ಏಳು ಜಿಲ್ಲೆಗಳಲ್ಲಿ 7 ಹೊಸ ವಿಶ್ವವಿದ್ಯಾಲಯ ಸ್ಥಾಪನೆ: ವಿಧೇಯಕ ಅಂಗೀಕಾರ
ಬೆಂಗಳೂರು, ಸೆಪ್ಟಂಬರ್ 22: ಪ್ರಸಕ್ತ ವಿಧಾನ ಮಂಡಲ ಅಧಿವೇಶನದ ಬುಧವಾರದ ಕಲಾಪದಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಮಸೂದೆ -2022 ಅನ್ನು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು. ಇದರೊಂದಿಗೆ ರಾಜ್ಯದಲ್ಲಿ ಹೊಸದಾಗಿ ಎಂಟು ವಿಶ್ವವಿದ್ಯಾಲಯಗಳು ಸ್ಥಾಪನೆ ಆಗಲಿವೆ.
ರಾಜ್ಯದಲ್ಲಿ ಸದ್ಯ 25 ಖಾಸಗಿ ಮತ್ತು 11 ಡೀಮ್ಡ್ ವಿಶ್ವವಿದ್ಯಾಲಯ ಸೇರಿದಂತೆ ಒಟ್ಟು 69 ವಿಶ್ವವಿದ್ಯಾಲಯಗಳಿವೆ. ಈ ಮಸೂದೆ ಅಂಗೀಕಾರದಿಂದ ಮುಂದಿನ ದಿನಗಳಲ್ಲಿ ಹಾವೇರಿ, ಬೀದರ್, ಚಾಮರಾಜನಗರ, ಕೊಡಗು, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಹೊಸ ವಿಶ್ವವಿದ್ಯಾಲಯವನ್ನು ಸರ್ಕಾರ ಸ್ಥಾಪಿಸಲಿದೆ. ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿರುವ ಏಕೀಕೃತ ಪದವಿ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವಥ್ ನಾರಾಯಣ ಹೇಳಿದರು.
ಇದಕ್ಕೂ ಮೊದಲ ವಿಧೇಯಕ ಮಂಡಿಸಿದ ಅವರು, 22 ವರ್ಷಗಳಲ್ಲಿ ಈ ಕಾಯಿದೆ ಮೊದಲ ಬಾರಿಗೆ ತಿದ್ದುಪಡಿಗೆ ಒಳಗಾಗಿದೆ. ಬದಲಾದ ಸನ್ನಿವೇಶ, ವಾಸ್ತವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿ ಜಿಲ್ಲೆಯಲ್ಲು ಸಹ ವಿಶ್ವವಿದ್ಯಾಲಯ ನಿರ್ಮಿಸಲಾಗುವುದು. ಸರ್ಕಾರ ಉನ್ನತ ಶಿಕ್ಷಣದಲ್ಲಿ ಸಬಲೀಕರಣ ಮತ್ತು ಸಮಾನತೆಯನ್ನು ಖಚಿತಪಡಿಸಲಿದೆ ಎಂದು ಅವರು ಭರವಸೆ ನೀಡಿದರು.

ವಿಶ್ವವಿದ್ಯಾಲಯಗಳ ಸ್ಥಾಪನೆಯ ಅಂದಾಜು ವೆಚ್ಚ ಕುರಿತು ಪ್ರಸ್ತಾಪಿಸಿದ ಅಶ್ವಥ್ ನಾರಾಯಣ್, ರಾಜ್ಯ ಸರ್ಕಾರ ವಿವಿ ಸ್ಥಾಪನೆಗೆ ಆರಂಭಿಕವಾಗಿ 14 ಕೋಟಿ ರೂ. ವ್ಯಯಿಸುತ್ತದೆ. ನಂತರ ಪ್ರತಿ ವಿಶ್ವವಿದ್ಯಾಲಯಕ್ಕೆ ವರ್ಷಕ್ಕೆ 2ಕೋಟಿ ರೂ. ಮೀಸಲಿಡಲಿದ್ದು, ಪ್ರತಿ ಜಿಲ್ಲೆಯಲ್ಲೂ ಒಂದು ವಿಶ್ವವಿದ್ಯಾನಿಲಯವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಗೆ ಅನುಗುಣವಾಗಿರಲಿದೆ ಎಂದರು.
ಹೊಸ ವಿವಿ ಸ್ಥಾಪನೆಯಲ್ಲಿ 2 ಜಿಲ್ಲೆ ಹೆಸರಿಲ್ಲ:
ಮಸೂದೆ ಮಂಡನೆ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಸದನದಲ್ಲಿ ಶಾಸಕರಿಂದ ತೀವ್ರವಾದ ಪ್ರತಿಕ್ರಿಯೆಗಳು ಕೇಳಿಬಂದವು. ಹೊಸ ವಿಶ್ವವಿದ್ಯಾಲಯ ಸ್ಥಾಪನೆಯಲ್ಲಿ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಹೊರಗಿಡಲಾಗಿದೆ ಏಕೆ? ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನಿಸಿದರು. ಅಲ್ಲದೇ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯಗಳ ಗುಣಮಟ್ಟ ಕುಸಿಯುತ್ತಿದೆ. ಹೊಸ ವಿಶ್ವವಿದ್ಯಾಲಯ ಹುಟ್ಟುಹಾಕಲು ಮೊದಲು ಹಾಲಿ ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಣದ ಗುಣಮಟ್ಟ, ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಸಮಗ್ರ ಸುಧಾರಣೆಗೆ ಸರ್ಕಾರ ಗಮನಹರಿಸಬೇಕೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸ್ಪೀಕರ್ ಸೂಚಿಸಿದರು.

ಶಿಕ್ಷಣದ ಗುಣಮಟ್ಟ ಸುಧಾರಿಸಲು ಸಲಹೆ
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ರಾಜಕೀಯ ಲಾಭ ಪಡೆಯಲು ಈ ನಿರ್ಧಾರ ಮಾಡಲಾಗಿದೆ. 14 ಕೋಟಿ ರೂ.ನಲ್ಲಿ ವಿಶ್ವವಿದ್ಯಾಲಯ ಹೇಗೆ ಸ್ಥಾಪಿಸಬಹುದು? ಎಂದರು. ಪೂರ್ಣಪ್ರಮಾಣದ ವಿಶ್ವವಿದ್ಯಾನಿಲಯ ಸ್ಥಾಪಿಸಲು 100 ಕೋಟಿ ರೂ.ಗಿಂತ ಹೆಚ್ಚು ಹಣದ ಅಗತ್ಯವಿದೆ ಎಂದು ಸೂಚಿಸಿದ ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ ಹೇಳಿದರು. ಹೊಸ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿ ಇನ್ನಷ್ಟು ಶೋಚನೀಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಶಾಸಕ ಯು.ಟಿ.ಖಾದರ್, ಈಶ್ವರ ಖಂಡ್ರೆ ಸೇರಿದಂತೆ ಹಲವು ಶಾಸಕರು ಅಸ್ತಿತ್ವದಲ್ಲಿರುವ ವಿಶ್ವವಿದ್ಯಾನಿಲಯಗಳ ಶಿಕ್ಷಣದ ಗುಣಮಟ್ಟ ಸುಧಾರಿಸಿ. ಇರುವ ಸಮಸ್ಯೆಗಳನ್ನು ಪರಿಹರಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications