ನವೆಂಬರ್ 14 ರಿಂದ ಸಹಕಾರ ಸಪ್ತಾಹ: ಎಸ್.ಟಿ. ಸೋಮಶೇಖರ್!
ಬೆಂಗಳೂರು,
ಅ. 14: ಇದೇ ನವೆಂಬರ್ 14 ರಿಂದ ನವಂಬರ್ 20 ರವರೆಗೆ ರಾಜ್ಯದಾದ್ಯಂತ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ 67 ನೇ ಅಖಿಲ ಭಾರತ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು. id="toptextpromo"> id='are-slot-1' class='oiad oi-axt oiadv'>ನವೆಂಬರ್
14 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಸಪ್ತಾಹವನ್ನು ಉದ್ಘಟಿಸಲಿದ್ದಾರೆ. ವಿವಿಧ ಸಹಕಾರ ಮಹಾಮಂಡಳಗಳು, ರಾಜ್ಯದ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಕ್ರಮವಾಗಿ ಮಂಗಳೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಳಗಾವಿ, ಹೊಸಪೇಟೆ ಮತ್ತು ಸಮಾರೋಪ ಸಮಾರಂಭವನ್ನು ವಿಜಾಪುರದಲ್ಲಿ ಏಪ೯ಡಿಸಲು ತೀರ್ಮಾನಿಸಲಾಗಿದೆ ಎಂದರು. id='are-slot-2' class='oiad oi-axt oiadv'>
ಸಹಕಾರ ರತ್ನ ಪ್ರಶಸ್ತಿ ಪ್ರದಾನ
ಸಪ್ತಾಹ ಕಾಯ೯ಕ್ರಮದಲ್ಲಿ ಸಹಕಾರ ವಲಯದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿರುವ ಐದು ಜನ ಸಹಕಾರಿಗಳನ್ನು ಹಾಗೂ ಸಹಕಾರ ಇಲಾಖೆಯ ಒಬ್ಬ ನಿವೃತ್ತ ಅಧಿಕಾರಿಯನ್ನ ಸಮಿತಿ ಮೂಲಕ ಆಯ್ಕೆ ಮಾಡಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಸಾಮಾಜಿಕ ಅಂತರ ಕಾಪಾಡಿಕೊಂಡು ಸಪ್ತಾಹ ಕಾರ್ಯಕ್ರಮ ನಡೆಸಲು ತೀರ್ಮಾನ ಮಾಡಲಾಗಿದೆ.

ಸಹಕಾರ ಕಾಯ್ದೆಗೆ ತಿದ್ದುಪಡಿ
ಸಹಕಾರ ಸಂಘಗಳಿಗೆ ಸಂಬಂಧಿಸಿದ ಕಾಯ್ದೆ ತಿದ್ದುಪಡಿ ಮಾಡಲು ಕ್ರಮಕೈಗೊಳ್ಳಲಾಗುವುದು. ತಿದ್ದುಪಡಿಯಿಂದ ಎಲ್ಲರಿಗೂ ಅನುಕೂಲವಾಗುವಂತಾಗಬೇಕು. ಇಲಾಖೆಯ ಬಲವಧ೯ನೆಗೆ ಅಧಿಕಾರಿಗಳು ಉತ್ತಮ ಗುಣಮಟ್ಟದ ಕೆಲಸ ಮಾಡಬೇಕೇಂದು ಸೋಮಶೇಖರ್ ತಿಳಿಸಿದರು.

ಕೆಎಂಎಫ್‌ಗೆ ಆರ್ಥಿಕ ಸಹಾಯ
ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲರಾದ ಜನರಿಗೆ ನೆರವು ನೀಡುವ ಆರ್ಥಿಕ ಸ್ಪಂದನ ಕಾರ್ಯಕ್ರಮದ ಮೂಲಕ 39,300 ಕೋಟಿ ರೂಪಾಯಿಗಳ ನೆರವು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಧಾರವಾಡ, ಬೀದರ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕೆ. ಎಂ. ಎಫ್ ಬಲವರ್ಧನೆಗೆ ಎಲ್ಲಾ ರೀತಿಯ ನೆರವನ್ನು ಸರ್ಕಾರ ನೀಡುತ್ತಲೇ ಬಂದಿದೆ ಎಂದರು.
Recommended Video

ಅಧಿಕಾರಿಗಳು ಭಾಗಿ
ಶಾಸಕ ಜಿ. ಟಿ. ದೇವೇಗೌಡ. ಸಹಕಾರ ಇಲಾಖಾ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್. ಸಹಕಾರ ಸಂಘಗಳ ನಿಬಂಧಕ ಎಸ್ ಜಿಯಾವುಲ್ಲಾ ಮಾರಾಟ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್. ಸೌಹಾಧ೯ ಸಹಕಾರಿ ಅಧ್ಯಕ್ಷ ಬಿ. ಎಚ್. ಕೃಷ್ಣಾರೆಡ್ಡಿ ಸೇರಿದಂತೆ ಸಹಕಾರಿ ಮುಖಂಡರು. ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications