ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಗ ದಿನಾಚರಣೆಯಂದು ಲಸಿಕಾ ಮೇಳಕ್ಕೆ 7 ಲಕ್ಷ ಗುರಿ

|
Google Oneindia Kannada News

ಬೆಂಗಳೂರು, ಜೂನ್ 20: ಜೂನ್ 21 ರಂದು ಜಗತ್ತಿನಾದ್ಯಂತ ಯೋಗ ದಿನ ಆಚರಿಸುತ್ತಿದ್ದು, ಈ ಬಾರಿ ಎಲ್ಲರೂ ಮನೆಯಲ್ಲೇ ಇದ್ದು ಆಚರಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಂದು ಮನವಿ ಮಾಡಿದ್ದಾರೆ.

ಜೂನ್ 21 ರಂದು ಕೋವಿಡ್ ಲಸಿಕೆ ಮೇಳಕ್ಕೆ ಚಾಲನೆ ದೊರೆಯಲಿದೆ. 18-44 ವರ್ಷದವರಿಗೆ, 45 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು ಎಂದರು. 14 ಲಕ್ಷ ಕೋವಿಶೀಲ್ಡ್ ಡೋಸ್ ದಾಸ್ತಾನು ಇದ್ದು, ಸೋಮವಾರ 5 ರಿಂದ 7 ಲಕ್ಷ ಡೋಸ್ ನೀಡುವ ಗುರಿ ಇರಿಸಲಾಗಿದೆ. ಇದಕ್ಕೆ ಜನರ ಸಹಕಾರ ಬೇಕಿದೆ. ಈವರೆಗೆ 1.80 ಕೋಟಿ ಲಸಿಕೆ ನೀಡಲಾಗಿದೆ. ಅಂದರೆ ದೇಶದಲ್ಲಿ ನೀಡಿದ 15 ಲಸಿಕೆಯಲ್ಲಿ ಒಂದು ರಾಜ್ಯದ್ದು ಎಂದು ಹೇಳಿದರು.

ಅನ್ ಲಾಕ್ ಬಗ್ಗೆ ಪರಾಮರ್ಶಿಸಲು ಚರ್ಚಿಸಲಾಗಿದೆ. ಪಾಸಿಟಿವಿಟಿ ದರದ ಶೇಕಡಾವಾರು ಪ್ರಮಾಣದ ಆಧಾರದಲ್ಲಿ ಯಾವ ಜಿಲ್ಲೆಗಳಲ್ಲಿ ಯಾವ ಕ್ರಮ ವಹಿಸಬೇಕೆಂಬುದನ್ನು ಮುಖ್ಯಮಂತ್ರಿಗಳಿಗೆ ತಿಳಿಸಲಾಗುವುದು. ಪಾಸಿಟಿವಿಟಿ ದರ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಮತ್ತು 13 ಜಿಲ್ಲೆಗಳಲ್ಲಿ 5-10% ನಷ್ಟಿದೆ. ಮೈಸೂರಿನಲ್ಲಿ 10% ಗಿಂತ ಹೆಚ್ಚಿದೆ ಎಂದು ಮಾಹಿತಿ ನೀಡಿದರು.

7 lakh jabs to be administered in Karnataka on Yoga Day June 21: Sudhakar

ಹೊಸ ವೈರಾಣು ಅಧ್ಯಯನಕ್ಕೆ ಜಿನೋಮಿಕ್ಸ್ ಸಮಿತಿ ರಚಿಸಲಾಗಿದೆ. ಪ್ರತಿ ಜಿಲ್ಲಾಮಟ್ಟದಲ್ಲಿ ತಜ್ಞರ ಸಮಿತಿ ರಚಿಸಲಾಗುವುದು. ಈ ಸಮಿತಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಿದೆ. ಈ ಮೂಲಕ 3 ನೇ ಅಲೆ ನಿಯಂತ್ರಿಸಲಾಗುವುದು ಎಂದು ತಿಳಿಸಿದರು.

ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿ 3 ನೇ ಅಲೆ ಸಿದ್ಧತೆ ಕುರಿತು ಪ್ರಾಥಮಿಕ ವರದಿ ನೀಡಿದೆ. ಅದನ್ನು ಮುಖ್ಯಮಂತ್ರಿಗಳಿಗೆ ನೀಡಲಾಗುವುದು. ಅಂತಿಮ ವರದಿ ಬಂದ ಬಳಿಕ 45 ದಿನಗಳಲ್ಲಿ ಕಾರ್ಯರೂಪಕ್ಕೆ ತರಲಾಗುವುದು.

ಡೆಲ್ಟಾ ವೈರಾಣು ವೇಗವಾಗಿ ಹರಡುತ್ತಿದೆ. ಇದಕ್ಕಾಗಿ ಡಿಸೆಂಬರ್ ವರೆಗೂ ನಿತ್ಯ ಒಂದೂವರೆ ಲಕ್ಷ ಪರೀಕ್ಷೆ ಮಾಡಲು ಸೂಚಿಸಲಾಗಿದೆ.

Recommended Video

Virat Kohli ವಿಕೆಟ್ ಪಡೆದ Jamiesonಗೆ ಈಗ ಫುಲ್ ಖುಷಿ | WTC | IND vs NZ | Oneindia Kannada

ಕೋವಿಡ್ ಎರಡು ಡೋಸ್ ಲಸಿಕೆ ಪಡೆದ 99.9 ರಷ್ಟು ಸೋಂಕು ತಗುಲಿಲ್ಲ. ಸೋಂಕು ಬಂದರೂ ತೀವ್ರ ಸಮಸ್ಯೆಯಾಗಿಲ್ಲ ಎಂದು ಹೇಳಿದರು.

English summary
Lasika Mela will be launched on June 21, This special drive will include all groups including 18-44 age group, 45+ and front line warriors said Health Minister Dr. Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X