IFS Officers Transfer: ರಾಜ್ಯ ಸರ್ಕಾರದಿಂದ 7 ಮಂದಿ ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
IFS Officers Transfer: ಆಗಾಗ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ದಿಢೀರ್ 7 ಮಂದಿ ಐಎಫ್‌ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಸಂಪೂರ್ಭ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮಾನವ-ಪ್ರಾಣಿಗಳ ಸಂಘರ್ಷ ಇದೇ ಮೊದಲೇನಲ್ಲ. ಹಿಂದಿನಿಂದಲೂ ಕೂಡ ನಡೆಯುತ್ತಲೇ ಬಂದಿದೆ. ಆದರೆ, ಕೆಲ ದಿನಗಳ ಕಾಲ ಇದು ನಿಂತಿತ್ತು. ಆದರೆ, ಇದೀಗ ಚಿರತೆ, ಹುಲಿ ದಾಳಿಗಳಂತಹ ಪ್ರಕರಣಗಳು ಹೆಚ್ಚಾಗುತ್ತಲಿವೆ. ಹಾಗೆಯೇ ಹುಲಿ ದಾಳಿ ಪ್ರಕರಣಗಳಿಂದ ವಿವಾದಕ್ಕೆ ಸಿಲುಕಿರುವ ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಎಸ್.ಪ್ರಭಾಕರನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆ ಜಾಗಕ್ಕೆ ಡಾ.ಸಂತೋಷ್‌ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅನಿಲ್ ಕುಮಾರ್ ರತನ್-ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂಪನ್ಮೂಲ ನಿರ್ವಹಣೆ. ಸಾಸ್ವತಿ ಮಿಶ್ರಾ-ಹೆಚ್ಚವರಿ ಮಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಿಬ್ಬಂದಿ ನೇಮಕಾತಿ. ಬಿಸ್ವಜಿತ್ ಮಿಶ್ರಾ-ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ. ವನಶ್ರೀ ವಿಪಿನ್ ಸಿಂಗ್-ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕಾರ್ಯಯೋಜನೆ.
ಮನೋಜ್ ಕುಮಾರ್ ತ್ರಿಪಾಠಿ-ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ವಿಚಕ್ಷಣೆ. ಎಸ್.ಪ್ರಭಾಕರನ್-ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ. ಡಾ.ಜಿ.ಸಂತೋಷ್‌ಕುಮಾರ್-ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ ಹುಲಿ ಯೋಜನೆ. ಹೀಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.
ಐಎಎಸ್ ಅಧಿಕಾರಿಗಳ ವರ್ಗಾವಣೆ: ಇತ್ತೀಚೆಗಷ್ಟೇ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಹಾಗಾದ್ರೆ ಯಾರನ್ನು ಎಲ್ಲಿಗೆ, ಯಾವ ಹುದ್ದೆಗೆ ವರ್ಗಾಹಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ.ರಂದೀಪ್ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕ ನಿತೇಶ್ ಪಾಟೀಲ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಆರ್.ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿ ಇದ್ದ ಡಾ.ಸತೀಶ ಬಿ.ಸಿ. ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರನ್ನಾಗಿ, ಡಾ.ಎಂ.ಎಸ್.ದಿವಾಕರ್ ಅವರನ್ನು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ, ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನು ದಿವಾಕರ್ ಅವರಿಗೆ ನೀಡಲಾಗಿದೆ.
ಯಾರಿಗೆ ಯಾವ ಹುದ್ದೆ ಜವಾಬ್ದಾರಿ?
* ಡಿ.ರಂದೀಪ್: ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹೆಚ್ಚುವರಿ ಹುದ್ದೆ ಜವಾಬ್ದಾರಿ
* ನಿತೇಶ್ ಪಾಟೀಲ್: ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ
* ಆರ್.ರಾಮಚಂದ್ರನ್: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯಕಾರಿ ನಿರ್ದೇಶಕ
* ಡಾ. ಬಿ.ಸಿ.ಸತೀಶ: ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕ
* ಎಂಎಸ್ ದಿವಾಕರ್: ಕೆಎಸ್‌ಎನ್‌ಡಿಎಂಸಿ ಜೊತೆಗೆ ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹೆಚ್ಚುವರಿ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.












Click it and Unblock the Notifications