ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಪರೇಷನ್ ಕಮಲ : ತಿಳಿಯಬೇಕಾದ 7 ಪ್ರಮುಖ ಸಂಗತಿಗಳು

|
Google Oneindia Kannada News

ಬೆಂಗಳೂರು, ಜನವರಿ 16 : 'ಆಪರೇಷನ್ ಕಮಲ' ಕಳೆದ ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಪದ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಳ್ಳಲಿದೆಯೇ? ಎಂದು ರಾಜ್ಯದಲ್ಲಿ ಬಿಸಿ-ಬಿಸಿ ಚರ್ಚೆ ನಡೆಯುತ್ತಿದೆ.

ಮೂರು ದಿನಗಳಿಂದ ಇದ್ದ ಅಸ್ಪಷ್ಟ ಚಿತ್ರಣ ಬುಧವಾರ ಸಂಜೆಯ ಹೊತ್ತಿಗೆ ಸ್ಪಷ್ಟ ಸ್ವರೂಪ ಪಡೆದಿದೆ. ಕರ್ನಾಟಕ ಸರ್ಕಾರ ಸುಭದ್ರವಾಗಿದೆ. ಆಪರೇಷನ್ ಕಮಲದ ಪ್ರಯತ್ನ ವಿಫಲಗೊಂಡಿದ್ದು, ಬಿಜೆಪಿ ಮ್ಯಾಜಿಕ್ ನಂಬರ್ ತಲುಪಲು ನಡೆಸಿದ ಪ್ರಯತ್ನ ಕೈ ಕೊಟ್ಟಿದೆ.

ಸಮ್ಮಿಶ್ರ ಸರ್ಕಾರ ಉಳಿಸಲು ಕಾಂಗ್ರೆಸ್‌ನ 5 ತಂತ್ರಗಳು!ಸಮ್ಮಿಶ್ರ ಸರ್ಕಾರ ಉಳಿಸಲು ಕಾಂಗ್ರೆಸ್‌ನ 5 ತಂತ್ರಗಳು!

ಮಂಗಳವಾರ ರಾಣೆಬೆನ್ನೂರು ಕ್ಷೇತ್ರದ ಶಾಸಕ ಆರ್.ಶಂಕರ್, ಮುಳುಬಾಗಿಲು ಕ್ಷೇತ್ರದ ಶಾಸಕ ಎಚ್.ನಾಗೇಶ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ್ದರು. ಆದರೆ, ಅವರು ಬೆಂಗಳೂರಿಗೆ ಆಗಮಿಸಿ ರಾಜ್ಯಪಾಲರಿಗೆ ಪತ್ರ ನೀಡಿಲ್ಲ.

ನಮ್ಮ ಸರ್ಕಾರದ ಶಕ್ತಿ ತೋರಿಸುತ್ತೇವೆ : ಡಿ.ಕೆ.ಶಿವಕುಮಾರ್ನಮ್ಮ ಸರ್ಕಾರದ ಶಕ್ತಿ ತೋರಿಸುತ್ತೇವೆ : ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬುಧವಾರ ನಿರಾಳರಾಗಿದ್ದಾರೆ. ಬಿಜೆಪಿ ತನ್ನ ಶಾಸಕರನ್ನು ಗುರುಗ್ರಾಮದಲ್ಲಿಟ್ಟಿದೆ. ಆದರೆ, ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ ತಲುಪಲು ವಿಫಲವಾಗಿದೆ. ಆಪರೇಷನ್ ಕಮಲದ ಬಗ್ಗೆ ತಿಳಿಯಬೇಕಾದ 7 ಸಂಗತಿಗಳು ಇಲ್ಲಿವೆ.....

ನಾಲ್ವರು ಸಚಿವರ ರಾಜೀನಾಮೆಗೆ ರಾಹುಲ್ ಗಾಂಧಿ ಸೂಚನೆ?ನಾಲ್ವರು ಸಚಿವರ ರಾಜೀನಾಮೆಗೆ ರಾಹುಲ್ ಗಾಂಧಿ ಸೂಚನೆ?

ಆಪರೇಷನ್ ಕಮಲ

ಆಪರೇಷನ್ ಕಮಲ

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲು ತೀರ್ಮಾನಿಸಿದವು. ಆದರೆ, ರಾಜ್ಯಪಾಲರ ಮೂಲಕ ಸರ್ಕಾರ ರಚನೆ ಮಾಡಲು ಬಿಜೆಪಿ ಅವಕಾಶ ಪಡೆದುಕೊಂಡಿತು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲು ಸಾಧ್ಯವಾಗದೇ ರಾಜೀನಾಮೆ ನೀಡಿದರು.

ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕ

ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಬಹುಮತ ಪಡೆಯಲು ಶಾಸಕರನ್ನು ಸೆಳೆಯಲು ಮುಂದಾದರು. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ರೆಸಾರ್ಟ್‌ಗೆ ಕರೆದುಕೊಂಡು ಹೋಗಲಾಯಿತು. ಡಿ.ಕೆ.ಶಿವಕುಮಾರ್ ಅವರು ಉಭಯ ಪಕ್ಷಗಳ ಶಾಸಕರನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ದೇಶದ ಗಮನ ಸೆಳೆದರು.

ಮ್ಯಾಜಿಕ್ ನಂಬರ್

ಮ್ಯಾಜಿಕ್ ನಂಬರ್

ಇದು ಕೇವಲ ಅಂಕಿ ಸಂಖ್ಯೆ ಲೆಕ್ಕ. ಕರ್ನಾಟಕದ 15ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 80, ಜೆಡಿಎಸ್ 37, ಕೆಪಿಜೆಪಿ 1, ಬಿಎಸ್‌ಪಿ 1, ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಜಯಗಳಿಸಿದರು. ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 113.

ಆಪರೇಷನ್ ಕಮಲ ಹೊಸದಲ್ಲ

ಆಪರೇಷನ್ ಕಮಲ ಹೊಸದಲ್ಲ

2008ರ ಚುನಾವಣೆಯಲ್ಲಿ ಬಿಜೆಪಿ 110 ಸ್ಥಾನಗಳೊಂದಿಗೆ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಹುಮತಕ್ಕೆ 3 ಸ್ಥಾನ ಕಡಿಮೆ ಆಯಿತು. ಆರು ಪಕ್ಷೇತರ ಶಾಸಕರ ಸಹಾಯದಿಂದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು.

ಕಾಂಗ್ರೆಸ್‌ನ ಮೂರು, ಜೆಡಿಎಸ್‌ನ ನಾಲ್ವರು ಶಾಸಕರನ್ನು ಬಿಜೆಪಿ ಆಪರೇಷನ್ ಕಮಲದ ಮೂಲಕ ಸೆಳೆಯಿತು. ಗಣಿಧಣಿ ಜನಾರ್ದನ ರೆಡ್ಡಿ ಅವರು ಈ ತಂತ್ರದ ಹಿಂದಿದ್ದರು. ಉಪ ಚುನಾವಣೆ ನಡೆದಾಗ ಬಿಜೆಪಿ 5 ಕ್ಷೇತ್ರಗಳಲ್ಲಿ ಜಯಗಳಿಸಿತು.

ಮತ್ತೆ ಆಪರೇಷನ್ ಕಮಲ

ಮತ್ತೆ ಆಪರೇಷನ್ ಕಮಲ

2018ರ ಚುನಾವಣೆಯಲ್ಲಿ 104 ಸ್ಥಾನಗಳನ್ನು ಗಳಿಸಿದರೂ ಬಿಜೆಪಿಗೆ ಅಧಿಕಾರ ಸಿಗಲಿಲ್ಲ. ಪಕ್ಷ ಪುನಃ ಆಪರೇಷನ್ ಕಮಲಕ್ಕೆ ಕೈ ಹಾಕಲಿದೆ ಎಂಬ ಸುದ್ದಿಗಳು ಹಬ್ಬಿದವು. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ತಂತ್ರಗಳಿಂದಾಗಿ ಬಿಜೆಪಿಗೆ ಹಿನ್ನಡೆ ಉಂಟಾಯಿತು. ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು.

ಲೋಕಸಭೆ ಚುನಾವಣೆ 2019

ಲೋಕಸಭೆ ಚುನಾವಣೆ 2019

ತನ್ನ ಶಾಸಕರನ್ನು ಗುರುಗ್ರಾಮದ ರೆಸಾರ್ಟ್‌ನಲ್ಲಿಟ್ಟು ಬಿಜೆಪಿ ಲೋಕಸಭಾ ಚುನಾವಣೆಗೆ ಮುನ್ನ ಮತ್ತೊಂದು ಸುತ್ತಿನ ಆಪರೇಷನ್ ಕಮಲಕ್ಕೆ ಕೈ ಹಾಕಿತು. ಮುಂಬೈನಲ್ಲಿದ್ದ ಇಬ್ಬರು ಪಕ್ಷೇತರ ಶಾಸಕರು ಮೈತ್ರಿ ಸರ್ಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದರು. ಆದರೆ, ಉಳಿದ ಶಾಸಕರನ್ನು ಸೆಳೆಯುವುದು ಸಾಧ್ಯವಾಗಲಿಲ್ಲ. ಸದ್ಯಕ್ಕೆ ಬಿಜೆಪಿ ತಂತ್ರಗಳು ವಿಫಲವಾಗಿದೆ.

ಈಗ ಸಾಧ್ಯವೇ ಇಲ್ಲ

ಈಗ ಸಾಧ್ಯವೇ ಇಲ್ಲ

ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಬೆಂಬಲ ನೀಡಿದರೂ ಮ್ಯಾಜಿಕ್ ನಂಬರ್ ತಲುಪಲು ಬಿಜೆಪಿಗೆ ಇನ್ನೂ 12 ಶಾಸಕರ ಅಗತ್ಯವಿದೆ. ಪಕ್ಷಾಂತರ ನಿಷೇಧ ಕಾಯ್ದೆ ಆಂತಕದಲ್ಲಿರುವ ಶಾಸಕರು ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇಲ್ಲ. ಬಿಜೆಪಿ ಜೆಡಿಎಸ್‌ನಿಂದ 19, ಕಾಂಗ್ರೆಸ್‌ನಿಂದ 40 ಶಾಸಕರನ್ನು ಸೆಳೆಯಬೇಕು. ಇದು ಸಾಧ್ಯವೇ ಇಲ್ಲದ ಮಾತಾಗಿದೆ.

English summary
Will Congress-JD(S) alliance Karnataka government lost majority?. Here are the 8 things you need to know about Operation Kamala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X