ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 72ನೇ ಗಣರಾಜ್ಯೋತ್ಸವ ಸಂಭ್ರಮ

By Lekhaka
|
Google Oneindia Kannada News

ಜನವರಿ 26: ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ದೇಶದಾದ್ಯಂತ ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿ 72ನೇ ಗಣರಾಜ್ಯೋತ್ಸವವನ್ನು ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ.

ದಾವಣಗೆರೆಯ ಗಣರಾಜ್ಯೋತ್ಸವ

ದಾವಣಗೆರೆಯ ಗಣರಾಜ್ಯೋತ್ಸವ

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂಸದ ಜಿ.ಎಂ.ಸಿದ್ದೇಶ್ವರ್, ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಗಣರಾಜ್ಯೋತ್ಸವದ ದಿನ ರೈತರ ಪ್ರತಿಭಟನೆ ದುರದೃಷ್ಟಕರ; ಹೆಬ್ಬಾರ್ಗಣರಾಜ್ಯೋತ್ಸವದ ದಿನ ರೈತರ ಪ್ರತಿಭಟನೆ ದುರದೃಷ್ಟಕರ; ಹೆಬ್ಬಾರ್

ಚಿತ್ರದುರ್ಗ ಗಣರಾಜ್ಯೋತ್ಸವ

ಚಿತ್ರದುರ್ಗ ಗಣರಾಜ್ಯೋತ್ಸವ

ಕೋಟೆನಾಡು ಚಿತ್ರದುರ್ಗದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನೆರವೇರಿಸಿ, ಭಾಷಣ ಮಾಡಿದರು. ಜಿಲ್ಲಾಧಿಕಾರಿ, ಶಾಸಕರು, ಸಂಸದರು, ಪೊಲೀಸ್ ಇಲಾಖೆ ಸೇರಿದಂತೆ ಇತರರು ಭಾಗವಹಿಸಿದ್ದರು.

ಉತ್ತರ ಕನ್ನಡ ಗಣರಾಜ್ಯೋತ್ಸವ

ಉತ್ತರ ಕನ್ನಡ ಗಣರಾಜ್ಯೋತ್ಸವ

ಕಾರವಾರದ ಜಿಲ್ಲಾ ಕ್ರೀಡಾಂಗಣದಲ್ಲಿ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ನೆರವೇರಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಭಾಷಣ ಮಾಡಿದರು. ಉತ್ತರ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆ ಸೇರಿದಂತೆ ಇತರರು ಭಾಗವಹಿಸಿದ್ದರು.

72ನೇ ಗಣರಾಜ್ಯೋತ್ಸವ: ರಾಜ್ಯಪಾಲ ವಿಆರ್ ವಾಲಾರ ಮಾತುಗಳು72ನೇ ಗಣರಾಜ್ಯೋತ್ಸವ: ರಾಜ್ಯಪಾಲ ವಿಆರ್ ವಾಲಾರ ಮಾತುಗಳು

ಮೈಸೂರು ಗಣರಾಜ್ಯೋತ್ಸವ

ಮೈಸೂರು ಗಣರಾಜ್ಯೋತ್ಸವ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರಿಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 72ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಬಳಿಕ ಸಂದೇಶ ನೀಡಿದ ಅವರು ಗಣರಾಜ್ಯೋತ್ಸವವು ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾಗಿದೆ ಎಂದರು. ಜಿಲ್ಲಾಧಿಕಾರಿ, ಮೈಸೂರು ಮೇಯರ್, ಶಾಸಕರು, ಪೊಲೀಸ್ ಇಲಾಖೆ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ಉಡುಪಿ ಗಣರಾಜ್ಯೋತ್ಸವ

ಉಡುಪಿ ಗಣರಾಜ್ಯೋತ್ಸವ

ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ನೂತನ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರು ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಬಳಿಕ ಗೃಹ ರಕ್ಷಕ ದಳದಿಂದ ಗೌರವ ವಂದನೆ ಸ್ವೀಕರಿಸಿದರು. ವಿವಿಧ ಪೊಲೀಸ್ ತಂಡಗಳಿಂದ ಧ್ವಜಾರೋಹಣದ ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು. ಜಿಲ್ಲಾಡಳಿತ, ಶಾಸಕರು, ಪೊಲೀಸ್ ಇಲಾಖೆಯವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

ಬೆಳಗಾವಿ ಗಣರಾಜ್ಯೋತ್ಸವ

ಬೆಳಗಾವಿ ಗಣರಾಜ್ಯೋತ್ಸವ

72ನೇ ಗಣರಾಜ್ಯೋತ್ಸವ ಅಂಗವಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪಥಸಂಚಲನ ಪರಿವೀಕ್ಷಣೆ ಮಾಡಿದ ಸಚಿವ ಜಾರಕಿಹೊಳಿ, ಬಳಿಕ ವೇದಿಕೆಯತ್ತ ಆಗಮಿಸಿದರು.

ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಐಜಿಪಿ ರಾಘವೇಂದ್ರ ಸುಹಾನರ, ಕಮೀಷನರ್ ಕೆ. ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ ಭಾಗಿಯಾಗಿ ಸಾಥ್ ನೀಡಿದರು.

Recommended Video

ಬೆಂಗಳೂರು: ನೆಲಮಂಗಲದಲ್ಲಿ ಅನ್ನದಾತರ ಬೃಹತ್ ಪ್ರೊಟೆಸ್ಟ್..! | Oneindia Kannada

English summary
This time the 72nd Republic Day was celebrated in all the Karnataka District Centers under the Chaired of the Minister in charge of the District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X