ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತರಿಗಿಂತ ಗುಣಮುಖರೇ ಹೆಚ್ಚು!

ಬೆಂಗಳೂರು, ಅಕ್ಟೋಬರ್.17: ರಾಜ್ಯದಲ್ಲಿ ಒಂದೇ ದಿನ 7184 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 758874ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲೇ ಮಹಾಮಾರಿ ಕೊರೊನಾವೈರಸ್ ಸೋಂಕಿಗೆ 71 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 10427ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾವೈರಸ್ ಒಟ್ಟು 758874 ಸೋಂಕಿತ ಪ್ರಕರಣಗಳ ಪೈಕಿ 637481 ಸೋಂಕಿತರು ಗುಣಮುಖರಾಗಿದ್ದಾರೆ. 110647 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 8893 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

7184 New Coronavirus Cases Reported in Karnataka Today, State Tally Rise to 758874

ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?:

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 24174 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 76842 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 101016 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 65,62,710 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಯಾವ ಜಿಲ್ಲೆಗಳಲ್ಲಿ ಎಷ್ಟು ಕೊವಿಡ್-19 ಕೇಸ್?:

ರಾಜ್ಯದಲ್ಲಿ ಒಟ್ಟು 7184 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 152, ಬಳ್ಳಾರಿ 189, ಬೆಳಗಾವಿ 298, ಬೆಂಗಳೂರು ಗ್ರಾಮಾಂತರ 220, ಬೆಂಗಳೂರು 3371, ಬೀದರ್ 10, ಚಾಮರಾಜನಗರ 49, ಚಿಕ್ಕಬಳ್ಳಾಪುರ 124, ಚಿಕ್ಕಮಗಳೂರು 129, ಚಿತ್ರದುರ್ಗ 80, ದಕ್ಷಿಣ ಕನ್ನಡ 172, ದಾವಣಗೆರೆ 41, ಧಾರವಾಡ 99, ಗದಗ 49, ಹಾಸನ 220, ಹಾವೇರಿ 61, ಕಲಬುರಗಿ 40, ಕೊಡಗು 77, ಕೋಲಾರ 78, ಕೊಪ್ಪಳ 65, ಮಂಡ್ಯ 192, ಮೈಸೂರು 501, ರಾಯಚೂರು 54, ರಾಮನಗರ 25, ಶಿವಮೊಗ್ಗ 129, ತುಮಕೂರು 281, ಉಡುಪಿ 210, ಉತ್ತರ ಕನ್ನಡ 123, ವಿಜಯಪುರ 69, ಯಾದಗಿರಿ 76 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಒಂದೇ ಓವರ್ ನಲ್ಲಿ 2 wicket ತೆಗೆದ Yuzvendra Chahal | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+