ಕರ್ನಾಟಕದಲ್ಲಿ 600 ಗಡಿ ದಾಟಿದ ಕೊರೊನಾವೈರಸ್
ಬೆಂಗಳೂರು, ಮಾರ್ಚ್.07: ಕರ್ನಾಟಕದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 600ರ ಗಡಿ ದಾಟಿದೆ. ಕರ್ನಾಟಕದಲ್ಲಿ ಒಂದೇ ದಿನ 622 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 351 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ 935772 ಸೋಂಕಿತರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 955015 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. 24 ಗಂಟೆಗಳಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12362ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ 6862 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ಜಿಲ್ಲಾವಾರು ಕೊವಿಡ್-19 ಕೇಸ್:
ರಾಜ್ಯದಲ್ಲಿ ಒಟ್ಟು 622 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು 389, ಬೀದರ್ 24, ಚಾಮರಾಜನಗರ 3, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 16, ದಾವಣಗೆರೆ 2, ಧಾರವಾಡ 16, ಗದಗ 4, ಹಾಸನ 3, ಹಾವೇರಿ 1, ಕಲಬುರಗಿ 34, ಕೊಡಗು 4, ಕೋಲಾರ 6, ಕೊಪ್ಪಳ 0, ಮಂಡ್ಯ 3, ಮೈಸೂರು 11, ರಾಯಚೂರು 1, ರಾಮನಗರ 0, ಶಿವಮೊಗ್ಗ 1, ತುಮಕೂರು 25, ಉಡುಪಿ 30, ಉತ್ತರ ಕನ್ನಡ 5, ವಿಜಯಪುರ 6, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications