ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ: ಸುಧಾಕರ್

|
Google Oneindia Kannada News

ಬೆಂಗಳೂರು, ಮೇ 08: ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎಂದು ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್‌ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಶನಿವಾರ ಹೇಳಿದ್ದಾರೆ.

ಸಂಪೂರ್ಣ ಲಾಕ್‌ಡೌನ್‌ವೊಂದೇ ಅಸ್ತ್ರ : ಡಾ. ಸುಧಾಕರ್ ಸಂಪೂರ್ಣ ಲಾಕ್‌ಡೌನ್‌ವೊಂದೇ ಅಸ್ತ್ರ : ಡಾ. ಸುಧಾಕರ್

ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ 70%ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಉಳಿದ 30% ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು. ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

70 Percent Of The Available Stock Of Covishield Will Be Utilised To Vaccinate 45 Plus Age Group

'ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.30 ರಷ್ಟನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್‌ ನೀಡಲು ಬಳಸಲಾಗುತ್ತದೆ' ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 48781 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 18,38,885ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಒಂದರಲ್ಲೇ 21376 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 9,08,462ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣಗಳು ವರದಿಯಾಗಿದೆ.

Recommended Video

18-44 ವಯಸ್ಸಿನವರು ಲಸಿಕೆಗೆ ಆನ್‌ಲೈನ್‌ಲ್ಲಿ ನೋಂದಣಿ ಮಾಡದಿದ್ದರೆ ಲಸಿಕಾ ಕೇಂದ್ರಕ್ಕೆ ತೆರಳಲು ಅನುಮತಿ ಇಲ್ಲಾ... | Oneindia Kannada

English summary
Minister K Sudhakar said that 70% of the available stock of Covishield will be utilised to vaccinate 45+ who are due for 2nd dose and rest 30% will be used to vaccinate 45+ seeking 1st dose.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X