ಕರ್ನಾಟಕದಲ್ಲಿ 6495 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಆಗಸ್ಟ್ 31 : ಕರ್ನಾಟಕದಲ್ಲಿ 6,495 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,42,423ಕ್ಕೆ ಏರಿಕೆಯಾಗಿದೆ.
Recommended Video
ಆರೋಗ್ಯ ಇಲಾಖೆ ಸೋಮವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಇಂದು ಮೃತಪಟ್ಟ ಸೋಂಕಿತರ ಸಂಖ್ಯೆ 113. ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 5,702.

ಕರ್ನಾಟಕದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,42,423ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 87,235. ರಾಜ್ಯದಲ್ಲಿ ಇಂದು 7238 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೂ ಕರ್ನಾಟಕದಲ್ಲಿ 2,49,467 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 747 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು 1862 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,29,125 ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 37,116.
ಚಿಕ್ಕಮಗಳೂರಿನಲ್ಲಿ 100, ಚಿತ್ರದುರ್ಗದಲ್ಲಿ 286, ದಕ್ಷಿಣ ಕನ್ನಡದಲ್ಲಿ 270, ದಾವಣಗೆರೆಯಲ್ಲಿ 257, ಧಾರವಾಡದಲ್ಲಿ 279 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.












Click it and Unblock the Notifications