ನೀವೂ ಎಚ್ಚರಿಕೆ: ಬೆಂಗಳೂರಲ್ಲಿ ಬೆಳೆಯುತಿಹುದು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ!

ಬೆಂಗಳೂರು, ಜೂನ್ 15: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕೊವಿಡ್-19 ಪರೀಕ್ಷೆ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಪಾಸಿಟಿವಿಟಿ ದರವೂ ಏರಿಕೆಯಾಗಿರುವುದು ಅಂಕಿ-ಅಂಶಗಳಲ್ಲಿ ಸ್ಪಷ್ಟವಾಗುತ್ತಿದೆ.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪಾಸಿಟಿವಿಟಿ ದರವು ಶೇ.2.76ರಷ್ಟು ಹೆಚ್ಚಳವಾಗಿದೆ. ಅದೇ ರೀತಿ ಒಂದು ವಾರದಲ್ಲಿ ಕೊರೊನಾವೈರಸ್ ಪಾಸಿಟಿವಿಟಿ ದರದಲ್ಲಿ ಶೇ.2.44ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕರ್ನಾಟಕದ ಮಟ್ಟಿಗೆ ಕೋವಿಡ್-19 ಸೋಂಕಿತ ಪ್ರಕರಣಗಳು ಏರಿಕೆ ಕಂಡಿದ್ದರೂ, ಬೆಂಗಳೂರು ಹೆಚ್ಚು ಅಪಾಯಕಾರಿ ಎನ್ನುವುದು ಗೊತ್ತಾಗುತ್ತಿದೆ. ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಬಹುತೇಕ ಸೋಂಕಿತ ಪ್ರಕರಣಗಳು ಸಿಲಿಕಾನ್ ಸಿಟಿಯಲ್ಲೇ ವರದಿಯಾಗುತ್ತಿವೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಏರಿಳಿತದ ಕುರಿತು ಸಂಪೂರ್ಣ ಮಾಹಿತಿಯನ್ನು ಈ ವರದಿ ಓದಿ.

ರಾಜ್ಯದಲ್ಲಿ ಕೋವಿಡ್19 ಸೋಂಕಿತ ಪ್ರಕರಣಗಳು

ರಾಜ್ಯದಲ್ಲಿ ಕೋವಿಡ್19 ಸೋಂಕಿತ ಪ್ರಕರಣಗಳು

ಕಳೆದ 24 ಗಂಟೆಗಳಲ್ಲೇ 648 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 532 ಸೋಂಕಿತರು ಗುಣಮುಖರಾಗಿದ್ದು, ಒಂದು ಸಾವಿನ ಪ್ರಕರಣಗಳು ವರದಿಯಾಗಿದೆ. ಬುಧವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3957991 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3913885 ಸೋಂಕಿತರು ಗುಣಮುಖರಾಗಿದ್ದು, 40,067 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 3997 ಸಕ್ರಿಯ ಪ್ರಕರಣಗಳಿವೆ.

648ರಲ್ಲಿ ಬೆಂಗಳೂರಿನಲ್ಲೇ 615 ಪ್ರಕರಣಗಳು ವರದಿ

648ರಲ್ಲಿ ಬೆಂಗಳೂರಿನಲ್ಲೇ 615 ಪ್ರಕರಣಗಳು ವರದಿ

ಕರ್ನಾಟಕದ ಇಡೀ ರಾಜ್ಯದಲ್ಲಿ 648 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪಕ್ಕಾ ಆಗಿದ್ದರೆ, ಅದರಲ್ಲಿ 615 ಮಂದಿ ಸೋಂಕಿತರು ಬೆಂಗಳೂರಿನವರೇ ಆಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 615 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1793337ಕ್ಕೆ ಏರಿಕೆಯಾಗಿದೆ. ಇದುವರೆಗೂ 1772528 ಸೋಂಕಿತರು ಗುಣಮುಖರಾಗಿದ್ದರೆ, 16,965 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್-19 ಅಪಾಯ ಇನ್ನೂ ಕಡಿಮೆಯಾಗಿಲ್ಲ ಎನ್ನುವ ಸಂದೇಶ ರವಾನೆಯಾಗಿದೆ.

ಬೆಂಗಳೂರು ಹೊರತಾಗಿ ಇತರೆ ಎಲ್ಲಾ ಜಿಲ್ಲೆ ಸೇರಿ 10 ಪ್ರಕರಣ

ಬೆಂಗಳೂರು ಹೊರತಾಗಿ ಇತರೆ ಎಲ್ಲಾ ಜಿಲ್ಲೆ ಸೇರಿ 10 ಪ್ರಕರಣ

ಕರ್ನಾಟಕದಲ್ಲಿ ವರದಿ ಆಗಿರುವ ಒಟ್ಟು 648 ಕೊರೊನಾ ವೈರಸ್ ಪ್ರಕರಣಗಳಲ್ಲಿ 615 ಪ್ರಕರಣಗಳು ಬೆಂಗಳೂರು ನಗರ ಜಲ್ಲೆಗೆ ಸೇರಿವೆ. ಉಳಿದ 69 ಸೋಂಕಿತ ಪ್ರಕರಣಗಳ ಪೈಕಿ ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ದಕ್ಷಿಣ ಕನ್ನಡ 12, ಧಾರವಾಡ 4, ಹಾಸನ 1, ಕಲಬುರಗಿ 1, ಕೋಲಾರ 1, ಮೈಸೂರು 5, ಶಿವಮೊಗ್ಗ 3, ತುಮಕೂರು 2, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 1 ಕೋವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಅಂಕಿ-ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್-19 ತಪಾಸಣೆ ಮತ್ತು ಲಸಿಕೆ ವಿತರಣೆ

ರಾಜ್ಯದಲ್ಲಿ ಕೋವಿಡ್-19 ತಪಾಸಣೆ ಮತ್ತು ಲಸಿಕೆ ವಿತರಣೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7102 ಜನರಿಗೆ ರಾಪಿಡ್ ಆಂಟಿಜೆನಿಕ್ ಪರೀಕ್ಷೆ ನಡೆಸಲಾಗಿದೆ. 16350 ಜನರಿಗೆ RT-PCR ತಪಾಸಣೆ ನಡೆಸಲಾಗಿದ್ದು, ಒಂದು ದಿನದಲ್ಲಿ ಒಟ್ಟು 23452 ಮಂದಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ.

ಕರ್ನಾಟಕದಲ್ಲಿ ಈವರೆಗೂ 5,46,50,964 ಜನರಿಗೆ ಮೊದಲ ಡೋಸ್, 5,30,67,224 ಜನರಿಗೆ ಎರಡನೇ ಡೋಸ್ ಮತ್ತು 30,51,288 ಮಂದಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 11,05,33,835 ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+