ಶಕ್ತಿ ಯೋಜನೆಗೆ ಶತಕ: 62 ಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ, ಖರ್ಚಾದ ಟಿಕೆಟ್ ದರವೆಷ್ಟು?
ಬೆಂಗಳೂರು, ಸೆಪ್ಟೆಂಬರ್ 20:ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮೊಟ್ಟ ಮೊದಲನೆಯದಾಗಿ ಜಾರಿಗೊಳಿಸಿದ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ 100 ದಿನಗಳನ್ನು ಪೂರೈಸಿದೆ.
ಶಕ್ತಿ ಯೋಜನೆ ಅಡಿಯಲ್ಲಿ ನೂರು ದಿನಗಳಲ್ಲಿ 62,55 ಕೋಟಿ ಮಹಿಳೆಯರು ಬಸ್‌ನಲ್ಲಿ ಪ್ರಯಾಣ ಮಾಡಿದ್ದು, ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ 1,456 ಕೋಟಿ ರೂಗೆ ತಲುಪಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿತ್ತು. ಬಳಿಕನುಡಿದಂತೆ ನಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಗ್ಯಾರಂಟಿ ಯೋಜನೆಯಾಗಿ ಜೂನ್ 11ರಂದು ಶಕ್ತಿ ಯೋಜನೆ ಜಾರಿಗೆ ತಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ,ಎನ್‌ಡಬ್ಲ್ಯೂಕೆಆರ್‌ಟಿಸಿಯ ಎಲ್ಲ ವೇಗದೂತ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗಿತ್ತು. ರಾಜ್ಯದಲ್ಲಿ ಈ ಯೋಜನೆ ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ.
ಜೂನ್ 11ರಿಂದ ಸೆಪ್ಟೆಂಬರ್ 19ರವರೆಗೆ ಶಕ್ತಿ ಯೋಜನೆಯಡಿ 62,55,39,727 ಮಹಿಳೆಯರು ಉಚಿತ ಬಸ್‌ನಲ್ಲಿ ಪ್ರಯಾಣ ನಡೆಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್ ದರ 1456,09,64,867 ರೂಪಾಯಿ ಆಗಿದೆ.
100 ದಿನದಲ್ಲಿ ಯಾವ ಯಾವ ನಿಗಮದಿಂದ ಎಷ್ಟು ಮಹಿಳೆಯರು ಸಂಚಾರ?; ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಎಷ್ಟು?
| ಕ್ರಮ ಸಂಖ್ಯೆ | ವಿಭಾಗ | ಮಹಿಳೆಯರು ಸಂಚಾರ | ಪ್ರಯಾಣದ ಟಿಕೆಟ್ ಮೌಲ್ಯ |
| 1 | ಕೆಎಸ್ಆರ್ಟಿಸಿ | 18,64,69,897 | 541,64,12,207 |
| 2 | ಬಿಎಂಟಿಸಿ | 20,73,07,516 | 264,01,82,826 |
| 3 | NWKRTC | 14,55,22,859 | 368,01,97,845 |
| 4 | KKRTC | 8,62,39,455 | 282,41,71,989 |












Click it and Unblock the Notifications