ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಶೇ. 66ರಷ್ಟು ಮಕ್ಕಳಿಗೆ ಮೊದಲ ಡೋಸ್ ಲಸಿಕೆ: ಕೆ. ಸುಧಾಕರ್

|
Google Oneindia Kannada News

ಬೆಂಗಳೂರು, ಜನವರಿ 21:ರಾಜ್ಯದ ಶೇ.66ರಷ್ಟು ಮಕ್ಕಳಿಗೆ ಕೊರೊನಾ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಕೂನಲ್ಲಿ ಲಸಿಕೆ ಕುರಿತು ವಿಷಯ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ 15 ರಿಂದ 18 ವರ್ಷ ವರ್ಗದ ಮಕ್ಕಳಲ್ಲಿ ಮೂರನೇ ಎರಡು ಭಾಗದಷ್ಟು ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದು ಕೊಂಡಿದ್ದಾರೆ ಎನ್ನುವ ಮಾಹಿತಿ ಜೊತೆಗೆ ಪ್ರತಿ ಜಿಲ್ಲೆಗಳಲ್ಲಿ ಎಷ್ಟು ಮಕ್ಕಳು ಲಸಿಕೆ ಪಡೆದಿದ್ದರೆ ಎನ್ನುವುದನ್ನು ತಿಳಿಸಿದ್ದಾರೆ.

ಇದರಲ್ಲಿ ಗದಗ ಜಿಲ್ಲೆ ಮಕ್ಕಳ ಲಸಿಕೆ ಅಭಿಯಾನದಲ್ಲಿ ಮೊದಲ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಈ ವರ್ಗದ ಶೇ 99 ಮಕ್ಕಳು ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ.

66% Children Aged 15-18 Get 1st Dose Of Covid Vaccine In Karnataka

ಗುಲ್ಬರ್ಗ ಜಿಲ್ಲೆಯಲ್ಲಿ ಕೇವಲ ಶೇ 51ರಷ್ಟು ಮಕ್ಕಳು ಮಾತ್ರ ಮೊದಲ ಡೋಸ್ ಲಸಿಕೆ ಹೊಂದಿರುವುದರಿಂದ. ಜಿಲ್ಲೆ ಲಸಿಕೆ ಅಭಿಯಾನದಲ್ಲಿ ಕೊನೆಯ ಸ್ಥಾನವನ್ನು ಪಡೆದಿದೆ.

ಉಳಿದಂತೆ ಕೊಡಗು ಮತ್ತು ಉಡುಪಿಯಲ್ಲಿ ಶೇ 87, ಉತ್ತರ ಕನ್ನಡ ಶೇ 83, ಬೆಂಗಳೂರು ನಗರ, ದಕ್ಷಿಣ ಕನ್ನಡ ಶೇ 79, ಬಾಗಲಕೋಟೆ ಶೇ 77, ಶಿವಮೊಗ್ಗ ಶೇ 76, ಧಾರವಾಡ ಶೇ 75, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಶೇ 74, ಚಿಕ್ಕಮಗಳೂರು ಶೇ 73 ರಷ್ಟು ಲಸಿಕೆಯನ್ನು ನೀಡಿ ಮೊದಲ ಹತ್ತು ಸ್ಥಾನದಲ್ಲಿವೆ.

ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 48,048 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಶುಕ್ರವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಪಾಸಿಟಿವ್ ಪ್ರಕರಣಗಳ ಸಂಖ್ಯೆ 48 ಸಾವಿರ ದಾಟುವ ಮೂಲಕ ಪಾಸಿಟಿವ್ ಪ್ರಮಾಣ ಶೇ. 19.23ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಆರು ಮಂದಿ ಸೇರಿದಂತೆ ರಾಜ್ಯದಲ್ಲಿ ಕೊರೊನಾದಿಂದ ಇಂದು 22 ಮಂದಿ ಮೃತಪಟ್ಟಿದ್ದಾರೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಇಂದು 29,068 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದಾರೆ.

Recommended Video

South Africa ನೆಲದಲ್ಲಿ ಭಾರತಕ್ಕೆ ಮುಖಭಂಗ,ಇದಕ್ಕೆ ಕಾರಣ Virat!! | Oneindia

ರಾಜ್ಯದಲ್ಲಿ ಇಂದು 18,115 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 2,49,832 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಅವರು ಹೇಳಿದ್ದಾರೆ.

English summary
66% Children between the 15-18 age group have recieved their first dose of the covid 19 vaccine in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X