ಕೊರೊನಾ ಭೀತಿ; ಕರ್ನಾಟಕದ 636 ಕೈದಿಗಳಿಗೆ ಬಿಡುಗಡೆ ಭಾಗ್ಯ

ಬೆಂಗಳೂರು, ಏಪ್ರಿಲ್ 09 : ಜೈಲುಗಳಲ್ಲಿ ಜನಸಾಂದ್ರತೆ ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸಲಾಗುತ್ತಿದೆ. ಕರ್ನಾಟಕದ 636 ಕೈದಿಗಳಿಗೆ ಸರ್ಕಾರ ಮಧ್ಯಂತರ ಜಾಮೀನು ನೀಡಲಾಗಿದೆ.

ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ಈ ಕುರಿತು ಮಾಹಿತಿ ನೀಡಿದೆ. ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಕೈದಿಗಳಿಗೆ ಪೆರೋಲ್ ನೀಡಿ ಜೈಲಿನಲ್ಲಿ ಜನಸಾಂದ್ರತೆ ಕಡಿಮೆ ಮಾಡಲು ಸರ್ಕಾರ ಕ್ರಮವನ್ನು ಕೈಗೊಂಡಿದೆ ಎಂದು ತಿಳಿಸಲಾಗಿದೆ.

636 ಕೈದಿಗಳಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. 1379 ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ಗುರುತಿಸಲಾಗಿದೆ. ಇವರಲ್ಲಿ 14 ಜನರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.

636 Prisoners Granted Interim Bail

ಉಳಿದ ಕೈದಿಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. 215 ಕೈದಿಗಳು ಪೆರೋಲ್ ಮೇಲೆ ಬಿಡುಗಡೆ ಹೊಂದಲು ನಿರಾಕರಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ಸರ್ಕಾರ ಮಾಹಿತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಮತ್ತು ನ್ಯಾಯಮೂರ್ತಿ ಬಿ. ವಿ. ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠ ಕೈದಿಗಳಿಗೆ ನೀಡಲಾದ ಜಾಮೀನು ಆದೇಶವನ್ನು ಕಾಪಾಡಿಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ದೇಶದ ರಾಜ್ಯಗಳ ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚಿದೆ. ಒಬ್ಬರಿಗೆ ಸೋಂಕು ತಗುಲಿದರೆ ಉಳಿದವರಿಗೂ ಹಬ್ಬುವ ಸಾಧ್ಯತೆ ಇದೆ. ಆದ್ದರಿಂದ, ಜೈಲುಗಳಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+