ಶಾಕಿಂಗ್: ಕರ್ನಾಟಕದಲ್ಲಿ ಒಂದೇ ದಿನ 6976 ಮಂದಿಗೆ ಕೊರೊನಾವೈರಸ್!
ಬೆಂಗಳೂರು, ಏಪ್ರಿಲ್ 07: ಕರ್ನಾಟಕದಲ್ಲಿ ಕೊರೊನಾವೈರಸ್ ಸ್ಫೋಟವಾಗಿದೆ. ಒಂದೇ ದಿನದಲ್ಲಿ ಪತ್ತೆಯಾಗಿರುವ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ರಾಜ್ಯದ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ರಾಜ್ಯದಲ್ಲಿ ಒಂದೇ ದಿನ 6976 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 35 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 2794 ಸೋಂಕಿತರು ಗುಣಮುಖರಾಗಿದ್ದಾರೆ.
ಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು: ಕೇಂದ್ರದಿಂದ ಅಧ್ಯಯನ
ಕರ್ನಾಟಕದಲ್ಲಿ ಒಟ್ಟು 1033560ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 971556 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12731 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 49254 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?
ರಾಜ್ಯದಲ್ಲಿ ಒಟ್ಟು 6976 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 13, ಬಳ್ಳಾರಿ 49, ಬೆಳಗಾವಿ 101, ಬೆಂಗಳೂರು ಗ್ರಾಮಾಂತರ 70, ಬೆಂಗಳೂರು 4991, ಬೀದರ್ 214, ಚಾಮರಾಜನಗರ 39, ಚಿಕ್ಕಬಳ್ಳಾಪುರ 37, ಚಿಕ್ಕಮಗಳೂರು 38, ಚಿತ್ರದುರ್ಗ 20, ದಕ್ಷಿಣ ಕನ್ನಡ 112, ದಾವಣಗೆರೆ 20, ಧಾರವಾಡ 88, ಗದಗ 11, ಹಾಸನ 90, ಹಾವೇರಿ 12, ಕಲಬುರಗಿ 205, ಕೊಡಗು 10, ಕೋಲಾರ 29, ಕೊಪ್ಪಳ 24, ಮಂಡ್ಯ 58, ಮೈಸೂರು 243, ರಾಯಚೂರು 28, ರಾಮನಗರ 28, ಶಿವಮೊಗ್ಗ 34, ತುಮಕೂರು 204, ಉಡುಪಿ 89, ಉತ್ತರ ಕನ್ನಡ 35, ವಿಜಯಪುರ 50, ಯಾದಗಿರಿ 34 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.