನ್ನ ಮೇಲೆ ಇಟ್ಟಿರುವ ವಿಶ್ವಾಸ, ನಂಬಿಕೆಗೆ ಕೊನೆ ಉಸಿರು ಇರುವವರೆಗೂ ನಿಮಗೆ ಆಭಾರಿಯಾಗಿರುವೆ. ತುಮಕೂರು ಜಿಲ್ಲೆಯ ಅಭಿವೃದ್ಧಿಯೇ ನನ್ನ ಧ್ಯೇಯ. ಪಕ್ಷಾತೀತವಾಗಿ ಪ್ರಮಾಣಿಕ ಸೇವೆಯ ಪ್ರಯತ್ನ ಮಾಡುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದರು.
ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, ದುರಾದೃಷ್ಟ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಕೇಂದ್ರ ಸರ್ಕಾರದ ಅನುದಾನದಿಂದ ಜನರಿಗೆ ಸೇವೆ ನೀಡಲು ದಾರಿ ಕಾಯಬೇಕಿದೆ. ಬಿಟ್ಟಿ ಗ್ಯಾರಂಟಿಗಳ ಹೆಸರಿನಲ್ಲಿ ತೆರಿಗೆ ದರೋಡೆ ಹೊಡೆಯುತ್ತಿದ್ದಾರೆ. ಹೀಗೆ ಸಿದ್ದರಾಮಯ್ಯ ಅವರ ಸರ್ಕಾರ ತೆರಿಗೆ ರಾಮಾಯಣದ ಸರ್ಕಾರವಾಗಿದೆ ಎಂದು ಆಕ್ರೋಶ ಹೊರಹಾಕಿದರು.












Click it and Unblock the Notifications