ದಾಖಲೆ ಇಳಿಕೆ: ಕರ್ನಾಟಕದಲ್ಲಿ ಒಂದೇ ದಿನ 673 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಸೆಪ್ಟೆಂಬರ್ 13: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.56ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.93ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 673 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1074 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 13 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37517 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2962408ಕ್ಕೆ ಏರಿಕೆಯಾಗಿದೆ. ಒಟ್ಟು 2908622 ಸೋಂಕಿತರು ಗುಣಮುಖರಾಗಿದ್ದು. 16241 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣ:
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 214 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1241639ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16056ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7211 ಸಕ್ರಿಯ ಪ್ರಕರಣಗಳಿವೆ.
ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 19360 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 99,654 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,19,014 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 84,73,173 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,69,40,769 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,54,13,942 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
ರಾಜ್ಯದಲ್ಲಿ ಒಟ್ಟು 673 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 6 ಬೆಂಗಳೂರು 214, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 115, ದಾವಣಗೆರೆ 3, ಧಾರವಾಡ 0, ಗದಗ 0, ಹಾಸನ 51, ಹಾವೇರಿ 0, ಕಲಬುರಗಿ 0, ಕೊಡಗು 31, ಕೋಲಾರ 6, ಕೊಪ್ಪಳ 1, ಮಂಡ್ಯ 4, ಮೈಸೂರು 31, ರಾಯಚೂರು 0, ರಾಮನಗರ 2, ಶಿವಮೊಗ್ಗ 21, ತುಮಕೂರು 36, ಉಡುಪಿ 75, ಉತ್ತರ ಕನ್ನಡ 17, ವಿಜಯಪುರ 0, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,62,863 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,25,029 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,38,133 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 5,92,023 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,48,76,586 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 78,83,921 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,53,53,775 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,24,52,647 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications