Get Updates
Get notified of breaking news, exclusive insights, and must-see stories!

School Closes: ಕರ್ನಾಟಕ ಸರ್ಕಾರ ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ಬಸವರಾಜ ಬೊಮ್ಮಾಯಿ

ನವದೆಹಲಿ/ಬೆಂಗಳೂರು: ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆ ತೆರೆಯುವ ಸಂಬಂಧ ರಾಜ್ಯ ಸರ್ಕಾರ 'ಕೆಪಿಎಸ್ ಮ್ಯಾಗ್ನೆಟ್ ಯೋಜನೆ' ಜಾರಿಗೆ ಮುಂದಾಗಿದೆ. ಇದರ ಬೆನ್ನಲ್ಲೆ ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ಚರ್ಚೆಗಳು, ದೂರುಗಳು ಕೇಳಿ ಬಂದಿವೆ. ಇದೆಲ್ಲವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಿರಾಕರಿಸಿದರೂ ಸಹ ಇಂದು ಮತ್ತೆ ದೆಹಲಿಯಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಆಡಳಿತವನ್ನು ಖಂಡಿಸಿದ್ದಾರೆ.

ಸರ್ಕಾರದಿಂದ 638 ಕನ್ನಡ ಶಾಲೆ ಈಗಾಗಲೇ ಬಂದ್

ನವದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಅವರು ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಇದು ಕನ್ನಡ ವಿರೋಧಿ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ ಹಾಗೂ ಕನ್ನಡ ಶಾಲೆಗಳನ್ನು ಪುನಾರಾರಂಭಿಸುವಂತೆ ಅವರು ಆಗ್ರಹಿಸಿದರು.

638 Kannada Schools Closed

ಹತಾಶರಾದ ಕಾಂಗ್ರೆಸ್‌ ನಾಯಕರಿಂದ ಗಲಾಟೆ

ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮೇಲಿಂದ ಮೇಲೆ ಚುನಾವಣೆಯಲ್ಲಿ ಸೋಲುತ್ತಿರುವುದರಿಂದ ಹತಾಶರಾಗಿದ್ದಾರೆ. ಅವರ ನಾಯಕ ಹತಾಶರಾಗಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಅವರು ನಗರ ನಕ್ಷಲರಂತೆ ವರ್ತಿಸುತ್ತಿದ್ದಾರೆ. ಬೆಂಚ್ ಗಳ ಮೇಲೆ ನಿಲ್ಲುವುದು, ಸ್ಪೀಕರ್ ಮೇಲೆ ದಾಳಿ ಮಾಡುವುದು ಇದು ಮಿತಿ ಮೀರಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಮಂತ್ರಿಯ ಆಸನದವರೆಗೆ ಬಂದು ಅವರು ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಸಂಸತ್ತಿನ ಇತಿಹಾಸದಲ್ಲಿ ಯಾವತ್ತೂ ಆಗಿರಲಿಲ್ಲ ಎಂದು ಸಂಸತ್ ಅಧಿವೇಶನ ವೇಳೆ ಇತ್ತೀಚೆಗೆ ನಡೆದ ಘಟನಾವಳಿಗಳನ್ನು ಅವರು ವಿವರಿಸಿದರು.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಲಾಪವನ್ನು ಸುಗಮವಾಗಿ ನಡೆಸಲು ಬಿಡುತ್ತಾರೆ ಎನ್ನುವ ನಂಬಿಕೆ ಇದೆಯಾ? ಎಂಬ ಪ್ರಶ್ನೆಗೆ ಅವರು ಅವರು ಏನು ಮಾಡುತ್ತಾರೆ ಎನ್ನುವುದು ಗೊತ್ತಿಲ್ಲ. ಆದರೆ, ಅವರು ಜನರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ. ಅವರು ತೊಂದರೆ ಕೊಡುವುದನ್ನೇ ಅಜಂಡಾ ಮಾಡಿಕೊಂಡಿದ್ದಾರೆ. ಬಹುತೇಕವಾಗಿ ಅವರು ಅದನ್ನೆ ಮುಂದುವರಿಸಬಹುದೆಂದು ವಾಗ್ದಾಳಿ ನಡೆಸಿದರು.

ಹೊಸದಾಗಿ 6000 ಕರ್ನಾಟಕ ಪಬ್ಲಿಕ್ ಸ್ಕೂಲ್

ಹೊಸದಾಗಿ 6000 ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯಲು ಕೆಪಿಎಸ್ ಮ್ಯಾಗ್ನೆಟ್ ಯೋಜನೆಗಾಗಿ ರಾಜ್ಯ ಸರ್ಕಾರ 2500 ಕೋಟಿ ರೂಪಾಯಿ ಸಾಲ ಮಾಡಿದೆ. ಇದರಿಂದ 40000 ಸರ್ಕಾರಿ ಶಾಳೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಇದೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾವು ಯಾವುದೇ ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ ಈ ಮಾತನ್ನು ಬಿಜೆಪಿ ಸೇರಿ ಹಲವರು ನಂಬಿಲ್ಲ. ಹೀಗಾಗಿ ಈ ಚರ್ಚೆ ಮತ್ತೆ ಮುನ್ನೆಲೆಗೆ ಬರುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+