ಲಿಂಗಾಯತ ಸಮುದಾಯದ 7 ಜನ ಪ್ರಭಾವಿ ಸಚಿವರು ರಾಜೀನಾಮೆ, ಏನಿದು ಚರ್ಚೆ ?
ಕರ್ನಾಟಕದಲ್ಲಿ ಜಾತಿ ಗಣತಿ ವರದಿ ವಿಚಾರವೂ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗಿದೆ. ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿ ಮಂಡನೆ ಮಾಡುವುದರಿಂದ ಲಾಭವಾಗಲಿದೆ ಎಂದು ನಿರೀಕ್ಷೆ ಮಾಡಿದ್ದರು. ಆದರೆ, ದಿನೇ ದಿನವೇ ಸರ್ಕಾರಕ್ಕೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇದರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಪ್ರಭಾವಿ ಸಚಿವರು ತಮ್ಮ ಸಮುದಾಯದಿಂದ ವಿರೋಧವನ್ನು ಎದುರಿಸುವಂತೆ ಆಗಿದೆ. ಪರಿಸ್ಥಿತಿ ಈ ರೀತಿ ಇರುವಾಗಲೇ ಲಿಂಗಾಯತ ಸಮುದಾಯ 7 ಜನರ ಸಚಿವರು ರಾಜೀನಾಮೆ ವಿಷಯ ಚರ್ಚೆಯಾಗುತ್ತಿದೆ.
ಕರ್ನಾಟಕದಲ್ಲಿ ಜಾತಿ ಗಣತಿ ವರದಿಯನ್ನು ವಿರೋಧಿಸಿ ಲಿಂಗಾಯತ ಸಮುದಾಯದ 7 ಜನ ಸಚಿವರು ರಾಜೀನಾಮೆ ಕೊಡಲು ಮುಂದಾಗಬೇಕು ಎನ್ನುವ ಗಂಭೀರ ಚರ್ಚೆ ಶುರುವಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಪ್ರಮುಖ ಜಾತಿಗಳಾದ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದಿಂದ ವಿರೋಧ ವ್ಯಕ್ತವಾಗಿದೆ. ಅಷ್ಟೇ ಅಲ್ಲ ರಾಜ್ಯದ ಮಠಾಧೀಶರು ಹಾಗೂ ವಿರೋಧ ಪಕ್ಷಗಳು ಸೇರಿದಂತೆ ಕೆಲವರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಈ ರೀತಿ ಇರುವಾಗಲೇ 7 ಜನ ಲಿಂಗಾಯತ ಸಮುದಾಯದ ಸಚಿವರ ರಾಜೀನಾಮೆಯ ಬಗ್ಗೆ ಚರ್ಚೆ ನಡೆದಿದೆ.

ಕರ್ನಾಟಕ ಸರ್ಕಾರದ ಜಾತಿ ಗಣತಿ ವರದಿಯಿಂದ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯವನ್ನು ವಿರೋಧಿಸಿ 7 ಜನ ಲಿಂಗಾಯತ ಸಮುದಾಯದ ಸಚಿವರು ರಾಜೀನಾಮೆ ಕೊಡಬೇಕು ಎಂದು ಸ್ವಪಕ್ಷದವರಿಂದಲೇ ಆಗ್ರಹ ಕೇಳಿ ಬಂದಿದೆ. ಕರ್ನಾಟಕದ ಲಿಂಗಾಯತ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. 7 ಜನ ಸಚಿವರೂ ಅಸಮರ್ಥರಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಹಾಗೂ ಲಿಂಗಾಯತ ಸಮುದಾಯದ ನಾಯಕ ಶಿವಗಂಗಾ ಬಸವರಾಜ್ ಕಿಡಿಕಾರಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು ವಿವಿಧ ಸಮುದಾಯದ ಸಚಿವರು ಯಾವ ರೀತಿ ನಡೆದುಕೊಂಡಿದ್ದಾರೆ. ನಮ್ಮ ಸಚಿವರು ಯಾವ ರೀತಿ ನಡೆದುಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಜಾತಿ ಗಣತಿ ವರದಿಯಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಿದೆ. ಅದೇ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಒಕ್ಕಲಿಗ ನಾಯಕ ಡಿ.ಕೆ ಶಿವಕುಮಾರ್ ಅವರು ಅವರ ಸಮುದಾಯದವರನ್ನು ಕರೆದು ಸಭೆ ನಡೆಸಿದ್ದಾರೆ. ಆದರೆ, ನಮ್ಮ ಸಮುದಾಯದ ಯಾವೊಬ್ಬ ಸಚಿವರೂ ಈ ಬಗ್ಗೆ ಮಾತನಾಡಿಲ್ಲ ಎಂದಿದ್ದಾರೆ.
ಮುಂದುವರಿದು ಯಾರಾದರೂ ನಮ್ಮ ಸಮುದಾಯದ ಶಾಸಕರನ್ನು ಕರೆದು ಸಭೆ ಮಾಡಿದ್ದಾರೆಯೇ ಇಲ್ಲ. ಇನ್ನು ಸಚಿವ ಈಶ್ವರ ಖಂಡ್ರೆ ಅವರಿಗೆ ಫೋನ್ ಮಾಡಿದರೆ ಅವರು ಫೋನ್ ಸ್ವೀಕರಿಸುತ್ತಿಲ್ಲ. ಇವರನ್ನೆಲ್ಲ ನಂಬಿಕೊಂಡು ಯಾವ ರೀತಿ ರಾಜಕೀಯ ಮಾಡಬೇಕು ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ನಮ್ಮ ಸಮುದಾಯದ ಶಾಸಕರು ಹಾಗೂ ಸಚಿವರು ಒಂದೆಡೆ ಸೇರಿ ನಾವು ಸಭೆ ಮಾಡೋಣ ಅಂತ ಹೇಳುವುದಕ್ಕೆ ಪ್ರಯತ್ನಪಟ್ಟೆ ಆದರೆ ಸಹಕಾರ ಸಿಗಲಿಲ್ಲ. ಫೋನ್ ಸ್ವೀಕರಿಸಲಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದರೂ 7 ಜನ ಸಚಿವರು ಮಾತನಾಡುತ್ತಿಲ್ಲ. ಹೀಗಾಗಿ ಇವರು ರಾಜೀನಾಮೆ ಕೊಡಬೇಕು. ಇನ್ನು ನಾಳೆ ಮಠಾಧೀಶರು ಹಾಗೂ ನಮ್ಮ ಸಮಾಜದವರ ನಮ್ಮನ್ನು ಕೇಳಿದರೆ ಏನು ಹೇಳಬೇಕು. ಎಲ್ಲಾ ಸಮುದಾಯದವರೂ ಬೇಕು ನಮ್ಮ ಸಮುದಾಯದವರೂ ಬೇಕು. ಆಯಾ ಸಮುದಾಯದ ನಾಯಕರು ಅಂತ ಮಾಡಿರುತ್ತಾರೆ ಮುಂದೆ ವೋಟ್ ಕೇಳುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.












Click it and Unblock the Notifications