ಕರ್ನಾಟಕದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆಯಲ್ಲಿ ದಾಖಲೆ ಇಳಿಕೆ

ಬೆಂಗಳೂರು, ಮೇ 14: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣ ಕಡಿಮೆ ಆಗುತ್ತಿರುವುದು ಅಂಕಿ-ಅಂಶಗಳಿಂದ ಪತ್ತೆಯಾಗುತ್ತಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6835 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 120 ಮಂದಿ ಮೃತಪಟ್ಟಿದ್ದು, ಇದೇ ಅವಧಿಯಲ್ಲಿ 15,409 ಸೋಂಕಿತರು ಗುಣಮುಖರಾಗಿದ್ದಾರೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 27,71,969ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ 33,033 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ 25,66,774 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 1,72,141 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

6835 New Coronavirus Cases Reported in Karnataka Today, State Tally Rise to 2771969


ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ:

ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ 1470 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,98,158ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 12 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 15,319ಕ್ಕೆ ಏರಿಕೆಯಾಗಿದೆ. 85,044 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆವಾರು ಕೊರೊನಾವೈರಸ್ ಪ್ರಕರಣ?:

ರಾಜ್ಯದಲ್ಲಿ ಒಟ್ಟು 6835 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 57, ಬಳ್ಳಾರಿ 203, ಬೆಳಗಾವಿ 191, ಬೆಂಗಳೂರು ಗ್ರಾಮಾಂತರ 168, ಬೆಂಗಳೂರು 1470, ಬೀದರ್ 14, ಚಾಮರಾಜನಗರ 119, ಚಿಕ್ಕಬಳ್ಳಾಪುರ 160, ಚಿಕ್ಕಮಗಳೂರು 185, ಚಿತ್ರದುರ್ಗ 195, ದಕ್ಷಿಣ ಕನ್ನಡ 648, ದಾವಣಗೆರೆ 200, ಧಾರವಾಡ 103, ಗದಗ 28, ಹಾಸನ 507, ಹಾವೇರಿ 63, ಕಲಬುರಗಿ 31, ಕೊಡಗು 110, ಕೋಲಾರ 115, ಕೊಪ್ಪಳ 95, ಮಂಡ್ಯ 256, ಮೈಸೂರು 670, ರಾಯಚೂರು 33, ರಾಮನಗರ 26, ಶಿವಮೊಗ್ಗ 353, ತುಮಕೂರು 386, ಉಡುಪಿ 122, ಉತ್ತರ ಕನ್ನಡ 204, ವಿಜಯಪುರ 103, ಯಾದಗಿರಿ 20 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+