ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 29; ಕರ್ನಾಟಕದಲ್ಲಿ 662 ಹೊಸ ಕೊರೊನಾ ಪ್ರಕರಣ ದಾಖಲು

|
Google Oneindia Kannada News

ಬೆಂಗಳೂರು, ಡಿಸೆಂಬರ್ 29: ಕರ್ನಾಟಕದಲ್ಲಿ ಮಂಗಳವಾರ 662 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 917571ಕ್ಕೆ ಏರಿಕೆಯಾಗಿದೆ.

ಬ್ರಿಟನ್ ನ ಕೊರೊನಾ ರೂಪಾಂತರ ಸೋಂಕಿನ ಭೀತಿ ನಡುವೆಯೂ ರಾಜ್ಯದಲ್ಲಿ ಕ್ರಮೇಣವಾಗಿ ಕೊರೊನಾ ಪ್ರಕರಣಗಳು ಇಳಿಕೆಯಾಗಿರುವುದು ನಿಟ್ಟುಸಿರುಬಿಡುವಂತೆ ಮಾಡಿವೆ. ಬ್ರಿಟನ್ ನಿಂದ ಭಾರತಕ್ಕೆ ಮರಳಿ ಬಂದ ಆರು ಜನರಲ್ಲಿ ರೂಪಾಂತರದ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಮೂವರು ಕರ್ನಾಟಕದವರಾಗಿದ್ದಾರೆ ಎಂದು ತಿಳಿದುಬಂದಿದೆ. ಬ್ರಿಟನ್ ನಿಂದ ಹಿಂದಿರುಗಿದ್ದ ಮೂವರಲ್ಲಿ ಈ ಹೊಸ ವೈರಸ್ ಪತ್ತೆಯಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಡಿ.28; ಕರ್ನಾಟಕದಲ್ಲಿ 653 ಕೊರೊನಾ ಸೋಂಕಿತರು ಪತ್ತೆಡಿ.28; ಕರ್ನಾಟಕದಲ್ಲಿ 653 ಕೊರೊನಾ ಸೋಂಕಿತರು ಪತ್ತೆ

ಇಂದು 1,344 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಚೇತರಿಕೆ ಪ್ರಕರಣಗಳ ಸಂಖ್ಯೆ 8,93,617ಗೆ ತಲುಪಿದೆ. ಸೋಂಕಿನಿಂದ ಇಂದು 4 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸೋಂಕಿನಿಂದ ಇದುವರೆಗೂ ಒಟ್ಟು 12,074 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 206 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 11,861 ಇದೆ.

662 New Coronavirus Cases Detected In Karnataka On December 29

ಜಿಲ್ಲಾವಾರು ಕೊರೊನಾ ಪ್ರಕರಣಗಳ ಸಂಖ್ಯೆ: ಬಾಗಲಕೋಟೆ 2, ಬಳ್ಳಾರಿ 14, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 370, ಬೀದರ್ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 18, ಚಿಕ್ಕಮಗಳೂರು 6, ಚಿತ್ರದುರ್ಗ 7, ದಕ್ಷಿಣ ಕನ್ನಡ ಜಿಲ್ಲೆ 35, ದಾವಣಗೆರೆ 12, ಧಾರವಾಡ 10, ಗದಗ 0, ಹಾಸನ 25, ಹಾವೇರಿ 0, ಕಲಬುರಗಿ 5, ಕೊಡಗು 1, ಕೋಲಾರ 31, ಕೊಪ್ಪಳ 6, ಮಂಡ್ಯ 14, ಮೈಸೂರು 23, ರಾಯಚೂರು 1, ರಾಮನಗರ 0, ಶಿವಮೊಗ್ಗ 7, ತುಮಕೂರು 38, ಉಡುಪಿ 7, ಉತ್ತರ ಕನ್ನಡ 5, ವಿಜಯಪುರ 5, ಯಾದಗರಿಯಲ್ಲಿ 1 ಪ್ರಕರಣಗಳು ದಾಖಲಾಗಿವೆ.

English summary
662 new coronavirus cases detected in karnataka on december 29 and total cases rises to 9,17,571,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X