ಕರ್ನಾಟಕದಲ್ಲಿ 2 ಲಕ್ಷ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ
ಬೆಂಗಳೂರು, ಆಗಸ್ಟ್ 13 : ಕರ್ನಾಟಕದಲ್ಲಿ ಗುರುವಾರ 6,706 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು 103 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 203200 ಆಗಿದೆ.
Recommended Video
ಆರೋಗ್ಯ ಇಲಾಖೆ ಗುರುವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು 6,706 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲಿ 1,893 ಹೊಸ ಪ್ರಕರಣಗಳು ವರದಿಯಾಗಿವೆ.

ಕರ್ನಾಟಕದಲ್ಲಿ ಇಂದು 103 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿಯೇ 22 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 55,999 ಕೋವಿಡ್ ಪರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,336. ಕರ್ನಾಟಕದಲ್ಲಿ ಇಂದು 8,609 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು 1,893 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 33,150. ಇಂದು 2,210 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.












Click it and Unblock the Notifications