ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಒಂದೇ ದಿನ 7012 ಮಂದಿಗೆ ಕೊರೊನಾವೈರಸ್

|
Google Oneindia Kannada News

ಬೆಂಗಳೂರು, ಅಕ್ಟೋಬರ್.18: ಕರ್ನಾಟಕದಲ್ಲಿ ಒಂದೇ ದಿನ 7012 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 765586ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ ಮಹಾಮಾರಿ ಕೊರೊನಾವೈರಸ್ ಸೋಂಕಿಗೆ 51 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 10478ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಭಾರತದಲ್ಲಿ 24 ಗಂಟೆಯಲ್ಲಿ 61,871 ಹೊಸ ಕೋವಿಡ್ ಪ್ರಕರಣಭಾರತದಲ್ಲಿ 24 ಗಂಟೆಯಲ್ಲಿ 61,871 ಹೊಸ ಕೋವಿಡ್ ಪ್ರಕರಣ

ಕೊರೊನಾವೈರಸ್ ಒಟ್ಟು 765586 ಸೋಂಕಿತ ಪ್ರಕರಣಗಳ ಪೈಕಿ 645825 ಸೋಂಕಿತರು ಗುಣಮುಖರಾಗಿದ್ದಾರೆ. 109264 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 8344 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

7012 New Coronavirus Cases Reported in Karnataka Today, State Tally Rise to 765586

ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?:

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 21876 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 83191 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 105067 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 66,67,777 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆವಾರು ಕೊವಿಡ್-19 ಕೇಸ್?:

ರಾಜ್ಯದಲ್ಲಿ ಒಟ್ಟು 7012 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 138, ಬಳ್ಳಾರಿ 171, ಬೆಳಗಾವಿ 71, ಬೆಂಗಳೂರು ಗ್ರಾಮಾಂತರ 228, ಬೆಂಗಳೂರು 3535, ಬೀದರ್ 7, ಚಾಮರಾಜನಗರ 60, ಚಿಕ್ಕಬಳ್ಳಾಪುರ 86, ಚಿಕ್ಕಮಗಳೂರು 119, ಚಿತ್ರದುರ್ಗ 226, ದಕ್ಷಿಣ ಕನ್ನಡ 183, ದಾವಣಗೆರೆ 84, ಧಾರವಾಡ 135, ಗದಗ 53, ಹಾಸನ 257, ಹಾವೇರಿ 24, ಕಲಬುರಗಿ 67, ಕೊಡಗು 72, ಕೋಲಾರ 71, ಕೊಪ್ಪಳ 35, ಮಂಡ್ಯ 308, ಮೈಸೂರು 404, ರಾಯಚೂರು 44, ರಾಮನಗರ 32, ಶಿವಮೊಗ್ಗ 103, ತುಮಕೂರು 99, ಉಡುಪಿ 129, ಉತ್ತರ ಕನ್ನಡ 92, ವಿಜಯಪುರ 95, ಯಾದಗಿರಿ 24 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

Political Popcorn with Lavanya : Dr BL Shankar, ಈಗ ಆಗಿರೋದೆ ಸಾಕು ಇನ್ಮೇಲೆ ಚುನಾವಣೆಗೆ ನಿಲ್ಲಲ್ಲಾ!?! Part2

English summary
7012 New Coronavirus Cases Reported in Karnataka Today, State Tally Rise to 765586.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X