Guarantee Scheme: ರಾಜ್ಯದಲ್ಲಿ 6ನೇ ಗ್ಯಾರಂಟಿ ಯೋಜನೆ ಜಾರಿ: ಯಾವಾಗ? ಇಲ್ಲಿದೆ ಮಾಹಿತಿ
Guarantee Scheme: ರಾಜ್ಯದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇದರ ಜೊತೆ ಇದೀಗ ಮತ್ತೊಂದು ಗ್ಯಾರಂಟಿಯನ್ನು ತರಲು ಸರ್ಕಾರ ಮುಂದಾಗಿದೆ, ಹಾಗಾದ್ರೆ ಅದ್ಯಾವುದು ಹಾಗೂ ಪ್ರಯೋಜನೆಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಂಗನವಾಡಿ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುವರು. 2017ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಅವರೇ ಗೌರವ ಧನವನ್ನು ಏರಿಸಿದ್ದಾರೆ. ಜೊತೆಗೆ 2023ರಿಂದ ನಿವೃತ್ತಿ ಆದವರಿಗೆ ಗ್ರ್ಯಾಚ್ಯುಟಿಯನ್ನು ನೀಡಿಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರು, 3,000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು.
ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1,000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ - ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮೇಳವನ್ನು ಆಯೋಜಿಸಲಾಗಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂನಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡಿದ್ದರು.
ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಬೇಟಿ ಬಚಾವೊ, ಬೇಟಿ ಫಡಾವೊ ಕಾರ್ಯಕ್ರಮದಡಿ ಹೆಣ್ಣು ಮಗುವಿನ ಹೆಸರಿನಲ್ಲಿ ಗಿಡವನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದ ಸಚಿವರು, ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕು ಎಂದು ಮನವಿ ಮಾಡಿದರು.
ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಿಂದ ಮೂರು ಸಾವಿರ ಗರ್ಭಿಣಿಯರಿಗೆ ಸಾಮೂಹಿಕವಾಗಿ ಸೀಮಂತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದ್ದು, ಮೊದಲ ಯತ್ನವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಶುರು ಮಾಡಲಾಗುತ್ತಿದೆ. ಸೀಮಂತ ಕಾರ್ಯಕ್ರಮಕ್ಕೆ ಆಗಮಿಸುವ ಗರ್ಭಿಣಿಯರ ಸಂಪೂರ್ಣ ಆರೈಕೆಯನ್ನು ಅಂಗನವಾಡಿ ಕಾರ್ಯಕರ್ತೆಯರು ನೋಡಿಕೊಳ್ಳುತ್ತಾರೆ ಎಂದರು.
ಈಗಾಗಲೇ ಇರುವ ಐದು ಗ್ಯಾರಂಟಿಗಳು ಜಾರಿಯಲ್ಲಿವೆ. ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ ಉಚಿತ ಅಕ್ಕಿ ನೀಡಲಾಗುತ್ತಿದೆ. ಇನ್ನು ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗಿಗಳಿಗೆ ಧನಸಾಹಯ ನೀಡಲಾಗುತ್ತದೆ.












Click it and Unblock the Notifications