ದಾವಣಗೆರೆಯಲ್ಲಿ ಸಿದ್ದರಾಮೋತ್ಸವ, 7000 ಬಸ್‌ಗಳು ಬುಕ್ಕಿಂಗ್‌

ಬೆಂಗಳೂರು,ಆಗಸ್ಟ್‌. 1: ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯಲಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಯ ಕಾರ್ಯಕ್ರಮ 'ಸಿದ್ದರಾಮೋತ್ಸವ'ಕ್ಕೆ ರಾಜ್ಯದಾದ್ಯಂತ ಭಾನುವಾರದವರೆಗೆ ಒಟ್ಟು 7,000 ಬಸ್​ಗಳು ಬುಕ್ ಆಗಿವೆ.

ಸಿದ್ದರಾಮಯ್ಯ ಅವರ ಅಭಿಮಾನಿಗಳು ಆಗಸ್ಟ್ 3ರಂದು ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಕಾರ್ಯಕ್ರಮಕ್ಕಾಗಿ ಬರುವ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಇನ್ನೂ ನೂರಾರು ಬಸ್‌ಗಳನ್ನು ಕಾಯ್ದಿರಿಸುವ ನಿರೀಕ್ಷೆಯಿದೆ. ದಾವಣಗೆರೆ ಕಾಂಗ್ರೆಸ್‌ನಿಂದ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ 6 ಸಾವಿರ ಕಾರ್ಯಕರ್ತರನ್ನು ಕರೆದೊಯ್ಯಲು ಸಿದ್ಧತೆ ನಡೆಸಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 90, ಹಾವೇರಿಯಲ್ಲಿ 90, ಬಾಗಲಕೋಟೆ ಜಿಲ್ಲೆಯಲ್ಲಿ 50 ಮತ್ತು ಗದಗ ಜಿಲ್ಲೆಯಲ್ಲಿ 85 ಬಸ್‌ಗಳು ಈಗಾಗಲೇ ಬುಕ್ ಆಗಿವೆ. ಇದರಿಂದ ಕರ್ನಾಟಕದ ಎಲ್ಲ ಸಾರಿಗೆ ಸಂಸ್ಥೆಗಳಿಗೆ ಅಂದಾಜು 39 ಲಕ್ಷ ರೂ.ಗಳ ಆದಾಯ ಬರುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೇರುವ ಸಾಧ್ಯತೆ ಹೆಚ್ಚಿರುವುದರಿಂದ ಜನಪ್ರತಿನಿಧಿಗಳು ಮತ್ತು ಪಕ್ಷದ ಕಾರ್ಯಕರ್ತರು ಶಕ್ತಿ ಪ್ರದಶರ್ನಕ್ಕೆ ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಸೋಮವಾರ ಸಿದ್ದರಾಮೋತ್ಸವ ಕಾರ್ಯಕ್ರಮ ಸಮಿತಿಯೊಂದಿಗೆ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ. ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಅಂತಿಮ ರೂಪುರೇಷೆ ಬಗ್ಗೆ ಸಮಿತಿಯೊಂದಿಗೆ ಚರ್ಚೆ ನಡೆಯಲಿದೆ. ಕರ್ನಾಟಕದ ವಿವಿಧ ಭಾಗಗಳಿಂದ ಸಿದ್ದರಾಮೋತ್ಸವಕ್ಕೆ ಆಗಮಿಸುವವರಿಗೆ ಊಟ, ವಸತಿ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಯಲಿದೆ. ಸಿದ್ದರಾಮೋತ್ಸವದಲ್ಲಿ ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಭಾಗವಹಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಯಲಿದೆ.

ಸಿಕ್ಕ ಸಿಕ್ಕ ವಾಹನಗಳಲ್ಲಿ ಬರುವ ನಿರೀಕ್ಷೆ

ಸಿಕ್ಕ ಸಿಕ್ಕ ವಾಹನಗಳಲ್ಲಿ ಬರುವ ನಿರೀಕ್ಷೆ

ಸಿದ್ದರಾಮಯ್ಯ ಪ್ರಸ್ತುತ ಶಾಸಕರಾಗಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಅಧಿಕ ಸಂಖ್ಯೆಯ ಕಾರ್ಯಕರ್ತರು ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಭಾಗವಹಿಸುವ ನಿರೀಕ್ಷೆ ಇದೆ. ಬಸ್‌ಗಳ ಕೊರತೆಯಿಂದಾಗಿ ಕ್ರಷರ್ ಲಾರಿ, ಟೆಂಪೋ ಸೇರಿದಂತೆ ಸಿಕ್ಕ ಸಿಕ್ಕ ವಾಹನಗಳಲ್ಲಿಯೂ ಜಿಲ್ಲೆಯ ಹಳ್ಳಿಗಳ ಜನರು ಬಂದು ಸೇರುವ ನಿರೀಕ್ಷೆಯಿದೆ. ಅಲ್ಲದೆ ಕಾಂಗ್ರೆಸ್​ನವರು ತಮ್ಮದೇ ಸ್ವಂತ ವಾಹನದಲ್ಲಿ ಆಪ್ತರೊಂದಿಗೆ ತೆರಳಲು ಸಿದ್ಧರಾಗಿದ್ದಾರೆ.

ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಕಾರ್ಯಕ್ರಮ

ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಕಾರ್ಯಕ್ರಮ

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಇನ್ನೂ ಎರಡು ದಿನ ಬಾಕಿ ಇದ್ದು, ಈಗಾಗಲೇ ಹಲವು ಮಂದಿ ಸಾರಿಗೆ ಸಂಸ್ಥೆ ಬಸ್ ಬುಕ್ಕಿಂಗ್ ಮಾಡಲು ವಿಚಾರಿಸುತ್ತಿದ್ದಾರೆ. ವಿವಿಧೆಡೆಯಿಂದ ಇನ್ನಷ್ಟು ಬಸ್​ಗಳು ಬುಕ್ ಆಗುವ ಸಾಧ್ಯತೆ ಇದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ 3ರಂದು ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಕಳೆದ ಎರಡು ವಾರಗಳಿಂದ ರಾತ್ರಿ ಹಗಲು ವೇದಿಕೆ ಸಿದ್ದವಾಗುತ್ತಿದೆ. ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಶಾಮಿಯಾನ, ಕುರ್ಚಿ, ಊಟದ ಸಿದ್ಧತೆ ಕೆಲಸಗಳು ಭರ್ಜರಿಯಾಗಿ ಸಾಗಿವೆ.

ಡಿಕೆ ಶಿವಕುಮಾರ್, ಖರ್ಗೆ, ಸೇರಿದಂತೆ ಹಲವರು ಭಾಗಿ

ಡಿಕೆ ಶಿವಕುಮಾರ್, ಖರ್ಗೆ, ಸೇರಿದಂತೆ ಹಲವರು ಭಾಗಿ

ಆಗಸ್ಟ್ 3ರಂದು ಈ ಕಾರ್ಯಕ್ರದಮ ಮುಖ್ಯ ವೇದಿಕೆಯಲ್ಲಿ 2 ಗಂಟೆಗಳ ಕಾರ್ಯಕ್ರಮವಿರುತ್ತದೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಬಿಕೆ ಹರಿಪ್ರಸಾದ್ ಸೇರಿದಂತೆ ರಾಜ್ಯದ ಎಲ್ಲಾ ಕಾಂಗ್ರೆಸ್ ವರಿಷ್ಠರು, ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಹಲವೆಡೆ ಬೃಹತ್‌ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ.

ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

ಸಿದ್ದರಾಮೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸುವುದರಿಂದ ದಾವಣಗೆರೆ ನಗರದ ಎಲ್ಲಾ ಲಾಡ್ಜ್, ಹೋಟೆಲ್‌ಗಳು ನಿಗದಿಯಾಗಿವೆ. ರಾಜ್ಯದ ಹಲವು ಭಾಗಗಳಿಂದ ಬರುವ ನಾಯಕರು, ಭದ್ರತಾ ಕಾರ್ಯಕ್ಕೆ ಬರುವ ರಕ್ಷಣಾ ಸಿಬ್ಬಂದಿ, ಮಾಧ್ಯಮ ಸಿಬ್ಬಂದಿ ಉಳಿದುಕೊಳ್ಳಲು ಕಾಂಗ್ರೆಸ್ ಮುಖಂಡರೇ ಎಲ್ಲಾ ಹೋಟೆಲ್ ಲಾಡ್ಜ್​​ಗಳನ್ನು ನಿಗದಿ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಸೇರುವ ಹಿನ್ನೆಲೆಯಲ್ಲಿ ಈಗಾಗಲೇ ದಾವಣಗೆರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+