ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 17 ಜಿಲ್ಲೆಗಳಲ್ಲಿ 100ಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19!

|
Google Oneindia Kannada News

ಬೆಂಗಳೂರು, ಆಗಸ್ಟ್.04: ಕೊರೊನಾವೈರಸ್ ಎಂಬ ಮಹಾಮಾರಿಯು ಕರ್ನಾಟಕಕ್ಕೆ ಮೇಲಿಂದ ಮೇಲೆ ಹೊಡೆತ ಕೊಡುತ್ತಿದೆ. ರಾಜ್ಯದಲ್ಲಿ ಪತ್ತೆಯಾಗಿರುವ ಕೊವಿಡ್-19 ಸೋಂಕಿತರ ಸಂಖ್ಯೆಯು ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

Recommended Video

ಒಂದು ದಿನ ಮುಂಚಿತವಾಗಿಯೇ ಅಯೋಧ್ಯೆಗೆ ಭೇಟಿ ಕೊಟ್ಟ ಯೋಗಿ | Oneindia Kannada

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ ಬರೋಬ್ಬರಿ 6259 ಮಂದಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ಖಾತ್ರಿಯಾಗಿದೆ. ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 145830ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ 10 ಸಾವಿರಕ್ಕಿಂತ ಕಡಿಮೆ ಕೋವಿಡ್ ಸಕ್ರಿಯ ಕೇಸ್!ದೆಹಲಿಯಲ್ಲಿ 10 ಸಾವಿರಕ್ಕಿಂತ ಕಡಿಮೆ ಕೋವಿಡ್ ಸಕ್ರಿಯ ಕೇಸ್!

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದೆ. ರಾಜ್ಯದಲ್ಲಿ ಒಂದೇ ದಿನ ಮಹಾಮಾರಿಗೆ 110 ಮಂದಿ ಪ್ರಾಣ ಬಿಟ್ಟಿದ್ದು, ಕೊವಿಡ್-19ಗೆ ಬಲಿಯಾದವರ ಸಂಖ್ಯೆಯು 2704ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6777 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 69272 ಮಂದಿ ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ರಾಜ್ಯದಲ್ಲಿ 73846 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕೊವಿಡ್ ಟೆಸ್ಟ್?

ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕೊವಿಡ್ ಟೆಸ್ಟ್?

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 27488 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 12970 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 42458 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 1489016 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ 2035 ಮಂದಿಗೆ ಕೊರೊನಾವೈರಸ್

ಸಿಲಿಕಾನ್ ಸಿಟಿಯಲ್ಲಿ 2035 ಮಂದಿಗೆ ಕೊರೊನಾವೈರಸ್

ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಮತ್ತೆ 2000ದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ ಸಿಲಿಕಾನ್ ಸಿಟಿಯ 2035 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 63033ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 31 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1134ಕ್ಕೆ ಏರಿಕೆಯಾಗಿದೆ.

ಕೊವಿಡ್ ಮರಣ ದರ‌: ಮಹಾರಾಷ್ಟ್ರ, ದೆಹಲಿಗಿಂತ ರಾಜ್ಯವೇ ಉತ್ತಮಕೊವಿಡ್ ಮರಣ ದರ‌: ಮಹಾರಾಷ್ಟ್ರ, ದೆಹಲಿಗಿಂತ ರಾಜ್ಯವೇ ಉತ್ತಮ

24 ಗಂಟೆಗಳಲ್ಲೇ 17 ಜಿಲ್ಲೆಗಯಲ್ಲಿ 100ಕ್ಕಿಂತ ಹೆಚ್ಚು ಪ್ರಕರಣ

24 ಗಂಟೆಗಳಲ್ಲೇ 17 ಜಿಲ್ಲೆಗಯಲ್ಲಿ 100ಕ್ಕಿಂತ ಹೆಚ್ಚು ಪ್ರಕರಣ

ರಾಜ್ಯದಲ್ಲಿ ಒಟ್ಟು 6259 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, 17 ಜಿಲ್ಲೆಗಳಲ್ಲಿ 100ಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು 2035, ಮೈಸೂರು 662, ಕಲಬುರಗಿ 285, ಬಳ್ಳಾರಿ 284, ಬೆಳಗಾವಿ 263, ದಕ್ಷಿಣ ಕನ್ನಡ 225, ದಾವಣಗೆರೆ 191, ಧಾರವಾಡ 188, ಹಾಸನ 188, ಚಿಕ್ಕಬಳ್ಳಾಪುರ 171, ಉಡುಪಿ 170, ಕೊಪ್ಪಳ 163, ಹಾವೇರಿ 157, ರಾಯಚೂರು 144, ಬಾಗಲಕೋಟೆ 144, ಮಂಡ್ಯ 126, ಬೀದರ್ 114, ಗದಗ 96, ಬೆಂಗಳೂರು ಗ್ರಾಮಾಂತರ 82, ತುಮಕೂರು 78, ಯಾದಗಿರಿ 76, ವಿಜಯಪುರ 71, ರಾಮನಗರ 65, ಚಿಕ್ಕಮಗಳೂರು 63, ಉತ್ತರ ಕನ್ನಡ 57, ಕೋಲಾರ 46, ಕೊಡಗು 31, ಶಿವಮೊಗ್ಗ 15, ಚಿತ್ರದುರ್ಗ 12 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.

ಕೋವಿಡ್ ಸೋಂಕಿತರು ಯಾವಾಗ ಚಿಕಿತ್ಸೆ ಪಡೆಯಬೇಕು?ಕೋವಿಡ್ ಸೋಂಕಿತರು ಯಾವಾಗ ಚಿಕಿತ್ಸೆ ಪಡೆಯಬೇಕು?

ರಾಜ್ಯದಲ್ಲಿ 24 ಗಂಟೆಗಳಲ್ಲೇ 6777 ಸೋಂಕಿತರು ಗುಣಮುಖ

ರಾಜ್ಯದಲ್ಲಿ 24 ಗಂಟೆಗಳಲ್ಲೇ 6777 ಸೋಂಕಿತರು ಗುಣಮುಖ

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ಸೋಂಕಿತರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗುತ್ತಿದೆ. ರಾಜ್ಯದಲ್ಲಿ ಗುಣಮುಖರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 6777 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರ 4274, ಬಳ್ಳಾರಿ 483, ಧಾರವಾಡ 293, ರಾಮನಗರ 259, ಮೈಸೂರು 164, ಉಡುಪಿ 161, ಕಲಬುರಗಿ 152, ರಾಯಚೂರು 116, ದಾವಣಗೆರೆ 93, ಚಿತ್ರದುರ್ಗ 79, ವಿಜಯಪುರ 78, ದಕ್ಷಿಣ ಕನ್ನಡ 73, ತುಮಕೂರು 59, ಬೆಂಗಳೂರು ಗ್ರಾಮಾಂತರ 56, ಗದಗ 55, ಹಾಸನ 44, ಶಿವಮೊಗ್ಗ 43, ಮಂಡ್ಯ 40, ಕೋಲಾರ 38, ಕೊಪ್ಪಳ 33, ಚಿಕ್ಕಬಳ್ಳಾಪುರ 31, ಬಾಗಲಕೋಟೆ 28, ಬೆಳಗಾವಿ 28, ಚಾಮರಾಜನಗರ 23, ಚಿಕ್ಕಮಗಳೂರು 23, ಬೀದರ್ 22, ಹಾವೇರಿ 16, ಯಾದಗಿರಿ 13 ಮಂದಿ ಗುಣಮುಖರಾಗಿದ್ದಾರೆ.

English summary
6259 New Coronavirus Cases Reported in Karnataka Today, State Tally Rise to 145830.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X