ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 2 ಲಕ್ಷ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ

|
Google Oneindia Kannada News

ಬೆಂಗಳೂರು, ಆಗಸ್ಟ್ 13 : ಕರ್ನಾಟಕದಲ್ಲಿ ಗುರುವಾರ 6,706 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು 103 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 203200 ಆಗಿದೆ.

Recommended Video

Corona vaccine ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ | Oneindia Kannada

ಆರೋಗ್ಯ ಇಲಾಖೆ ಗುರುವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು 6,706 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲಿ 1,893 ಹೊಸ ಪ್ರಕರಣಗಳು ವರದಿಯಾಗಿವೆ.

 ದಾವಣಗೆರೆ; ಕೊರೊನಾ ತಡೆಗೆ ಎಸ್ಪಿ ನೀಡಿದರು ಸ್ವಂತ ಅನುಭವದ ಸಲಹೆ... ದಾವಣಗೆರೆ; ಕೊರೊನಾ ತಡೆಗೆ ಎಸ್ಪಿ ನೀಡಿದರು ಸ್ವಂತ ಅನುಭವದ ಸಲಹೆ...

6706 New COVID Cases Reported In Karnataka On August 13

ಕರ್ನಾಟಕದಲ್ಲಿ ಇಂದು 103 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿಯೇ 22 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಕೊರೊನಾ ಸೋಂಕು ಶೀಘ್ರ ಪತ್ತೆಗೆ ಆದ್ಯತೆ ನೀಡಲು ಸಚಿವ ಆರ್.ಅಶೋಕ್ ಸೂಚನೆಕೊರೊನಾ ಸೋಂಕು ಶೀಘ್ರ ಪತ್ತೆಗೆ ಆದ್ಯತೆ ನೀಡಲು ಸಚಿವ ಆರ್.ಅಶೋಕ್ ಸೂಚನೆ

ರಾಜ್ಯದಲ್ಲಿ ಇಂದು 55,999 ಕೋವಿಡ್ ಪರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,336. ಕರ್ನಾಟಕದಲ್ಲಿ ಇಂದು 8,609 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕೋವಿಡ್ ತಡೆಗೆ ಕೈಗೊಂಡ ಕ್ರಮಗಳು ಕೊಡಗು ಜಿಲ್ಲೆಯಲ್ಲಿ ಕೋವಿಡ್ ತಡೆಗೆ ಕೈಗೊಂಡ ಕ್ರಮಗಳು

ಬೆಂಗಳೂರು ನಗರದಲ್ಲಿ ಇಂದು 1,893 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 33,150. ಇಂದು 2,210 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

English summary
6706 new Corona positive cases reported in Karnataka on August 13, 2020. 1,893 new cases reported in Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X